nammatumakuru

    Subscribe to Updates

    Get the latest creative news from FooBar about art, design and business.

    What's Hot

    ದೇವರು ಬಂದಂತೆ ನಾಟಕವಾಡಿ ದಲಿತ ನವದಂಪತಿಗೆ ಅವಮಾನ:  ಒಬ್ಬನ ಸೆರೆ, ಹಲವರ ವಿರುದ್ಧ ಪ್ರಕರಣ ದಾಖಲು

    February 22, 2026

    ಮಧುಗಿರಿ: ಬಸ್ ನಿಲ್ದಾಣಗಳಲ್ಲಿ ತಂಗುದಾಣಗಳ ಕೊರತೆ; ಪ್ರಯಾಣಿಕರ ಪರದಾಟ

    February 21, 2026

    ಮಧುಗಿರಿ: ಪಡಿತರ ತರಲು ತೆರಳುತ್ತಿದ್ದ ವೇಳೆ ಕಾರು ಡಿಕ್ಕಿಯಾಗಿ ಮಹಿಳೆ ಸಾವು

    February 21, 2026
    Facebook Twitter Instagram
    ಟ್ರೆಂಡಿಂಗ್
    • ದೇವರು ಬಂದಂತೆ ನಾಟಕವಾಡಿ ದಲಿತ ನವದಂಪತಿಗೆ ಅವಮಾನ:  ಒಬ್ಬನ ಸೆರೆ, ಹಲವರ ವಿರುದ್ಧ ಪ್ರಕರಣ ದಾಖಲು
    • ಮಧುಗಿರಿ: ಬಸ್ ನಿಲ್ದಾಣಗಳಲ್ಲಿ ತಂಗುದಾಣಗಳ ಕೊರತೆ; ಪ್ರಯಾಣಿಕರ ಪರದಾಟ
    • ಮಧುಗಿರಿ: ಪಡಿತರ ತರಲು ತೆರಳುತ್ತಿದ್ದ ವೇಳೆ ಕಾರು ಡಿಕ್ಕಿಯಾಗಿ ಮಹಿಳೆ ಸಾವು
    • ಶೇ.99ರಷ್ಟು ಕಠಿಣ ಪರಿಶ್ರಮದಿಂದ ಸಾಧನೆ ಕಟ್ಟಿಟ್ಟ ಬುತ್ತಿ: ನ್ಯಾ.ರಾಜೇಶ್ ಎನ್.ಹೊಸಮನೆ ಅಭಿಮತ
    • ಔರಾದ್: ಸಂತಪುರ ಗುರುಕುಲ ಶಾಲೆಯಲ್ಲಿ ರಾಷ್ಟ್ರೀಯ ಬಾಯಿ ಹಲ್ಲು ತಪಾಸಣೆ ಶಿಬಿರ
    • ಪಂಚ ಗ್ಯಾರೆಂಟಿ, ‘ಲಂಚ ಗ್ಯಾರೆಂಟಿ’: ಸತೀಶ್ ಜಾರಕಿಹೊಳಿ ಹೇಳಿಕೆಯಲ್ಲೇ ಭ್ರಷ್ಟಾಚಾರಕ್ಕೆ ಸಾಕ್ಷಿ: ಬಿ.ವೈ.ವಿಜಯೇಂದ್ರ ವಾಗ್ದಾಳಿ
    • ವಿಕಲಚೇತನರಿಗೆ ರಾಜಕೀಯ ಮೀಸಲಾತಿಗೆ ಒತ್ತಾಯಿಸಿ ಪ್ರತಿಭಟನೆ: ಫೆ.22ರಂದು ತುಮಕೂರಿನಲ್ಲಿ ರ‍್ಯಾಲಿ
    • ಹತ್ತೇನಹಳ್ಳಿ ಮಾರಮ್ಮನಿಗೆ ಹೊಸ ತಾಳಿ ಸಮರ್ಪಣೆ: ಭಕ್ತರಿಗೆ ಸಂಭ್ರಮ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಪರಮೇಶಣ್ಣಗೆ ರಾಹುಲ್ ಗಾಂಧಿ ಚಿಂತೆ, ಕುಮಾರಣ್ಣನಿಗೆ ರೈತರ ಚಿಂತೆ: ಜನತಾ ಜಲಧಾರೆ ರಥಯಾತ್ರೆಯಲ್ಲಿ  ಸಿಎಂ ಇಬ್ರಾಹಿಂ
    ಕೊರಟಗೆರೆ April 28, 2022

    ಪರಮೇಶಣ್ಣಗೆ ರಾಹುಲ್ ಗಾಂಧಿ ಚಿಂತೆ, ಕುಮಾರಣ್ಣನಿಗೆ ರೈತರ ಚಿಂತೆ: ಜನತಾ ಜಲಧಾರೆ ರಥಯಾತ್ರೆಯಲ್ಲಿ  ಸಿಎಂ ಇಬ್ರಾಹಿಂ

    By adminApril 28, 2022No Comments2 Mins Read
    jaladhare

    ಕೊರಟಗೆರೆ:  3 ಬಾರಿ ಜಿಪಂ ಸದಸ್ಯ, 2013ರಲ್ಲಿ ಶಾಸಕನಾಗಿ 5ವರ್ಷ ಸೇವೆ ಸಲ್ಲಿಸಿರುವ ಬಡಜನರ ಒಡನಾಡಿ,  2018ರ ವಿಧಾನಸಭೆ ಚುನಾವಣೆಯಲ್ಲಿ ಸೋತರು ಸಹ ಬಡಜನರ ಸೇವೆಯನ್ನು ಮಾಡುತ್ತೀರುವ ಪಿ.ಆರ್.ಸುಧಾಕರಲಾಲ್ ಕೊರಟಗೆರೆ ಕ್ಷೇತ್ರದ ನಿಜವಾದ ಜನನಾಯಕ ಎಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಬಣ್ಣಿಸಿದರು.

    ಕೊರಟಗೆರೆ ಪಟ್ಟಣದ ಪಪಂ ಆವರಣದಲ್ಲಿ ಜಾತ್ಯಾತೀತ ಜನತಾದಳ ಪಕ್ಷದ ವತಿಯಿಂದ ಬುಧವಾರ ಏರ್ಪಡಿಸಲಾಗಿದ್ದ ಜನತಾ ಜಲಧಾರೆ ರಥಯಾತ್ರೆಯ ವೇದಿಕೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.


    Provided by
    Provided by

    ಕರ್ನಾಟಕ ರಾಜ್ಯದ ರೈತಾಪಿವರ್ಗ ಸಂಕಷ್ಟದ ಸ್ಥಿತಿಗೆ ತಲುಪಿದ್ದಾರೆ. ಎತ್ತಿನಹೊಳೆ ಯೋಜನೆಯ ಕಾಮಗಾರಿ ತೂಗಿಗತ್ತಿ ಮೇಲೆ ನಿಂತಿದೆ. ಕರ್ನಾಟಕ ರಾಜ್ಯದ ರೈತರಿಗೆ ಸಮರ್ಪಕ ನೀರಾವರಿ ಯೋಜನೆ ರೂಪಿಸುವುದೇ ಜನತಾ ಜಲಧಾರೆಯ ಉದ್ದೇಶ. ರೈತಾಪಿವರ್ಗ ಮತ್ತು ಬಡಜನರ ಅಭಿವೃದ್ದಿಗೆ ಸದಾ ಚಿಂತಿಸುವ ಪ್ರಾದೇಶಿಕ ಪಕ್ಷಕ್ಕೆ ನಿಮ್ಮೇಲ್ಲರ ಸಹಕಾರ ಇರಲಿ ಎಂದು ತಿಳಿಸಿದರು.

    ಕರ್ನಾಟಕದ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಮಾತನಾಡಿ ಕೊರಟಗೆರೆ ಕ್ಷೇತ್ರದ ಜನಸಾಮಾನ್ಯರ ಧ್ವನಿ ನಮ್ಮ ಪಿ.ಆರ್.ಸುಧಾಕರಲಾಲ್. ಕಾಂಗ್ರೇಸ್ ನಾಯಕರ ಆಮಿಷ ಮತ್ತು ಒತ್ತಡಗಳಿಗೆ ಜೆಡಿಎಸ್ ಪಕ್ಷ ಮಣಿಯುವುದಿಲ್ಲ. 2023ರ ವಿಧಾನಸಭಾ ಚುನಾವಣೆಗೆ ಕೊರಟಗೆರೆ ಕ್ಷೇತ್ರದ ಜೆಡಿಎಸ್ ಪಕ್ಷದ ಅಭ್ಯರ್ಥಿ ಪಿ.ಆರ್.ಸುಧಾಕರಲಾಲ್ ಮಾತ್ರ. ಹೃದಯವಂತ ಜನಸೇವಕ ಪಿ.ಆರ್.ಸುಧಾಕರಲಾಲ್ ಮೇಲೆ ನಿಮ್ಮೆಲ್ಲರ ಆರ್ಶಿವಾದ ಇರಲಿ ಎಂದು ಹೇಳಿದರು.

    ಕರ್ನಾಟಕದ ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂಮಾತನಾಡಿ, ಪರಮೇಶಣ್ಣ ನಿಮಗೆ ದೆಹಲಿಯ ರಾಹುಲ್‌ ಗಾಂಧಿಯ ಚಿಂತೆ.. ನಮ್ಮ ಕುಮಾರಣ್ಣನಿಗೆ ಕರ್ನಾಟಕದ ರೈತರ ಚಿಂತೆ. ಕೊರಟಗೆರೆ ಕ್ಷೇತ್ರದಿಂದ ಪಿ.ಆರ್.ಸುಧಾಕರಲಾಲ್ 2023ರ ಚುನಾವಣೆಯಲ್ಲಿ ಶಾಸಕನಾಗಿ ಗೆಲ್ಲುವುದು ಖಚಿತ. ಸಮಾಜದ ಎಲ್ಲಾ ವರ್ಗದ ಜನತೆಯ ಪ್ರೀತಿವಿಶ್ವಾಸ ಗಳಿಸಿರುವ ನಮ್ಮೇಲ್ಲರ ಜನನಾಯಕ ಸುಧಾಕರ್‌ಗೆ ಜಯವಾಗಲಿ ಎಂದು ಶುಭಾ ಹಾರೈಸಿದರು.

    ಕೊರಟಗೆರೆ ಕ್ಷೇತ್ರದ ಮಾಜಿ ಶಾಸಕ ಪಿ.ಆರ್.ಸುಧಾಕರಲಾಲ್ ಮಾತನಾಡಿ, ಕರ್ನಾಟಕ ರಾಜ್ಯಕ್ಕೆ ಗ್ರಾಮವಾಸ್ತವ್ಯ ಮತ್ತು ಜನತಾ ದರ್ಶನ ಪರಿಚಯಿಸಿದ ಕರುನಾಡಿನ ಪ್ರಥಮ ಸಿಎಂ ನಮ್ಮ ಹೆಚ್.ಡಿ.ಕುಮಾರಸ್ವಾಮಿ. 25ಸಾವಿರ ಕೋಟಿ ರೈತರ ಸಾಲಮನ್ನಾ ಮಾಡಿದ ರೈತನಾಯಕ. ಕರ್ನಾಟಕದಲ್ಲಿ ಈಗ ಜಲತಾ ಜಲಧಾರೆಯ ಮೂಲಕ ನೀರಾವರಿ ಯೋಜನೆಯ ಅನುಷ್ಠಾನ ಮಾಡಿ ರೈತರ ಹೃದಯದಲ್ಲಿ ಅಂರ್ತಜಲ ಭಗೀರಥ ಆಗಲಿದ್ದಾರೆ ಎಂದು ತಿಳಿಸಿದರು.

    ಕೊರಟಗೆರೆ ಕ್ಷೇತ್ರದ 6 ಹೋಬಳಿಯಲ್ಲಿ ಜನತಾ ಜಲಧಾರೆ ರಥಯಾತ್ರೆ ಯಶಸ್ವಿಯಾಗಿ ಪಟ್ಟಣದಲ್ಲಿ ಇಂದು ವೇದಿಕೆ ಕಾರ್ಯಕ್ರಮ ಅದ್ದೂರಿಯಾಗಿ ನಡೆಯಿತು. ಕೊರಟಗೆರೆ ಪಟ್ಟಣದ ಸರಕಾರಿ ಬಸ್ ನಿಲ್ದಾಣದಿಂದ ಮುಖ್ಯರಸ್ತೆಯ ಮೂಲಕ ಪಪಂಯ ವೇದಿಕೆಗೆ ಮಾಜಿ ಸಿಎಂ ಕುಮಾರಸ್ವಾಮಿ ಮತ್ತು ಮಾಜಿ ಶಾಸಕ ಪಿ.ಆರ್.ಸುಧಾಕರಲಾಲ್ ಆಗಮಿಸಿದರು. ವೇದಿಕೆ ಕಾರ್ಯಕ್ರಮದಲ್ಲಿ 6 ಸಾವಿರಕ್ಕೂ ಅಧಿಕ ಜೆಡಿಎಸ್ ಮುಖಂಡರು ಮತ್ತು ಕಾರ್ಯಕರ್ತರು ಪಾಲ್ಗೊಂಡಿದ್ದರು.

    ವೇದಿಕೆಯಲ್ಲಿ ಯುವ ಜೆಡಿಎಸ್ ಘಟಕ, ಪಪಂಯ ಆಡಳಿತವರ್ಗ, ಅಲ್ಪಸಂಖ್ಯಾತ ಸಮುದಾಯ ಮತ್ತು ಯುವ ಕಾರ್ಯಕರ್ತರು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು, ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಮತ್ತು ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂಗೆ ಸನ್ಮಾನಿಸಿ ಗೌರವಿಸಿದರು.

    ಕಾರ್ಯಕ್ರಮದಲ್ಲಿ ಮಧುಗಿರಿ ಶಾಸಕ ವೀರಭದ್ರಯ್ಯ, ಎಂಎಲ್‌ಸಿ ತಿಪ್ಪೇಸ್ವಾಮಿ, ತುಮಕೂರು ಜೆಡಿಎಸ್ ಜಿಲ್ಲಾಧ್ಯಕ್ಷ ಅಂಜೀನಪ್ಪ, ಪ್ರಧಾನ ಕಾರ್ಯದರ್ಶಿ ಮಹಾಲಿಂಗಪ್ಪ, ಜಿಪಂ ಸದಸ್ಯರಾದ ಪ್ರೇಮಾ, ಶಿವರಾಮಯ್ಯ, ಜೆಡಿಎಸ್ ಕಾರ್ಯಧ್ಯಕ್ಷ ನರಸಿಂಹರಾಜು, ಯುವಧ್ಯಕ್ಷ ವೆಂಕಟೇಶ್, ಕಾರ್ಯದರ್ಶಿ ಲಕ್ಷ್ಮಣ್, ಪಪಂ ಅಧ್ಯಕ್ಷೆ ಕಾವ್ಯ, ಉಪಾಧ್ಯಕ್ಷೆ ಭಾರತಿ, ಸ್ಥಾಯಿ ಸಮಿತಿ ಅಧ್ಯಕ್ಷ ನಟರಾಜ್ ಸೇರಿದಂತೆ ಇತರರು ಇದ್ದರು.

    ವರದಿ: ಮಂಜುಸ್ವಾಮಿ.ಎಂ.ಎನ್  ಕೊರಟಗೆರೆ.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5

    admin
    • Website

    Related Posts

    ಕೊರಟಗೆರೆ ಪೊಲೀಸರಿಂದ ಭರ್ಜರಿ ಬೇಟೆ: ಅಂತಾರಾಜ್ಯ ಮೊಬೈಲ್ ಪೋನ್ ಕಳ್ಳರ ಬಂಧನ

    February 20, 2026

    ಎಸ್ ಎಸ್ ಎಲ್ ಸಿ ಪರೀಕ್ಷೆ : ವಿದ್ಯಾರ್ಥಿಗಳೊಂದಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸಂವಾದ

    February 19, 2026

    ಶ್ರೀ ಸಂತ ಸೇವಾಲಾಲ್ ರವರ ಆದರ್ಶ ತತ್ವ ಪಾಲಿಸಿ: ತಹಶೀಲ್ದಾರ್ ಕೆ.ಮಂಜುನಾಥ್

    February 19, 2026

    Leave A Reply Cancel Reply

    Our Picks

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ದೇವರು ಬಂದಂತೆ ನಾಟಕವಾಡಿ ದಲಿತ ನವದಂಪತಿಗೆ ಅವಮಾನ:  ಒಬ್ಬನ ಸೆರೆ, ಹಲವರ ವಿರುದ್ಧ ಪ್ರಕರಣ ದಾಖಲು

    February 22, 2026

    ತುರುವೇಕೆರೆ: ದೇವರು ಬಂದಂತೆ ನಾಟಕವಾಡಿ ನೂತನ ದಲಿತ ದಂಪತಿಯನ್ನು ಅವಮಾನಿಸಿ ದೇವಾಲಯದಿಂದ ಹೊರಕಳಿಸಿದ ಘಟನೆಗೆ ಸಂಬಂಧಿಸಿದಂತೆ  ಕೃತ್ಯ ನಡೆಸಿದ ವ್ಯಕ್ತಿ…

    ಮಧುಗಿರಿ: ಬಸ್ ನಿಲ್ದಾಣಗಳಲ್ಲಿ ತಂಗುದಾಣಗಳ ಕೊರತೆ; ಪ್ರಯಾಣಿಕರ ಪರದಾಟ

    February 21, 2026

    ಮಧುಗಿರಿ: ಪಡಿತರ ತರಲು ತೆರಳುತ್ತಿದ್ದ ವೇಳೆ ಕಾರು ಡಿಕ್ಕಿಯಾಗಿ ಮಹಿಳೆ ಸಾವು

    February 21, 2026

    ಶೇ.99ರಷ್ಟು ಕಠಿಣ ಪರಿಶ್ರಮದಿಂದ ಸಾಧನೆ ಕಟ್ಟಿಟ್ಟ ಬುತ್ತಿ: ನ್ಯಾ.ರಾಜೇಶ್ ಎನ್.ಹೊಸಮನೆ ಅಭಿಮತ

    February 21, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.