ಕುಣಿಗಲ್: ಪಟ್ಟಣದ ಎಪಿಎಂಸಿ ಕಚೇರಿ ಆವರಣದ ರಾಗಿ ಖರೀದಿ ಕೇಂದ್ರದಲ್ಲಿ ಸೋಮವಾರ ಪ್ರಾರಂಭವಾಗಬೇಕಾಗಿದ್ದ ನೋಂದಣಿ ಪ್ರಕ್ರಿಯೆಯು ತಾಂತ್ರಿಕ ಕಾರಣದಿಂದ ವಿಳಂಬವಾದ ಪರಿಣಾಮ ರೈತರು ಆಕ್ರೋಶ ವ್ಯಕ್ತಪಡಿಸಿದರು.
ರೈತರು, ರಾಷ್ಟ್ರೀಯ ಹೆದ್ದಾರಿ 48ಕ್ಕೆ ಕಲ್ಲುಗಳನ್ನು ಅಡ್ಡಲಾಗಿ ಇಟ್ಟು ಪ್ರತಿಭಟನೆ ನಡೆಸಿದರು. ಬೆಂಗಳೂರು– ಮಂಗಳೂರು ರಸ್ತೆಯಲ್ಲಿ ರೈತರು ಜಮಾವಣೆಗೊಂಡಿದ್ದರಿಂದ ಎರಡೂ ಕಡೆಯಲ್ಲಿ ವಾಹನಗಳು ಸಾಲುಗಟ್ಟಿ ನಿಂತಿದ್ದರಿಂದ ಸಾರ್ವಜನಿಕರು ಪರದಾಡುವಂತಾಗಿತ್ತು.
ರೈತರ ಆಕ್ರೋಶದ ಹಿನ್ನೆಲೆಯಲ್ಲಿ ಶಾಸಕ ಡಾ.ರಂಗನಾಥ್ ಮತ್ತು ಮಾಜಿ ಶಾಸಕ ಬಿ.ಬಿ. ರಾಮಸ್ವಾಮಿಗೌಡ ಪ್ರತ್ಯೇಕವಾಗಿ ಸಭೆ ನಡೆಸಿದರು. ಬಳಿಕ ಅಧಿಕಾರಿಗಳೊಂದಿಗೆ ಚರ್ಚಿಸಿ ತಾತ್ಕಾಲಿಕ ಪರಿಹಾರದ ವ್ಯವಸ್ಥೆ ಮಾಡಿದರು.
ರೈತರು ಭಾನುವಾರ ರಾತ್ರಿಯಿಂದಲೇ ಕೇಂದ್ರಕ್ಕೆ ಬಂದು ಸರತಿ ಸಾಲಿನಲ್ಲಿ ನಿಂತಿದ್ದರು. ಮಧ್ಯಾಹ್ನವಾದರೂ ತಾಂತ್ರಿಕ ಕಾರಣಗಳಿಂದ ನೋಂದಣಿ ಕಾರ್ಯ ಪ್ರಾರಂಭವಾಗುವ ಲಕ್ಷಣ ಕಂಡುಬರಲಿಲ್ಲ. ಮತ್ತೊಂದೆಡೆ ಕುಡಿಯುವ ನೀರು ಮತ್ತು ನೆರಳಿನ ವ್ಯವಸ್ಥೆ ಇಲ್ಲದೆ ಬಿಸಿಲಿನಲ್ಲಿ ಬಳಲಿದ ರೈತರು, ಅಧಿಕಾರಶಾಹಿಯ ಕಾರ್ಯವೈಖರಿಗೆ ಅಸಮಾಧಾನ ವ್ಯಕ್ತಪಡಿಸಿದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5