nammatumakuru

    Subscribe to Updates

    Get the latest creative news from FooBar about art, design and business.

    What's Hot

    ದಲಿತರಿಂದ ಮಲಗುಂಡಿ ಸ್ವಚ್ಛಗೊಳಿಸಿದ ಕೃತ್ಯ: ಡಿಸಿಎಂ ಪರಮೇಶ್ವರ್ ರಾಜೀನಾಮೆಗೆ ಬಿಜೆಪಿ ಎಸ್ ಸಿ ಮೋರ್ಚಾ ಒತ್ತಾಯ

    June 30, 2026

    ಸಮಸ್ಯೆಯನ್ನು ಆಲಿಸಲು ಪ್ರತಿನಿತ್ಯ ಪೋತಿ ಖಾತೆ ಅಭಿಯಾನ: ಜಿಲ್ಲಾಧಿಕಾರಿ ಶುಭ ಕಲ್ಯಾಣ್

    June 30, 2026

    ಹೊಸ ಮೊಬೈಲ್ ಆಪ್ ನಿಂದ ಗೊಂದಲ: ಹಳೇ ರಸಗೊಬ್ಬರ ಮಾರಾಟ ವ್ಯವಸ್ಥೆ ಮುಂದುವರಿಸಲು ಕೃಷಿ ಪರಿಕರ ಮಾರಾಟಗಾರರ ಒತ್ತಾಯ

    June 30, 2026
    Facebook Twitter Instagram
    ಟ್ರೆಂಡಿಂಗ್
    • ದಲಿತರಿಂದ ಮಲಗುಂಡಿ ಸ್ವಚ್ಛಗೊಳಿಸಿದ ಕೃತ್ಯ: ಡಿಸಿಎಂ ಪರಮೇಶ್ವರ್ ರಾಜೀನಾಮೆಗೆ ಬಿಜೆಪಿ ಎಸ್ ಸಿ ಮೋರ್ಚಾ ಒತ್ತಾಯ
    • ಸಮಸ್ಯೆಯನ್ನು ಆಲಿಸಲು ಪ್ರತಿನಿತ್ಯ ಪೋತಿ ಖಾತೆ ಅಭಿಯಾನ: ಜಿಲ್ಲಾಧಿಕಾರಿ ಶುಭ ಕಲ್ಯಾಣ್
    • ಹೊಸ ಮೊಬೈಲ್ ಆಪ್ ನಿಂದ ಗೊಂದಲ: ಹಳೇ ರಸಗೊಬ್ಬರ ಮಾರಾಟ ವ್ಯವಸ್ಥೆ ಮುಂದುವರಿಸಲು ಕೃಷಿ ಪರಿಕರ ಮಾರಾಟಗಾರರ ಒತ್ತಾಯ
    • ಇಂದಿರಾ ಗಾಂಧಿ ವಸತಿ ಶಾಲೆ ದುರವಸ್ಥೆ: ಅಧಿಕಾರಿಗಳ ನಿರ್ಲಕ್ಷ್ಯ ಕಂಡು ವಿದ್ಯಾರ್ಥಿಗಳು, ಪೋಷಕರು ಕಂಗಾಲು
    • ನಮ್ಮ ತುಮಕೂರು ಫಲಶ್ರುತಿ: ಕಾರ್ಮಿಕರಿಂದ ಶೌಚಗುಂಡಿ ಸ್ವಚ್ಛಗೊಳಿಸಿದ ಪ್ರಕರಣ: ಸಫಾಯಿ ಕರ್ಮಚಾರಿಗಳ ಆಯೋಗ ಸ್ಥಳಕ್ಕೆ ಭೇಟಿ
    • ಗಾಂಜಾ ಮಾರಾಟ ಜಾಲ: ಇಬ್ಬರು ಆರೋಪಿಗಳಿಗೆ 4 ವರ್ಷ ಕಠಿಣ ಜೈಲು ಶಿಕ್ಷೆ
    • ತುರುವೇಕೆರೆ: ವಿದ್ಯುತ್ ಖಾಸಗಿಕರಣ ತಿರಸ್ಕರಿಸಲು ಒತ್ತಾಯಿಸಿ ರೈತ ಸಂಘದಿಂದ ಮನವಿ
    • ನಾಡಪ್ರಭು ಕೆಂಪೇಗೌಡರದು ಜಾತ್ಯತೀತ ಆಡಳಿತ: ಶಾಸಕ ಎಂ.ಟಿ.ಕೃಷ್ಣಪ್ಪ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಏ.26ಕ್ಕೆ ಕೊರಟಗೆರೆಗೆ  ಜನತಾ ಜಲಧಾರೆ ರಥ | ರೈತರ ಸಹಕಾರ ಅಗತ್ಯ: ಮಾಜಿ ಶಾಸಕ ಪಿ.ಆರ್.ಸುಧಾಕರಲಾಲ್
    ಕೊರಟಗೆರೆ April 25, 2022

    ಏ.26ಕ್ಕೆ ಕೊರಟಗೆರೆಗೆ  ಜನತಾ ಜಲಧಾರೆ ರಥ | ರೈತರ ಸಹಕಾರ ಅಗತ್ಯ: ಮಾಜಿ ಶಾಸಕ ಪಿ.ಆರ್.ಸುಧಾಕರಲಾಲ್

    By adminApril 25, 2022No Comments2 Mins Read
    jds

    Provided by
    Provided by

    ಕೊರಟಗೆರೆ:  ಕರುನಾಡಿನ 94 ನದಿಗಳಿಂದ ಜಲ ಸಂಗ್ರಹಣೆಯ ಜನತಾ ಜಲಧಾರೆ ರಥಯಾತ್ರೆಯು 184ವಿಧಾನಸಭಾ ಕ್ಷೇತ್ರಗಳಲ್ಲಿ ಸಂಚಾರ ನಡೆಸುತ್ತಿದೆ. ಕೊರಟಗೆರೆ ಕ್ಷೇತ್ರದಲ್ಲಿ ನಡೆಯುವ ಜನತಾ ಜಲಧಾರೆ ರಥಯಾತ್ರೆ ಸಮಾರಂಭ ಯಶಸ್ವಿಗೆ ಜೆಡಿಎಸ್ ಪಕ್ಷದ ಮುಖಂಡರು, ಕಾರ್ಯಕರ್ತರು ಮತ್ತು ರೈತ ಬಾಂಧವರ ಸಹಕಾರ ಅಗತ್ಯವಾಗಿದೆ ಎಂದು ಮಾಜಿ ಶಾಸಕ ಪಿ.ಆರ್.ಸುಧಾಕರಲಾಲ್ ತಿಳಿಸಿದರು.

    ಕೊರಟಗೆರೆ ಪಟ್ಟಣದ ನಿರೀಕ್ಷಣಾ ಮಂದಿರದಲ್ಲಿ ಜೆಡಿಎಸ್ ಪಕ್ಷದ ವತಿಯಿಂದ ಸೋಮವಾರ ಏರ್ಪಡಿಸಲಾಗಿದ್ದ ಸುದ್ದಿಗೋಷ್ಟಿಯನ್ನು ಉದ್ದೇಶಿಸಿ ಮಾತನಾಡಿದ ಅವರು,  ಕೊರಟಗೆರೆ ಕ್ಷೇತ್ರಕ್ಕೆ ಏ.26ರ ಮಂಗಳವಾರ ಜನತಾ ಜಲಧಾರೆ ರಥಯಾತ್ರೆ ಆಗಮಿಸಿ 6 ಹೋಬಳಿಯಲ್ಲಿ ಸಂಚಾರ ನಡೆಸಲಿದೆ. ಏ.27ರ ಬುಧವಾರ ಪಪಂ ಮುಂಭಾಗ ವೇದಿಕೆ ಕಾರ್ಯಕ್ರಮ ನಡೆಯಲಿದೆ.

    ಜನತಾ ಜಲಧಾರೆ ರಥಯಾತ್ರೆ ಕಾರ್ಯಕ್ರಮಕ್ಕೆ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ, ಮಾಜಿ ಸಿಎಂ ಕುಮಾರಸ್ವಾಮಿ, ಜೆಡಿಎಸ್ ರಾಜ್ಯಾಧ್ಯಕ್ಷ ಇಬ್ರಾಹಿಂ ಸೇರಿದಂತೆ ತುಮಕೂರು ಜಿಲ್ಲೆಯ ಎಲ್ಲಾ ನಾಯಕರು ಆಗಮಿಸಲಿದ್ದಾರೆ. ಕೊರಟಗೆರೆ ಕ್ಷೇತ್ರದ ಜೆಡಿಎಸ್ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಆಗಮಿಸಿ ಸಮಾರಂಭ ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಿದರು.

    ತುಮಕೂರು ಜೆಡಿಎಸ್ ಪ್ರಧಾನ ಕಾರ್ಯದರ್ಶಿ ಮಹಾಲಿಂಗಪ್ಪ ಮಾತನಾಡಿ,  ಕರ್ನಾಟಕದಲ್ಲಿ ಜೆಡಿಎಸ್ ಪಕ್ಷ ಅಧಿಕಾರಕ್ಕೆ ಬಂದ ಮರುಕ್ಷಣವೇ ಜನತಾ ಜಲಧಾರೆ ಕಾರ್ಯಕ್ರಮ ಜಾರಿಗೆ ಬರಲಿದೆ. ಜನತಾ ಜಲಧಾರೆ ಯೋಜನೆ ಮತ್ತು ಮಹತ್ವ ತಿಳಿಸುವುದೇ ರಥಯಾತ್ರೆಯ ಉದ್ದೇಶವಾಗಿದೆ. ಕಲ್ಪತರು ಜಿಲ್ಲೆಯಲ್ಲಿ ಕಾರ್ಯಕ್ರಮ ಯಶಸ್ವಿ ಆಗಲಿದೆ ಎಂದು ತಿಳಿಸಿದರು.


    Provided by
    Provided by

    ಕೊರಟಗೆರೆ ಜೆಡಿಎಸ್ ಪಕ್ಷದ ವಕ್ತಾರ ತುಂಬಾಡಿ ಲಕ್ಷ್ಮೀಶ್  ಮಾತನಾಡಿ ಜನತಾ ಜಲಧಾರೆ ರಥಯಾತ್ರೆಯು ಕರ್ನಾಟಕದ 184ಕ್ಷೇತ್ರದಲ್ಲಿ ಸಂಚಾರ ನಡೆಸಿ ಜಲಮೂಲದ ಅರಿವು ಮೂಡಿಸುವುದೇ ಕಾರ್ಯಕ್ರಮದ ಉದ್ದೇಶವಾಗಿದೆ. ರೈತಾಪಿವರ್ಗಕ್ಕೆ ಅನುಕೂಲ ಆಗುವಂತಹ ಜನತಾ ಜಲಧಾರೆ ರಥಯಾತ್ರೆ ಕಾರ್ಯಕ್ರಮಕ್ಕೆ ಕೊರಟಗೆರೆ ಕ್ಷೇತ್ರದ ಪ್ರತಿಯೊಬ್ಬರ ಸಹಕಾರ ಅಗತ್ಯವಾಗಿ ಬೇಕಾಗಿದೆ ಎಂದು ಮನವಿ ಮಾಡಿದರು.

    ಸುದ್ದಿಗೋಷ್ಟಿಯಲ್ಲಿ ಜೆಡಿಎಸ್ ಕಾರ್ಯಧ್ಕಕ್ಷ ನರಸಿಂಹರಾಜು, ವಕ್ತಾರ ಟಿ.ಸಿ.ಲಕ್ಷ್ಮೀಶ್,  ಕಾರ್ಯದರ್ಶಿ ಲಕ್ಷ್ಮಣ್, ಪ್ರಧಾನ ಕಾರ್ಯದರ್ಶಿ ಮಹಾಲಿಂಗಪ್ಪ, ಮಾಜಿ ತಾಪಂ ಸದಸ್ಯ ಸಾಕರಾಜು, ಪಪಂ ಸದಸ್ಯ ಲಕ್ಷ್ಮಿನಾರಾಯಣ, ಮುಖಂಡರಾದ ವೀರಕ್ಯಾತರಾಯ,  ಪಾರುಕ್ ಅಹಮ್ಮದ್, ಗಿರೀಶ್, ಲಕ್ಷ್ಮಿಕಾಂತ್, ನಂಜಪ್ಪ, ಸಿದ್ದಪ್ಪ ಸೇರಿದಂತೆ ಇತರರು ಇದ್ದರು.

    ವರದಿ: ಮಂಜುಸ್ವಾಮಿ.ಎಂ.ಎನ್., ಕೊರಟಗೆರೆ.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5

    admin
    • Website

    Related Posts

    ಕೊರಟಗೆರೆ: 10,016 ಮಕ್ಕಳಿಗೆ ಪೋಲಿಯೋ ಲಸಿಕಾ ಗುರಿ: ಡಾ.ಜ್ಯೋತ್ಸ್ನಾ ರೆಡ್ಡಿ ಕರೆ

    June 29, 2026

    ಕೊರಟಗೆರೆ: ಜೂ.28 ರಿಂದ ಪೋಲಿಯೋ ಲಸಿಕೆ ಕಾರ್ಯಕ್ರಮ

    June 25, 2026

    ಮಾದಕ ವ್ಯಸನ ಮುಕ್ತ ಸಮಾಜ ನಿರ್ಮಾಣ ಪ್ರತಿಯೊಬ್ಬ ನಾಗರಿಕನ ಕರ್ತವ್ಯ: ಪಿಎಸ್‌ ಐ ತೀರ್ಥೇಶ್

    June 25, 2026

    Leave A Reply Cancel Reply

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ದಲಿತರಿಂದ ಮಲಗುಂಡಿ ಸ್ವಚ್ಛಗೊಳಿಸಿದ ಕೃತ್ಯ: ಡಿಸಿಎಂ ಪರಮೇಶ್ವರ್ ರಾಜೀನಾಮೆಗೆ ಬಿಜೆಪಿ ಎಸ್ ಸಿ ಮೋರ್ಚಾ ಒತ್ತಾಯ

    June 30, 2026

    ತುಮಕೂರು: ನಗರದ ಕೆಇಬಿ ಇಂಜಿನಿಯರ್ಸ್ ಅಸೋಸಿಯೇಷನ್ ಆವರಣದಲ್ಲಿ ಅಮಾಯಕ ದಲಿತ ಕಾರ್ಮಿಕರಿಂದ ಮಲಗುಂಡಿ ಸ್ವಚ್ಛ ಮಾಡಿಸಿದ ಹೇಯ ಕೃತ್ಯ ನಡೆದಿದೆ.…

    ಸಮಸ್ಯೆಯನ್ನು ಆಲಿಸಲು ಪ್ರತಿನಿತ್ಯ ಪೋತಿ ಖಾತೆ ಅಭಿಯಾನ: ಜಿಲ್ಲಾಧಿಕಾರಿ ಶುಭ ಕಲ್ಯಾಣ್

    June 30, 2026

    ಹೊಸ ಮೊಬೈಲ್ ಆಪ್ ನಿಂದ ಗೊಂದಲ: ಹಳೇ ರಸಗೊಬ್ಬರ ಮಾರಾಟ ವ್ಯವಸ್ಥೆ ಮುಂದುವರಿಸಲು ಕೃಷಿ ಪರಿಕರ ಮಾರಾಟಗಾರರ ಒತ್ತಾಯ

    June 30, 2026

    ಇಂದಿರಾ ಗಾಂಧಿ ವಸತಿ ಶಾಲೆ ದುರವಸ್ಥೆ: ಅಧಿಕಾರಿಗಳ ನಿರ್ಲಕ್ಷ್ಯ ಕಂಡು ವಿದ್ಯಾರ್ಥಿಗಳು, ಪೋಷಕರು ಕಂಗಾಲು

    June 30, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.