ವಿಜಯಪುರ: ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಐದು ವರ್ಷದಲ್ಲಿ ರಾಜ್ಯದಲ್ಲಿ ಬಾಕಿ ಇರುವ ಎಲ್ಲ ನೀರಾವರಿ ಯೋಜನೆ ಪೂರ್ಣಗೊಳಿಸುವುದಾಗಿ ಎಷ್ಟೇ ಹಣ ಖರ್ಚಾದರೂ ಪರವಾಗಿಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯಹೇಳಿದ್ದಾರೆ.
ಕಾಂಗ್ರೆಸ್ ನಡಿಗೆ ಕೃಷ್ಣೆಯ ಕಡೆಗೆ ಪಾದಯಾತ್ರೆ ವೇಳೆ ಮಾತನಾಡಿದ ಅವರು ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀರಾವರಿ ಯೋಜನೆಗಳನ್ನು ಪೂರ್ಣಗೊಳಿಸಲು ಪ್ರತಿ ವರ್ಷ ₹ 10 ಸಾವಿರ ಕೋಟಿಯಂತೆ 5 ವರ್ಷದಲ್ಲಿ ₹ 50 ಸಾವಿರ ಕೋಟಿ ನೀಡುವುದಾಗಿ ಭರವಸೆ ನೀಡಿದ್ದೆವು. ಆ ಪ್ರಕಾರ ನಾನು ಸಿಎಂ ಆಗಿದ್ದ ವೇಳೆ ಜಲಸಂಪನ್ಮೂಲ ಸಚಿವರಾಗಿದ್ದ ಎಂ.ಬಿ.ಪಾಟೀಲ ಪ್ರಾಮಾಣಿಕವಾಗಿ ಕೆಲಸ ಮಾಡಿ, ಹಳ್ಳಿ ಹಳ್ಳಿಗೆ ನೀರು ಹರಿಯುವಂತೆ ಮಾಡಿದ್ದಾರೆ ಎಂದು ಮೆಚ್ಚುಗೆಯನ್ನು ವ್ಯಕ್ತಪಡಿಸಿದರು.
ಬಬಲೇಶ್ವರ ತಾಲ್ಲೂಕಿನ ಸುಕ್ಷೇತ್ರ ಸಂಗಾಪೂರ ಎಸ್.ಎಚ್.ಗ್ರಾಮದಲ್ಲಿ ಶ್ರೀ ಸಿದ್ಧಲಿಂಗೇಶ್ವರ ಕಮರಿಮಠದ ಜಾತ್ರಾ ಮಹೋತ್ಸವ ಹಾಗೂ ಯಾತ್ರಿ ನಿವಾಸ ಉದ್ಘಾಟಿಸಿದ ಮಾತನಾಡಿದ ಅವರು ಭಾರತೀಯ ಸಮಾಜದಲ್ಲಿ ಜಾತ್ರೆ, ಹಬ್ಬ, ಹರಿದಿನ ಅಚರಣೆ ಪ್ರಾಚೀನ ಕಾಲದಿಂದಲೂ ಒಟ್ಟಿಗೆ ನಡೆಸಿಕೊಂಡು ಬರುವುದು ಸಂಪ್ರದಾಯ.
ನಾವೆಲ್ಲರೂ ಹಿಂದೂಗಳು. ನಮ್ಮ ಸಂಪ್ರದಾಯದಂತೆ ಜಾತ್ರೆಯಲ್ಲಿ ಸಂತೋಷದಿಂದ ಎಲ್ಲರು ಪಾಲ್ಗೊಳ್ಳುತ್ತಾರೆ. ಜೊತೆಗೆ ಅಕ್ಕಪಕ್ಕದ ಊರಿನವರು ಇತರ ಧರ್ಮದವರು ಭಾಗವಹಿಸುತ್ತಾರೆ. ಜಾತ್ರೆ, ಉರುಸ್, ಕ್ರಿಸ್ಮಸ್ ಹಬ್ಬಗಳನ್ನು ಒಟ್ಟಿಗೆ ಆಚರಿಸುವುದರಿಂದ ಸಮಾಜದಲ್ಲಿ ಸಾಮರಸ್ಯ ಕಾಪಾಡಲು ಅನುಕೂಲವಾಗುತ್ತದೆ ಎಂದರು. ಜಾತಿ, ಧರ್ಮ, ಭಾಷೆ ಆಧಾರದ ಮೇಲೆ ಜನರನ್ನು ವಿಂಗಡಿಸಬಾರದು. ಎಲ್ಲರೂ ಮನುಷ್ಯರು ಎಂದು ಹೇಳಿದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


