ತುಮಕೂರು: ರಸ್ತೆ ಬದಿ ನಿಲ್ಲಿಸಿದ್ದ ಲಾರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಶಿಕ್ಷಕ ದಂಪತಿ ಸಾವಿಗೀಡಾದ ಘಟನೆ ಮಲ್ಲಸಂದ್ರ ಬಳಿ ಬುಧವಾರ ಬೆಳಗ್ಗೆ ನಡೆದಿದೆ.
ಗುಬ್ಬಿ ತಾಲೂಕಿನ ದಂಪತಿ 52 ವರ್ಷ ವಯಸ್ಸಿನ ಈಶ್ವರಪ್ಪ, 48 ವರ್ಷ ವಯಸ್ಸಿನ ಕಲ್ಪನಾ ಮೃತಪಟ್ಟವರು ಎಂದು ಗುರುತಿಸಲಾಗಿದೆ. ಮೃತ ದಂಪತಿ ಇಬ್ಬರೂ ಶಿಕ್ಷಕರಾಗಿದ್ದರು. ಗುಬ್ಬಿಯ ಖಾಸಗಿ ಶಾಲೆಯಲ್ಲಿ ಈಶ್ವರಪ್ಪ, ಗುಬ್ಬಿ ಸರ್ಕಾರಿ ಶಾಲೆಯಲ್ಲಿ ಕಲ್ಪನಾ ಶಿಕ್ಷಕರಾಗಿ ಕೆಲಸ ನಿರ್ವಹಿಸುತ್ತಿದ್ದರು ಎಂದು ತಿಳಿದು ಬಂದಿದೆ.
ಬುಧವಾರ ತುಮಕೂರು ಕಡೆಯಿಂದ ಗುಬ್ಬಿ ಕಡೆಗೆ ತೆರಳುತ್ತಿದ್ದ ವೇಳೆ ನಿಯಂತ್ರಣ ಕಳೆದುಕೊಂಡ ಕಾರು, ರಸ್ತೆ ಬದಿ ನಿಂತಿದ್ದ ಲಾರಿಗೆ ಡಿಕ್ಕಿಯಾಗಿದ್ದು, ಅಪಘಾತದ ರಭಸಕ್ಕೆ ಕಾರು ನಜ್ಜುಗುಜ್ಜಾಗಿದ್ದು, ದಂಪತಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಬಂದ ತುಮಕೂರು ಗ್ರಾಮಾಂತರ ಠಾಣೆ ಪೊಲೀಸರು ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದು, ಘಟನೆ ಸಂಬಂಧ ಮಾಹಿತಿ ಸಂಗ್ರಹಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy