nammatumakuru

    Subscribe to Updates

    Get the latest creative news from FooBar about art, design and business.

    What's Hot

    ತುರುವೇಕೆರೆ: ವಿದ್ಯುತ್ ಖಾಸಗಿಕರಣ ತಿರಸ್ಕರಿಸಲು ಒತ್ತಾಯಿಸಿ ರೈತ ಸಂಘದಿಂದ ಮನವಿ

    June 30, 2026

    ನಾಡಪ್ರಭು ಕೆಂಪೇಗೌಡರದು ಜಾತ್ಯತೀತ ಆಡಳಿತ: ಶಾಸಕ ಎಂ.ಟಿ.ಕೃಷ್ಣಪ್ಪ

    June 29, 2026

    ಸಾರ್ವಜನಿಕ ದೂರು ಅರ್ಜಿಗಳನ್ನು ಸಮರ್ಪಕವಾಗಿ ವಿಲೇವಾರಿ ಮಾಡದೆ ಕರ್ತವ್ಯಲೋಪ | ಹೆಗ್ಗರೆ ಗ್ರಾ.ಪಂ. ಪಿಡಿಒ ಅಮಾನತು

    June 29, 2026
    Facebook Twitter Instagram
    ಟ್ರೆಂಡಿಂಗ್
    • ತುರುವೇಕೆರೆ: ವಿದ್ಯುತ್ ಖಾಸಗಿಕರಣ ತಿರಸ್ಕರಿಸಲು ಒತ್ತಾಯಿಸಿ ರೈತ ಸಂಘದಿಂದ ಮನವಿ
    • ನಾಡಪ್ರಭು ಕೆಂಪೇಗೌಡರದು ಜಾತ್ಯತೀತ ಆಡಳಿತ: ಶಾಸಕ ಎಂ.ಟಿ.ಕೃಷ್ಣಪ್ಪ
    • ಸಾರ್ವಜನಿಕ ದೂರು ಅರ್ಜಿಗಳನ್ನು ಸಮರ್ಪಕವಾಗಿ ವಿಲೇವಾರಿ ಮಾಡದೆ ಕರ್ತವ್ಯಲೋಪ | ಹೆಗ್ಗರೆ ಗ್ರಾ.ಪಂ. ಪಿಡಿಒ ಅಮಾನತು
    • ತುಮಕೂರು: ಜಿಲ್ಲಾ ಪತ್ರಕರ್ತರ ಸಂಘದಿಂದ ಶ್ರವಣ ತಪಾಸಣಾ ಶಿಬಿರ
    • ಕೊರಟಗೆರೆ: 10,016 ಮಕ್ಕಳಿಗೆ ಪೋಲಿಯೋ ಲಸಿಕಾ ಗುರಿ: ಡಾ.ಜ್ಯೋತ್ಸ್ನಾ ರೆಡ್ಡಿ ಕರೆ
    • ಜುಲೈ 3ರಂದು ‘ದಲಿತ ಜನಾಗ್ರಹ ಸಮಾವೇಶ’: ಸರಗೂರು ಪ್ರವಾಸಿ ಮಂದಿರದಲ್ಲಿ ಪೋಸ್ಟರ್ ಬಿಡುಗಡೆ
    • ಮಧುಗಿರಿ: ಸಿದ್ಧಾರ್ಥ ವಸತಿ ಪ್ರೌಢಶಾಲೆಯಲ್ಲಿ 2006ರ ಬ್ಯಾಚ್ ಹಳೆಯ ವಿದ್ಯಾರ್ಥಿಗಳಿಂದ ಉಚಿತ ಸಮವಸ್ತ್ರ ವಿತರಣೆ
    • SIR: ಅರ್ಹ ನಾಗರಿಕರ ಮತದಾನದ ಹಕ್ಕು ಕಸಿದುಕೊಳ್ಳುವ ಅಪಾಯ: ಹೆಚ್.ವಿ. ವಾಸು ಆತಂಕ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಶೋಚನೀಯ ಮಟ್ಟ ತಲುಪಿದ ಕಲ್ಲಿದ್ದಲು ಸಂಗ್ರಹ: ಪ್ರತಿಪಕ್ಷಗಳಿಂದ ಆಕ್ರೋಶ
    ರಾಷ್ಟ್ರೀಯ ಸುದ್ದಿ April 30, 2022

    ಶೋಚನೀಯ ಮಟ್ಟ ತಲುಪಿದ ಕಲ್ಲಿದ್ದಲು ಸಂಗ್ರಹ: ಪ್ರತಿಪಕ್ಷಗಳಿಂದ ಆಕ್ರೋಶ

    By adminApril 30, 2022No Comments2 Mins Read
    kallidallu

    Provided by
    Provided by

    ದೇಶದಲ್ಲಿ ಕಲ್ಲಿದ್ದಲು ಸಂಗ್ರಹ ಶೋಚನೀಯ ಮಟ್ಟ ತಲುಪಿದೆ ಎಂಬ ಊಹಾಪೋಹಗಳ ಮಧ್ಯೆ ದೇಶದ ಅನೇಕ ಮಹಾನಗರಗಳಲ್ಲಿ ವಿದ್ಯುತ್‌ ಕಡಿತಗೊಳಿಸಲಾಗುತ್ತಿದೆ. ಇನ್ನು ಈ ವಿಚಾರದಲ್ಲಿ ಪ್ರಧಾನಿ ನರೇಂದ್ರ ಮೋದಿ ಮಧ್ಯಸ್ಥಿಕೆ ವಹಿಸಬೇಕು ಎಂದು ಎಂಎಸ್‌ಎಂಇಗಳು ಏಪ್ರಿಲ್‌ 25ರಂದು ಮನವಿ ಮಾಡಿದ್ದಾರೆ. ಈ ಬಳಿಕ ವಿಷಯದ ಚರ್ಚೆಯು ಮಹತ್ವ ಪಡೆದುಕೊಂಡಿದೆ.

    ಅಷ್ಟೇ ಅಲ್ಲದೆ, ಜಮ್ಮು ಮತ್ತು ಕಾಶ್ಮೀರದ ಪ್ರಮುಖ ರಾಜಕೀಯ ಪಕ್ಷಗಳು, ಆರರಿಂದ ಏಳು ಗಂಟೆಗಳವರೆಗೆ ವಿದ್ಯುತ್ ಕಡಿತಗೊಳಿಸುವುದರ ವಿರುದ್ಧ ಪ್ರತಿಭಟನೆಗಳನ್ನು ನಡೆಸಿವೆ. ಮತ್ತೊಂದೆಡೆ ಎಎಪಿ ನೇತೃತ್ವದ ದೆಹಲಿ ಸರ್ಕಾರವು ವಿದ್ಯುತ್ ಕಡಿತ ಮತ್ತು ಕಲ್ಲಿದ್ದಲು ಕೊರತೆಗೆ ಸಂಬಂಧಿಸಿದಂತೆ ಕಳವಳ ವ್ಯಕ್ತಪಡಿಸಿದೆ.

    ದೇಶದಲ್ಲಿರುವ 173 ಉಷ್ಣ ವಿದ್ಯುತ್ ಸ್ಥಾವರಗಳ ಪೈಕಿ 106 ಸ್ಥಾವರಗಳಲ್ಲಿ ಕಲ್ಲಿದ್ದಲು ಸಂಗ್ರಹ ಶೋಚನೀಯ ಮಟ್ಟಕ್ಕೆ ಕುಸಿದಿದೆ ಎಂದು ತಿಳಿದುಬಂದಿದೆ. ಉತ್ತರ ಭಾರತದಲ್ಲಿ ಬೀಸುವ ಬಿಸಿಗಾಳಿಯಿಂದಾಗಿ ವಿದ್ಯುತ್‌ಗೆ ಬೇಡಿಕೆ ಹೆಚ್ಚಾಗಿತ್ತು. ಆದರೆ ಕಲ್ಲಿದ್ದಲು ಸಂಗ್ರಹಣೆಯ ಕೊರತೆಯಿಂದ ವಿದ್ಯುತ್ ಉತ್ಪಾದಿಸಲು ಸಾಧ್ಯವಾಗುತ್ತಿಲ್ಲ. ಈ ಹಿನ್ನೆಲೆಯಲ್ಲಿ ವಿದ್ಯುತ್ ಕೊರತೆ ಉಂಟಾಗಿದೆ.

    ಗುರುವಾರ ತಡರಾತ್ರಿ ಕೇಂದ್ರೀಯ ವಿದ್ಯುತ್ ಪ್ರಾಧಿಕಾರ ಬಿಡುಗಡೆ ಮಾಡಿರುವ ವರದಿಯ ಪ್ರಕಾರ, ಒಟ್ಟು 106 ಸ್ಥಾವರಗಳಲ್ಲಿ ಸಂಗ್ರಹ ಶೇ 25ಕ್ಕಿಂತಲೂ ಕಡಿಮೆ ಮಟ್ಟಕ್ಕೆ ಕುಸಿದಿದೆ. 150 ಸ್ಥಾವರಗಳಲ್ಲಿ ದೇಶೀಯ ಕಲ್ಲಿದ್ದಲನ್ನು ಬಳಸಲಾಗುತ್ತಿದೆ. ಇವುಗಳಲ್ಲಿ 86 ಸ್ಥಾವರಗಳಲ್ಲಿ ಕಲ್ಲಿದ್ದಲು ಸಂಗ್ರಹವು ಶೋಚನೀಯ ಮಟ್ಟಕ್ಕೆ ಕುಸಿದಿದೆ. ಕೆಲವು ಸ್ಥಾವರಗಳಲ್ಲಿ ಕೇವಲ ಒಂದೂವರೆ ಅಥವಾ ಎರಡು ದಿನಗಳಿಗೆ ಆಗುವಷ್ಟು ಸಂಗ್ರಹ ಮಾತ್ರ ಉಳಿದಿದೆ. ನಿಯಮಗಳ ಪ್ರಕಾರ, ಉಷ್ಣ ವಿದ್ಯುತ್‌ ಸ್ಥಾವರಗಳು ಕನಿಷ್ಠ 26 ದಿನಗಳಿಗೆ ಆಗುವಷ್ಟು ಕಲ್ಲಿದ್ದಲು ಸಂಗ್ರಹ ಹೊಂದಿರಬೇಕು. ಕಲ್ಲಿದ್ದಲು ಸಂಗ್ರಹವು 6.5 ದಿನಗಳಿಗೆ ಮಾತ್ರ ಆಗುವಷ್ಟರ ಮಟ್ಟಿಗೆ ಕುಸಿದರೆ, ಅದನ್ನು ಶೋಚನೀಯ ಮಟ್ಟ ಎಂದು ಕರೆಯಲಾಗುತ್ತದೆ.


    Provided by
    Provided by

    ಈ ಬಗ್ಗೆ ಕೇಂದ್ರ ಹೇಳಿದ್ದೇನು?

    ಏಪ್ರಿಲ್ 26 ರಂದು, ಕನಿಷ್ಠ 86 ವಿದ್ಯುತ್ ಸ್ಥಾವರಗಳು ವಿಮರ್ಶಾತ್ಮಕವಾಗಿ ಕಡಿಮೆ ಸ್ಟಾಕ್ ಹೊಂದಿದ್ದರೂ ಸಹ, ದೇಶದಾದ್ಯಂತ ವಿದ್ಯುತ್ ಉತ್ಪಾದನೆಯನ್ನು ಸೀಮಿತಗೊಳಿಸುವ ಮೂಲಕ ಭಾರತದ ವಿದ್ಯುತ್ ಬೇಡಿಕೆಯು ಸಾರ್ವಕಾಲಿಕ ಗರಿಷ್ಠ ಮಟ್ಟವಾದ 201.066 GW ತಲುಪಿದೆ. ಭಾರತದಲ್ಲಿ ಕಲ್ಲಿದ್ದಲು ಕೊರತೆಯ ಬಗ್ಗೆ ವದಂತಿಗಳನ್ನು ತಳ್ಳಿಹಾಕಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, “ನಾವು ವಿದ್ಯುತ್ ಸ್ಥಾವರದಲ್ಲಿ ಸರಾಸರಿ 21-22 ಮಿಲಿಯನ್ ಟನ್ ಕಲ್ಲಿದ್ದಲು ಹೊಂದಿದ್ದೇವೆ. ದೇಶದಲ್ಲಿ ಕಲ್ಲಿದ್ದಲಿನ ಕೊರತೆಯಿಲ್ಲ. ವಿದ್ಯುತ್ ಸ್ಥಾವರಗಳಲ್ಲಿ 10 ದಿನಗಳ ಕಲ್ಲಿದ್ದಲು ಸಂಗ್ರಹವಿದೆ” ಎಂದು ಹೇಳಿದರು.

    ಅಖಿಲ ಭಾರತ ವಿದ್ಯುಚ್ಛಕ್ತಿ ಎಂಜಿನಿಯರ್‌ಗಳ ಒಕ್ಕೂಟ ಪ್ರತಿಕ್ರಿಯೆ:

    “ಸಚಿವಾಲಯಗಳ ನಡುವಣ ಸಮನ್ವಯ ಕೊರತೆಯಿಂದ ಕಲ್ಲಿದ್ದಲು ಪೂರೈಕೆಯಲ್ಲಿ ವ್ಯತ್ಯಯವಾಗಿದೆ. ಕಲ್ಲಿದ್ದಲು ಪೂರೈಕೆಯಾಗದೇ ಇರುವುದರಿಂದ ಉಷ್ಣ ವಿದ್ಯುತ್ ಸ್ಥಾವರಗಳಲ್ಲಿ ಕಲ್ಲಿದ್ದಲು ಸಂಗ್ರಹ ಶೋಚನೀಯ ಮಟ್ಟಕ್ಕೆ ಕುಸಿದಿದೆ. ಆದರೆ, ಸಚಿವಾಲಯಗಳು ಇದಕ್ಕೆ ನಾವು ಹೊಣೆ ಅಲ್ಲ ಎನ್ನುತ್ತಿವೆ’ ಎಂದು ಒಕ್ಕೂಟವು ಆರೋಪಿಸಿದೆ.
    ರಾಜಸ್ಥಾನ ಸಿಎಂ ಆಗ್ರಹ:

    ಕಲ್ಲಿದ್ದಲು ಸಂಗ್ರಹ ಶೋಚನೀಯ ಮಟ್ಟ ತಲುಪಿದೆ ಎಂಬ ವಿಚಾರವನ್ನು ರಾಷ್ಟ್ರೀಯ ಬಿಕ್ಕಟ್ಟು ಎಂದು ಘೋಷಿಸಿ ಅಂತಾ ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್‌ ಹೇಳಿದ್ದಾರೆ. ‘ಉತ್ತರದಲ್ಲಿ ಬೀಸುವ ಬಿಸಿಗಾಳಿಯ ಪರಿಣಾಮವಾಗಿ ದೇಶದ 16 ರಾಜ್ಯಗಳಲ್ಲಿ ವಿದ್ಯುತ್‌ಗೆ ಬೇಡಿಕೆ ಹೆಚ್ಚಾಗಿದೆ. ಆದರೆ ಬೇಡಿಕೆಯಷ್ಟು ವಿದ್ಯುತ್ ಉತ್ಪಾದಿಸಲು ಅಗತ್ಯವಿರುವ ಕಲ್ಲಿದ್ದಲು ಪೂರೈಕೆಯಾಗುತ್ತಿಲ್ಲ. ಹೀಗಾಗಿ ಇದನ್ನು ರಾಷ್ಟ್ರೀಯ ಬಿಕ್ಕಟ್ಟು ಎಂದು ಘೋಷಿಸಬೇಕು” ಎಂದಿದ್ದಾರೆ.

    ವರದಿ ಆಂಟೋನಿ ಬೇಗೂರು


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

     

    admin
    • Website

    Related Posts

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    Leave A Reply Cancel Reply

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುರುವೇಕೆರೆ

    ತುರುವೇಕೆರೆ: ವಿದ್ಯುತ್ ಖಾಸಗಿಕರಣ ತಿರಸ್ಕರಿಸಲು ಒತ್ತಾಯಿಸಿ ರೈತ ಸಂಘದಿಂದ ಮನವಿ

    June 30, 2026

    ತುರುವೇಕೆರೆ: ಟಾಟಾ ಪವರ್ ಕಂಪನಿ ಲಿಮಿಟೆಡ್ ರಾಜ್ಯದಲ್ಲಿ ಸಮಾನಾಂತರ ವಿದ್ಯುತ್ ವಿತರಣಾ ಪರವಾನಗಿ ಕೋರಿ ಕೆ.ಇ.ಆರ್.ಸಿ. ಗೆ ಸಲ್ಲಿಸಿರುವ ಅರ್ಜಿಯನ್ನು…

    ನಾಡಪ್ರಭು ಕೆಂಪೇಗೌಡರದು ಜಾತ್ಯತೀತ ಆಡಳಿತ: ಶಾಸಕ ಎಂ.ಟಿ.ಕೃಷ್ಣಪ್ಪ

    June 29, 2026

    ಸಾರ್ವಜನಿಕ ದೂರು ಅರ್ಜಿಗಳನ್ನು ಸಮರ್ಪಕವಾಗಿ ವಿಲೇವಾರಿ ಮಾಡದೆ ಕರ್ತವ್ಯಲೋಪ | ಹೆಗ್ಗರೆ ಗ್ರಾ.ಪಂ. ಪಿಡಿಒ ಅಮಾನತು

    June 29, 2026

    ತುಮಕೂರು: ಜಿಲ್ಲಾ ಪತ್ರಕರ್ತರ ಸಂಘದಿಂದ ಶ್ರವಣ ತಪಾಸಣಾ ಶಿಬಿರ

    June 29, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.