ತುಮಕೂರು: ಮಳೆಯ ವೇಳೆ ಮರದಡಿಯಲ್ಲಿ ನಿಂತಿದ್ದ ಮಹಿಳೆಯೊಬ್ಬರು ಸಿಡಿಲು ಬಡಿದು ದಾರುಣವಾಗಿ ಸಾವನ್ನಪ್ಪಿದ ಘಟನೆ ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನ ಬೂದನಹಳ್ಳಿಯಲ್ಲಿ ನಡೆದಿದೆ.
43 ವರ್ಷ ವಯಸ್ಸಿನ ಲಕ್ಷ್ಮಮ್ಮ ಅವರು ಮೃತ ಮಹಿಳೆ ಎಂದು ಗುರುತಿಸಲಾಗಿದ್ದು, ಗುರುವಾರ ತುಮಕೂರಿನ ವಿವಿಧೆಡೆ ಮಳೆ ಸುರಿದಿದ್ದು, ಮಳೆಯಿಂದ ರಕ್ಷಣೆ ಪಡೆಯಲು ಮಹಿಳೆ ಮರದ ಕೆಳಗೆ ನಿಂತಿದ್ದ ವೇಳೆ ಸಿಡಿಲು ಬಡಿದಿದ್ದು, ಪರಿಣಾಮವಾಗಿ ಅವರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.
ಘಟನಾ ಸ್ಥಳಕ್ಕೆ ಕುಣಿಗಲ್ ಶಾಸಕ ಡಾ.ರಂಗನಾಥ್ ಭೇಟಿ ನೀಡಿದ್ದು, ಮೃತರ ಕುಟುಂಬಕ್ಕೆ ಸಾಂತ್ವಾನ ಹೇಳಿದ್ದಾರೆ. ಘಟನೆ ಸಂಬಂಧ ಹುಲಿಯೂರುದುರ್ಗಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5