ಮಂಗಳೂರು: ಪ್ರತಿ ನಾಗರಿಕನಿಗೆ ತೊಂದರೆಯಾಗದಂತೆ ನೋಡಿಕೊಳ್ಳೋದು ಸರ್ಕಾರದ ಜಬಾವ್ದಾರಿ. ಆದರೆ ದುರಾದೃಷ್ಟವಶಾತ್ ಸರ್ಕಾರ ಮುಂದೆ ಎಷ್ಟೇ ಮೊರೆ ಹೋದರೂ ಇದು ಸಾಧ್ಯವಾಗಿಲ್ಲ ಎಂದು ಚಿಂತಕ ಚಕ್ರವರ್ತಿ ಸೂಲಿಬೆಲೆ ಬಿಜೆಪಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ರಾಜ್ಯದಲ್ಲಿ ಆಝಾನ್ ವಿರುದ್ಧ ಸುಪ್ರಭಾತ ಅಭಿಯಾನದ ಹಿನ್ನೆಲೆಯಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಬೆಳಗ್ಗಿನ ಅಜಾನ್ ಜಾತ್ಯತೀತ ರಾಷ್ಟ್ರಕ್ಕೆ ಹೇಳಿ ಮಾಡಿಸಿರೋದು ಅಲ್ಲ. ಅಲ್ಲಾ ಒಬ್ಬನೇ. ದೇವರು ಬೇರೆ ಯಾರೂ ದೇವರಿಲ್ಲ ಅನ್ನೋದನ್ನು ಪ್ರತಿಯೊಬ್ಬ ಹಿಂದೂ ಕೇಳೋಕೆ ಸಾಧ್ಯ ಇಲ್ಲ ಎಂದು ಅವರು ಟೀಕಿಸಿದರು.
ಬೆಳಗ್ಗಿನ ಜಾವದ ಅಝಾನ್ ಎಲ್ಲರ ನಿದ್ದೆ ಹಾಳು ಮಾಡುತ್ತದೆ. ಇದಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಆದೇಶ ಕೂಡಾ ಇದೆ. ಆದರೆ ಕರ್ನಾಟಕ ಸರ್ಕಾರ ಸುದೀರ್ಘ ನಿದ್ರೆಯಲ್ಲಿದೆ. ಸರ್ಕಾರಕ್ಕೆ ಎಷ್ಟೇ ಒತ್ತಡ ಹಾಕಿದರೂ ಬೆಳಗ್ಗಿನ ಆಝಾನ್ ಧ್ವನಿ ನಿಲ್ಲಿಸುವ ಪ್ರಯತ್ನ ಮಾಡುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ನೀವು ಕಾನೂನು ಮೀರಿದವರನ್ನು ಹಿಡಿಯದಿದ್ದರೆ ನಾವೂ ಕಾನೂನು ಮೀರುತ್ತೇವೆ. ಹಿಡಿಯೋದಿದ್ದರೆ ಎಲ್ಲರನ್ನೂ ಹಿಡಿಯಿರಿ ಎಂಬ ಸವಾಲನ್ನು ಸಮಾಜ ಹಾಕಿದೆ. ಇದು ಸ್ವಾಗತಾರ್ಹ ನಿರ್ಧಾರವಾಗಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5


