ರಾಯಚೂರು: ಪರೀಕ್ಷೆ ಕೆಲಸ ಮುಗಿಸಿ ಬರುತ್ತಿದ್ದ ಉಪನ್ಯಾಸರೊಬ್ಬರನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಜಿಲ್ಲೆಯ ದೇವದುರ್ಗ ಸಮೀಪ ನಡೆದಿದೆ.
ದೇವದುರ್ಗದ ಬಾಲಕಿಯರ ಕಾಲೇಜು ಉಪನ್ಯಾಸಕರಾಗಿದ್ದ 59 ವರ್ಷ ವಯಸ್ಸಿನ ಮಾನಪ್ಪ ಗೋಪಾಳಾಪುರ( ಪರೀಕ್ಷಾ ಕಾರ್ಯ ಮುಗಿಸಿಕೊಂಡು ಬರುತ್ತಿದ್ದ ವೇಳೆ ವೇಳೆ ದಾರಿಯಲ್ಲಿ ಅಡ್ಡಗಟ್ಟಿದ ದುಷ್ಕರ್ಮಿಗಳು ಕಲ್ಲು ಎತ್ತಿಹಾಕಿ ಹತ್ಯೆ ಮಾಡಿದ್ದಾರೆ.
ಮಾನಪ್ಪ ಅವರು ಯಾದಗಿರಿ ಜಿಲ್ಲೆ ಸುರಪುರ ತಾಲೂಕಿನ ಐಯಾಳಕ್ಕೆ ತೆರಳುತ್ತಿದ್ದ ವೇಳೆಯಲ್ಲಿ ಹಲ್ಲೆ ನಡೆಸಿ ಕೊಲೆ ಮಾಡಲಾಗಿದೆ. ಸುರಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಹತ್ಯೆಗೆ ಕಾರಣಗಳೇನು ಎನ್ನುವುದು ತಿಳಿದು ಬಂದಿಲ್ಲ. ಘಟನೆ ಸಂಬಂಧ ಪೊಲೀಸರು ತನಿಖೆ ಚುರುಕುಗೊಳಿಸಿದ್ದು, ಆರೋಪಿಗಳಿಗಾಗಿ ಶೋಧ ಆರಂಭಿಸಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5


