ತುಮಕೂರು: ಕುಣಿಗಲ್ ರಸ್ತೆಯ ಸುಲದ ಅನುಮಂತ ರಾಯಿ ದೇವಸ್ಥಾನದ ಸಮೀಪದಲ್ಲಿ ನಡೆದ ಭೀಕರ ಅಪಘಾತದಲ್ಲಿ ಪಾದಚಾರಿ ಹಾಗೂ ಬೈಕ್ ಸವಾರನೊಬ್ಬ ಗಾಯಗೊಂಡಿರುವ ಘಟನೆ ನಡೆದಿದೆ.
ಟೆಂಪೋ ಟ್ರಾವೆಲ್ಲರ್ ಈ ಅಪಘಾತಕ್ಕೆ ಕಾರಣ ಎನ್ನಲಾಗಿದ್ದು, ರಸ್ತೆಯಲ್ಲಿ ಯೂಟರ್ನ್ ಮಾಡುತ್ತಿದ್ದ ಟೆಂಪೋ ಟ್ರಾವೆಲ್ಲರ್ ಪಾದಚಾರಿಯೊಬ್ಬರಿಗೆ ಡಿಕ್ಕಿ ಹೊಡೆದಿದ್ದು, ಇದೇ ವೇಳೆ ಈ ರಸ್ತೆಯಲ್ಲಿ ಬರುತ್ತಿದ್ದ ಬೈಕ್ ನಿಯಂತ್ರಣ ಕಳೆದುಕೊಂಡು ಟೆಂಪೋ ಟ್ರಾವೆಲ್ಲರ್ ಗೆ ಡಿಕ್ಕಿ ಹೊಡೆದಿದೆ ಎಂದು ತಿಳಿದು ಬಂದಿದೆ.
ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿರುವ ಬೈಕ್ ಸವಾರ ಹಾಗೂ ಪಾದಚಾರಿಯನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದು, ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5