ತುಮಕೂರು : ತುಮಕೂರು ಜಿಲ್ಲಾ ಕಾಂಗ್ರೆಸ್ಸಮಿತಿ ಕಾರ್ಮಿಕರ ವಿಭಾಗ ವತಿಯಿಂದ ದಿವಂಗತ ಪ್ರಕಾಶಂ ರವರಿಗೆ ಭಾವಪೂರ್ಣ ಶ್ರದ್ಧಾಂಜಲಿ ಅರ್ಪಿಸಲಾಯಿತು.
ಹಿರಿಯ ಕಾಂಗ್ರೆಸ್ ಮುಖಂಡರು ಹಾಗೂ ಕೆಪಿಸಿಸಿ ಕಾರ್ಮಿಕ ವಿಭಾಗದ ಮಾಜಿ ರಾಜ್ಯಾಧ್ಯಕ್ಷರು ಹಾಗೂ ಕೆಪಿಸಿಸಿ, ಐಎಂಟಿ ಸಿಯು ರಾಜ್ಯ ಅಧ್ಯಕ್ಷರಾಗಿದ್ದ ಪ್ರಕಾಶಂರವರು ನೆನ್ನೆ ಹೃದಯಾಘಾತದಿಂದ ನಿಧನ ಹೊಂದಿದ್ದರು.
ಇವರ ನಿಧನದ ಹಿನ್ನೆಲೆಯಲ್ಲಿ ಜಿಲ್ಲಾ ಕಾಂಗ್ರೆಸ್ ಕಾರ್ಮಿಕರ ವಿಭಾಗದ ವತಿಯಿಂದ ಮೌನ ಆಚರಣೆಯ ಮೂಲಕ ಅವರ ಆತ್ಮಕ್ಕೆ ಶಾಂತಿ ದೊರಕಲಿ ಎಂದು ಪ್ರಾರ್ಥಿಸಿದರು.
ಈ ಸಂದರ್ಭದಲ್ಲಿ ಕೆಪಿಸಿಸಿ ರಾಜ್ಯ ಕಾರ್ಯದರ್ಶಿ ಸೈಯದ್ ದಾದಾಪೀರ್, ಅಬ್ದುಲ್ ರಹೀಂ ಅಧ್ಯಕ್ಷರು ತುಮಕೂರು ಜಿಲ್ಲಾ ಕಾಂಗ್ರೆಸ್ ಸಮಿತಿ ಕಾರ್ಮಿಕರ ವಿಭಾಗ ಹಾಗೂ ಜಿಲ್ಲಾ ಕಾಂಗ್ರೆಸ್ ಸಮಿತಿಯ ಕಾರ್ಮಿಕರ ವಿಭಾಗದ ಎಲ್ಲಾ ಪದಾಧಿಕಾರಿಗಳು ಉಪಸ್ಥಿತರಿದ್ದರು.
ವರದಿ: ಎ.ಎನ್. ಪೀರ್, ತುಮಕೂರು
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5