ಬೆಂಗಳೂರು, ಏ. 29: ಕರ್ನಾಟಕದ 545 ಪಿಎಸ್‌ಐಗಳ ನೇಮಕಾತಿ ಅಕ್ರಮಕ್ಕೆ ಸಂಬಂಧಿಸಿದಂತೆ ಪರೀಕ್ಷೆ ರದ್ದು ಮಾಡಿದ ನಿರ್ಧಾರವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಮರ್ಥನೆ ಮಾಡಿದ್ದಾರೆ.ದಾವಣಗೆರೆ ಜಿಲ್ಲೆಯ ಜಗಳೂರಿನಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಅವರು, ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಹಾಗೂ ಪಿಎಸ್ ಐ ನೇಮಕಾತಿ ಅಕ್ರಮದ ತನಿಖೆಯನ್ನು ಸಿಐಡಿಗೆ ವಹಿಸಿದ್ದೇವೆ.ಎಂದು ಬಸವರಾಜ ಬೊಮ್ಮಾಯಿ ತಿಳಿಸಿದರು.
ಪಿಎಸ್‌ಐ ನೇಮಕಾತಿ ಪರೀಕ್ಷೆ ಅಕ್ರಮಕ್ಕೆ ಸಂಬಂಧಿಸಿದಂತೆ ಆರಂಭದಲ್ಲಿ ಪ್ರಾಮಾಣಿಕವಾಗಿ ಪರೀಕ್ಷೆ ಬರೆದು ಆಯ್ಕೆಯಾದವರಿಗೆ ಯಾವುದೇ ಸಮಸ್ಯೆ ಆಗುವುದಿಲ್ಲ ಎಂದು ಸಿಎಂ ಭರವಸೆ ನೀಡಿದ್ದರು. ಇದೀಗ ಪಿಎಸ್‌ಐ ಅಕ್ರಮ ತನಿಖೆಯ ಹಂತದದ್ದು, ಗೃಹ ಸಚಿವ ಅರಗ ಜ್ಞಾನೇಂದ್ರ ಅವರು ಅಕ್ರಮ ಸಾಬೀತಾದ ಹಿನ್ನೆಲೆಯಲ್ಲಿ ಪಿಎಸ್‌ಐ ನೇಮಕಾತಿ ಪರೀಕ್ಷೆ ರದ್ದು ಪಡಿಸಿ ಮರು ಪರೀಕ್ಷೆ ನಡೆಸಲಾಗುವುದು ಎಂದು ಪ್ರಕಟಿಸಿದ್ದರು. ಸಿಎಂ ಬಸವರಾಜ ಬೊಮ್ಮಾಯಿ ಅವರೇ ಸ್ವತಃ ಪರೀಕ್ಷೆ ರದ್ದು ಪಡಿಸಿ ಮರು ಪರೀಕ್ಷೆಗೆ ಸೂಚಿಸಿದ ಹಿನ್ನೆಲೆಯಲ್ಲಿ ಪರೀಕ್ಷೆ ರದ್ದು ಮಾಡಲಾಗಿದೆ.
ಆದರೆ, ಪಿಎಸ್ ಐ ಪರೀಕ್ಷೆ ರದ್ದು ವಿಚಾರ ತಿಳಿಯುತ್ತಿದ್ದಂತೆ ಪಿಎಸ್ ಐ ಆಗಿ ನೇಮಕವಾಗದ ಆಕಾಂಕ್ಷಿಗಳು ಸಂಭ್ರಮಾಚರಣೆ ಮಾಡಿದ್ದಾರೆ. ನಾವು ಕೊಟ್ಟ ಸುಳಿವುನಿಂದ ಅಕ್ರಮ ತನಿಖೆ ತನಿಖೆ ನಡೆಸಿದ್ದು, ಗೃಹ ಸಚಿವರು ಹೇಳಿದಂತೆ ನಡೆದುಕೊಂಡಿದ್ದಾರೆ ಎಂದು ಹೇಳಿಕೆ ನೀಡಿದ್ದಾರೆ. ಇದರ ಮದ್ಯೆ ಪರೀಕ್ಷೆ ಬೇಕ- ಬೇಡ ಎಂಬುದರ ಬಗ್ಗೆ ಎರಡು ಬಣಗಳು ಸೃಷ್ಠಿಯಾಗಿದ್ದು ಗೊಂದಲ ಏರ್ಪಟ್ಟಿದೆ ಎನ್ನಲಾಗಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


