ತುರುವೇಕೆರೆ: ಕ್ಯಾಂಟರ್ ಲಾರಿ ಹಾಗೂ ಇನೋವಾ ಕಾರಿನ ನಡುವೆ ನಡೆದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ತುರುವೇಕೆರೆ ತಾಲೂಕಿನ ದೊಡ್ಡಶೆಟ್ಟಿಕೆರೆ ಬಳಿ ನಡೆದಿದೆ.
ಕಾರು ಚಾಲಕ ಸೇರಿದಂತೆ ಇಬ್ಬರು ಅಪಘಾತದಲ್ಲಿ ಮೃತಪಟ್ಟವರು ಎಂದು ತಿಳಿದು ಬಂದಿದ್ದು, ಮೃತರು ಆನೆಕಲ್ ಮೂಲದವರು ಎಂದು ತಿಳಿದು ಬಂದಿದೆ.
ತುರುವೇಕೆರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಘಟನೆಯಲ್ಲಿ ಕಾರಿನಲ್ಲಿದ್ದ ಇನ್ನಿಬ್ಬರಿಗೆ ಗಾಯಗಳಾಗಿದ್ದು, ಅವರನ್ನು ಬೆಳ್ಳೂರು ಕ್ರಾಸ್ ನ ಆದಿಚುಂಚನಗಿರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5