ತಿರುಪತ್ತೂರು: ಮೂವರು ವಿದ್ಯಾರ್ಥಿಗಳು ಕ್ಲಾಸ್ ರೂಮ್ ನಲ್ಲಿ ಶಿಕ್ಷಕರ ಜೊತೆಗೆ ಅಸಭ್ಯವಾಗಿ ನಡೆದುಕೊಂಡಿರುವ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ತಮಿಳುನಾಡಿನ ತಿರುಪತ್ತೂರು ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, ಘಟನೆಗೆ ಸಂಬಂಧಿಸಿದ ವಿಡಿಯೊ ವೈರಲ್ ಆಗಿದೆ. ವಿದ್ಯಾರ್ಥಿಗಳ ವರ್ತನೆಗೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.
ಮಾದನೂರ್ ಎಂಬ ಗ್ರಾಮದ ಸರ್ಕಾರಿ ಶಾಲೆ ಹಾಗೂ ಪಿಯು ಕಾಲೇಜಿನಲ್ಲಿ ಪಾಠ ನಡೆಯುತ್ತಿರುವಾಗ ಸಂಜಯ್ ಗಾಂಧಿ ಎನ್ನುವ ಶಿಕ್ಷಕರೊಬ್ಬರು 12 ನೇ ತರಗತಿ ಮಕ್ಕಳಿಗೆ ಪಾಠ ಮಾಡುತ್ತಿದ್ದರು. ಈ ವೇಳೆ ಮಾರಿ ಎನ್ನುವ ಹುಡುಗ ನಿದ್ದೆ ಮಾಡುತ್ತಿದ್ದದ್ದನ್ನು ಗಾಂಧಿ ಪ್ರಶ್ನಿಸಿದ್ದರು.
ಇದಕ್ಕೆ ಕುಪಿತಗೊಂಡ ಮಾರಿ ಹಾಗೂ ಆತನ ಸಂಗಡಿಗರು ಕ್ಲಾಸ್ ರೂಂನಲ್ಲೇ ತನ್ನ ಬಟ್ಟೆ ಬಿಚ್ಚಿ ಶಿಕ್ಷಕ ಗಾಂಧಿ ಅವರಿಗೆ ಧಮ್ಕಿ ಹಾಕಿದ್ದಾನೆ. ಅಲ್ಲದೇ ಹಲ್ಲೆಗೂ ಯತ್ನಿಸಿದ್ದಾನೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5