ತಿಪಟೂರು: ತಾಲ್ಲೂಕಿನ ಹಾಲ್ಕುರಿಕೆ ಕೆರೆಗೆ ಹೇಮಾವತಿ ಯೋಜನೆಯ ತುಮಕೂರು ಶಾಖಾ ನಾಲೆಯಿಂದ ಚಿಕ್ಕನಾಯ್ಕನಹಳ್ಳಿ ತಾಲ್ಲೋಕಿನ 22ಕೆರೆಗಳಿಗೆ ನೀರು ಒದಗಿಸುವ ಯೋಜನೆಯ ಭಾಗವಾಗಿ ತಿಪಟೂರು ತಾಲ್ಲೂಕಿನ ಹಾಲ್ಕುರಿಕೆರೆ ಹಾಗೂ ಪಟ್ಟದದೇವರಕೆರೆಗಳಿಗೆ ನೀರುಹರಿಸುವ ಕಾಮಗಾರಿಗೆ ಪ್ರಾಥಮಿಕ ಹಾಗೂ ಪ್ರೌಡಶಿಕ್ಷಣ ಸಚಿವ ಬಿ.ಸಿ ನಾಗೇಶ್ ಗುದ್ದಲಿಪೂಜೆ ನೆರವೇರಿಸಿದರು.
ನಂತರ ಹಾಲ್ಕುರಿಕೆ ಗ್ರಾಮದೇವತೆ ಶ್ರೀಕೆಂಪಮ್ಮ ದೇವಿ ದೇವಾಲಯ ಆವರಣದಲ್ಲಿ ಆಯೋಜಿಸಿದ್ದ ವಿಶ್ವಗುರು ಶ್ರೀ ಬಸವೇಶ್ವರ ಜಯಂತಿ ಹಾಗೂ ಸಚಿವ ಬಿ.ಸಿ. ನಾಗೇಶ್ ರವರಿಗೆ ಅಭಿನಂದನಾ ಸಮಾರಂಭದಲ್ಲಿ ಸಾರ್ವಜನಿಕರಿಂದ ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು, ಹಾಲ್ಕುರಿಕೆ ಕೆರೆಗೆ ಹೇಮಾವತಿ ನೀರು ಹರಿಸಬೇಕು ಎನ್ನುವುದು ಈ ಭಾಗದ ಜನರ ದಶಕಗಳ ಕನಸು ಹಲವಾರು ಅಡ್ಡಿ ಅತಂಕಗಳನ್ನ ನಿವಾರಿಸಿ ಪ್ರಾರಂಭಗೊಳುತ್ತಿದ್ದು, ಯೋಜನೆಯನ್ನ ಶೀಘ್ರವಾಗಿ ಪೂರ್ಣಗೊಳಿಸುವಂತೆ ಗುತ್ತಿಗೆದಾರರಿಗೆ ಸೂಚಿಸಲಾಗಿದೆ ಎಂದರು.
ಸಚಿವ ಜೆ.ಸಿ. ಮಾಧುಸ್ವಾಮಿಯವರ ಸಹಕಾರ, ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಹಾಗೂ ನೀರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿರವರ ಸಹಕಾರದಿಂದ ಸುಮಾರು 89ಕೋಟಿ ವೆಚ್ಚದ ಕಾಮಗಾರಿಗೆ ಪೂಜೆ ಮಾಡುತ್ತಿದ್ದು, ಈ ವರ್ಷದ ಹೇಮಾವತಿ ನಾಲೆ ನೀರು ಬಿಡುವುದರ ಒಳಗೆ ಕಾಮಗಾರಿ ಪೂರ್ಣಗೊಳಿಸಿ ಹಾಲ್ಕುರಿಕೆ ಕೆರೆ ಹಾಗೂ ಪಟ್ಟದದೇವರ ಕೆರೆಗೆ ನೀರು ಹರಿಸಲಾಗುವುದು ಎಂದು ಅವರು ತಿಳಿಸಿದರು.
ಕಾಮಗಾರಿಗೆ ಶೀಘ್ರವಾಗಿ ಪೂರ್ಣಗೊಳ್ಳಲು ಸಹಕಾರ ಅಗತ್ಯವಾಗಿದ್ದು, ಸಾರ್ವಜನಿಕರು ಸಹಕಾರ ನೀಡಬೇಕು. ನಿಯಮಬದ್ದವಾಗಿ ಭೂಸ್ವಾಧೀನಕ್ಕೆ ಅರ್ಹ ಇರುವ ರೈತರಿಗೆ ಅನ್ಯಾಯವಾಗದಂತೆ ಪರಿಹಾರ ದೊರೆಯುವಂತೆ ಮಾಡಲಾಗುವುದು. ಅರಣ್ಯ ಇಲಾಖೆಯ ಅನುಮೋದನೆ ಪಡೆಯಲು ಸಾಕಷ್ಟು ಅಡ್ಡಿ ಆತಂಕಗಳು ಎದುರಾದವು. ಅರಣ್ಯ ಇಲಾಖೆಯಿಂದ ಬಳಸಿಕೊಳ್ಳುವ ಭೂಮಿಗೆ ಪರ್ಯಾಯವಾಗಿ ತಾಲ್ಲೂಕಿನ ರಜತಾದ್ರಿಪುರ ಹಾಗೂ ಕೋಡಿಹಳ್ಳಿ ಬಳಿ ಭೂಮಿ ನೀಡಲಾಗಿದೆ . ನಮ್ಮ ಸರ್ಕಾರ ನೀರಾವರಿ ಯೋಜನೆಗಳ ಅನುಷ್ಠಾನಗೊಳಿಸಲು ಬದ್ದವಾಗಿದೆ ಎಂದು ಅವರು ಇದೇ ವೇಳೆ ತಿಳಿಸಿದರು.
ತಾಲ್ಲೂಕಿನ 180ಕೋಟಿ ವೆಚ್ಚದ ನೀರಾವರಿ ಯೋಜನೆ ಹಣ ಮಂಜೂರಾಗಿದ್ದು, ಶೀಘ್ರವಾಗಿ ಮುಖ್ಯಮಂತ್ರಿಗಳಿಂದ ಯೋಜನೆಗೆ ಚಾಲನೆ ದೊರೆಯಲಿದೆ. ತಾಲ್ಲೂಕಿನಲ್ಲಿ ಸಣ್ಣೆನಹಳ್ಳಿ ಏತನೀರಾವರಿ ಯೋಜನೆ .ಹೊನ್ನವಳ್ಳಿ ಹೆಚ್ಚುವರಿ ಏತನೀರಾವರಿ ಯೋಜನೆ.ರಂಗಾಪುರ.ಕಿಬ್ಬನಹಳ್ಳಿ ಏತನೀರಾವರಿ ಸೇರಿದಂತೆ ಹಲವಾರು ನೀರಾವರಿ ಯೋಜನೆಗಳು ಪ್ರಗತಿಯಲ್ಲಿವೆ ಎಂದು ತಿಳಿಸಿದರು.
ಕಾರ್ಯಕ್ರಮಕ್ಕೆ ಶ್ರೀಮತಿ ವೀಣಾನಾಗೇಶ್.ಬಿಜೆಪಿ ಅಧ್ಯಕ್ಷ ಬಳ್ಳೆಕಟ್ಟೆ ಸುರೇಶ್. ಮುಖಂಡರಾದ ಗಂಗರಾಜು.ಹರಿಸಮದ್ರ ಗಂಗಾಧರ್.ಹೆಚ್.ವಿ ನಾಗರಾಜು.ದೊಡ್ಡಯ್ಯ.ಸಿದ್ದಯ್ಯ.ಮಂತ್ತಾದವರು ಭಾಗವಹಿಸಿದ್ದರು.
ವರದಿ: ಆನಂದ, ತಿಪಟೂರು
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5