ಗೃಹ ಬಳಕೆಯ ಎಲ್‍ಪಿಜಿ ಸಿಲಿಂಡರ್ ಬೆಲೆ 50ರೂ. ಏರಿಕೆಯಾಗಿದೆ. ಈಗಾಗಲೇ ದೇಶದಲ್ಲಿ ಬೆಲೆ ಏರಿಕೆಯಿಂದ ಕಂಗಾಲಾಗಿರುವ ಶ್ರೀಸಾಮಾನ್ಯರಿಗೆ ಸಿಲಿಂಡರ್ ಬೆಲೆ ಏರಿಕೆಯಿಂದ ಗಾಯದ ಮೇಲೆ ಬರೆ ಎಳೆದಂತಾಗಿದೆ.
ಸಿಲಿಂಡರ್ ಬೆಲೆ ಏರಿಕೆ ದರವು ಇಂದಿನಿಂದಲೇ ದೇಶಾದ್ಯಂತ ಜಾರಿಗೆ ಬರಲಿದೆ. ಕಳೆದ ಮಾ.22ರಂದು ಅಡುಗೆ ಅನಿಲದ ಬೆಲೆಯನ್ನು 50ರೂ.ಗೆ ಹೆಚ್ಚಿಸಲಾಗಿತ್ತು. ಇದೀಗ ಮತ್ತೆ 50ರೂ.ಗೆ ಹೆಚ್ಚಳ ಮಾಡಲಾಗಿದೆ. ಒಂದೂವರೆ ತಿಂಗಳಲ್ಲಿ ಅಡುಗೆ ಅನಿಲ ದರ ನೂರು ರೂ. ಹೆಚ್ಚಳ ಮಾಡಿದಂತಾಗಿದೆ.
ಪೆಟ್ರೋಲ್, ಡೀಸೆಲ್ ದರ ಖಾದ್ಯ ತೈಲ, ದಿನ ನಿತ್ಯದ ವಸ್ತುಗಳ ಬೆಲೆ, ಹಣ್ಣು, ತರಕಾರಿ ಬೆಲೆಗಳು ಕೂಡ ಗಗನಮುಖಿಯಾಗುತ್ತಿದ್ದು, ಜನ ಸಾಮಾನ್ಯರು ಬೆಲೆ ಏರಿಕೆಯಿಂದ ಪರಿತಪಿಸುತ್ತಿದ್ದಾರೆ.
ಕಳೆದ ವಾರ ವಾಣಿಜ್ಯ ಸಿಲಿಂಡರ್ ಬೆಲೆಯನ್ನು 104 ರೂ.ಗಳಿಗೆ ಏರಿಕೆ ಮಾಡಲಾಗಿತ್ತು. ಈಗ ಗೃಹ ಬಳಕೆಯ ಸಿಲಿಂಡರ್ ಬೆಲೆಯನ್ನು 50ರೂ.ಗೆ ಏರಿಕೆ ಮಾಡಲಾಗಿದ್ದು, ಪ್ರತಿ ಸಿಲಿಂಡರ್ 990.5ರೂ.ಗೆ ಲಭ್ಯವಾಗಲಿದೆ.
ವರದಿ: ಆಂಟೋನಿ ಬೇಗೂರು
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5