ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ನಗರದಲ್ಲಿ ಶನಿವಾರದಂದು ಕರ್ನಾಟಕ ರಕ್ಷಣಾ ವೇದಿಕೆಯ ಟಿ.ಎ.ನಾರಾಯಣಗೌಡ ಬಣವು ಆಂಗ್ಲ ನಾಮಫಲಕಗಳಿಗೆ ಕಪ್ಪು ಮಸಿ ಬಳಿಯುವ ಮೂಲಕ ನಾಮಫಲಕಗಳಲ್ಲಿ ಕನ್ನಡ ಬಳಸುವಂತೆ ಒತ್ತಾಯಿಸಿತು.
ಈ ಸಂದರ್ಭ ಮಾತನಾಡಿದ ತಾಲ್ಲೂಕು ಅಧ್ಯಕ್ಷರಾದ ಉದಯ್ ಶಂಕರ್, ಕನ್ನಡನಾಡಿನಲ್ಲಿ ಹುಟ್ಟಿ, ಬೆಳೆಯುತ್ತಿರುವ ನಾವುಗಳು ಕನ್ನಡವನ್ನು ಮರೆತು ಇಂಗ್ಲಿಷ್ ವ್ಯಾಮೋಹಕ್ಕೆ ಒಳಗಾಗಿರುವುದು ನಿಜಕ್ಕೂ ಬೇಸರದ ಸಂಗತಿಯಾಗಿದೆ ಎಂದರು.
ಈ ಸಂದರ್ಭದಲ್ಲಿ ತಾಲ್ಲೂಕು ಅಧ್ಯಕ್ಷರಾದ ಉದಯ್ ಶಂಕರ್ ,ಗೌರವಾಧ್ಯಕ್ಷರಾದ ಗೋ ಬಸವರಾಜ್, ಉಪಾಧ್ಯಕ್ಷರಾದ ರಾಮಕೃಷ್ಣಪ್ಪ, ಪ್ರಧಾನ ಕಾರ್ಯದರ್ಶಿಯಾದ ಡಿ ಕೆ ಎಸ್ ದಾದಾಪೀರ್, ನಗರ ಉಪಾಧ್ಯಕ್ಷರಾದ ನೂರುಲ್ಲಾ, ನಗರ ಪ್ರಧಾನ ಕಾರ್ಯದರ್ಶಿಯಾದ ಮೊಹಮ್ಮದ್ ಸುಹೇಲ್, ನಗರ ಲಗೇಜ್ ಆಟೋ ಘಟಕ ಅಧ್ಯಕ್ಷರಾದ ಎಂ ಕೆ ಜಾಫರ್, ಸ್ವಾಮಿ, ಗಜ, ಇತರರು ಹಾಜರಿದ್ದರು.
ವರದಿ: ಮುರುಳಿಧರನ್ ಆರ್. ಹಿರಿಯೂರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5


