ಮೈಸೂರು: ಬಿಜೆಪಿ ಅಧಿಕಾರಕ್ಕೆ ಬಂದ ಮೇಲೆ ಭ್ರಷ್ಟಾಚಾರ, ಅಕ್ರಮಗಳು ಹೆಚ್ಚಾಗಿವೆ ಎಂಬುದಾಗಿ ಮಾಜಿ ಸಿಎಂ ಸಿದ್ಧರಾಮಯ್ಯ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.ಇಂದು ಮೈಸೂರಿನ ಟಿ. ನರಸೀಪುರದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದರು.
ಕಾನೂನು ಎಲ್ಲರಿಗೂ ಕಾನೂನು ಒಂದೇ. ರಾಜಕೀಯ ಲಾಭಕ್ಕಾಗಿ ಒಂದು ಧರ್ಮವನ್ನ ಟಾರ್ಗೆಟ್ ಮಾಡುವುದು ತಪ್ಪು. ಯಾವ ಧರ್ಮದವರು ತಪ್ಪು ಕ್ರಮ ಕೈಗೊಳ್ಳಬೇಕು. ಒಂದು ಧರ್ಮದ ಜನರನ್ನು ಟಾರ್ಗೆಟ್ ಮಾಡಿದರೆ ಮತ ದೃವೀಕರಣ ಆಗತ್ತೆ ಎಂಬ ಭ್ರಮೆಯಲ್ಲಿ ಬಿಜೆಪಿ ಇದೆ. ಅದು ಅಸಾಧ್ಯ. ಈಗಾಗಲೇ ಅವರಿಗೆ ತಿರುಗುಬಾಣ ಆಗಿದೆ ಎಂದು ಮಾಜಿ ಸಿಎಂ ಸಿದ್ಧರಾಮಯ್ಯ ಹೇಳಿದರು.
ಸಿದ್ದರಾಮಯ್ಯ ಸೋನಿಯಾ ಗಾಂಧಿಯ ಗುಲಾಮ ಎಂಬ ಸಿ.ಟಿ. ರವಿ ಹೇಳಿಕೆ ವಿಚಾರವಾಗಿ ಮಾತನಾಡಿ ಅವರು ಪ್ರಜಾಪ್ರಭುತ್ವದಲ್ಲಿ ಯಾರು ಯಾರಿಗೂ ಗುಲಾಮರಲ್ಲ ಎಂದು ತಿಳಿಸಿದ್ದಾರೆ.ಭ್ರಷ್ಟಾಚಾರದ ಬಗ್ಗೆ ಮಾತನಾಡಲು ಕಾಂಗ್ರೆಸ್ಗೆ ನೈತಿಕತೆ ಇಲ್ಲ ಎಂಬ ಸಚಿವ ಅಶೋಕ್ ಹೇಳಿಕೆ ವಿಚಾರ ಟೀಕೆ ಮಾಡಿದ ಅಶೋಕ ಏನ್ ಮಾಡ್ತಾ ಇದ್ದರು. ಕಾಂಗ್ರೆಸ್ ಆಡಳಿತದ ಸಮಯದಲ್ಲಿ ಬಿಜೆಪಿ ಪ್ರತಿಪಕ್ಷದಲ್ಲಿತ್ತು. ಆಗ ಯಾಕೆ ಭ್ರಷ್ಟಾಚಾರದ ಬಗ್ಗೆ ಯಾರು ಮಾತನಾಡಲಿಲ್ಲ. ಆಗ ಅಶೋಕ ತಮ್ನ ಬಾಯಿಗೆ ಕಡುಬು ಹಾಕಿಕೊಂಡಿದ್ದರೇ? ಎಂದು ಪ್ರಶ್ನಿಸಿದರು.
ಪಿಎಸ್ ಐ ಮರು ಪರೀಕ್ಷೆ ನಡೆಸುವ ಸರ್ಕಾರದ ನಿರ್ಧಾರಕ್ಕೆ ನಮ್ಮ ಬೆಂಬಲ ಇದೆ. ಪರಿಕ್ಷೆಯಲ್ಲಿ ಯಾರು ಅಕ್ರಮ ಮಾಡಿದ್ದಾರೆ, ಯಾರು ಸರಿಯಾಗಿ ಬರೆದಿದ್ದಾರೆ ಗೊತ್ತಾಗಲ್ಲ. ತನಿಖೆ ಮುಂದುವರಿದು 20 ಜನರ ಬಂಧನ ಆಗಿದೆ. ಹೀಗಾಗಿ ಮರು ಪರೀಕ್ಷೆ ಮಾಡುವ ವದಾನ ಸರಿಯಾಗಿದೆ . ಆದರೆ ಈಗ ಪರೀಕ್ಷೆ ಬರೆದಿರುವ ಯಾರ ಬಳಿಯೂ ಪರಿಕ್ಷಾ ಶುಲ್ಕ ಪಡೆಯಬಾರದು. ಬಿಜೆಪಿ ದುರಾಡಳಿತದಿಂದ ಇಂತಹ ಘಟನೆಗಳು ಮರುಕಳಿಸುತ್ತಿವೆ. ಗೃಹ ಸಚಿವರಾದ ಆರಗ ಜ್ಞಾನೇಂದ್ರ ಸಚಿವ ಸ್ಧಾನದಲ್ಲಿ ಮುಂದುವರಿಯಬಾರದು ಅವರು ತಿಳಿಸಿದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


