ಬೆಂಗಳೂರು : ಕೆಎಸ್ಸಾರ್ಟಿಸಿ ಬಸ್ಸೊಂದು ಅಪಘಾತಕ್ಕೀಡಾದ ಪರಿಣಾಮ 25ಕ್ಕೂ ಅಧಿಕ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಭಾನುವಾರ ತಡರಾತ್ರಿ ಈ ಘಟನೆ ನಡೆದಿದೆ.
ಬೆಂಗಳೂರಿನ ಕೆಂಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಈ ಘಟನೆಯಲ್ಲಿ 4 ಮಂದಿಗೆ ಗಂಭೀರವಾದ ಗಾಯಗಳಾಗಿವೆ ಎಂದು ತಿಳಿದು ಬಂದಿದ್ದು, 25 ಜನರಿಗೆ ಸಣ್ಣಪುಟ್ಟ ಗಾಯಗಳಾಗಿವೆ.
ಈ ಬಸ್ ಮಡಿಕೇರಿಯಿಂದ ಬೆಂಗಳೂರಿಗೆ ಬರುತ್ತಿದ್ದು, 45 ಪ್ರಯಾಣಿಕರಿದ್ದರು ಎಂದು ಪಶ್ಚಿಮ ವಿಭಾಗದ ಡಿಸಿಪಿ ಡಾ.ಸಂಜೀವ್ ಪಾಟೀಲ್ ಹೇಳಿದ್ದಾರೆ.
ಅಪಘಾತಕ್ಕೆ ಕಾರಣ ಏನು ಎನ್ನುವುದು ತಿಳಿದು ಬಂದಿಲ್ಲ ಹೆಚ್ಚಿನ ಮಾಹಿತಿಗಳಿಗಾಗಿ ನಿರೀಕ್ಷಿಸಲಾಗುತ್ತಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5


