ಹಿಂದೂ ದೇವಾಲಯವನ್ನು ಧ್ವಂಸಗೊಳಿಸಿದ 22 ಮಂದಿ ಆರೋಪಿಗಳಿಗೆ ಪಾಕಿಸ್ತಾನ ಭಯೋತ್ಪಾದನಾ ವಿರೋಧಿ ನ್ಯಾಯಾಲಯ ತಲಾ 5 ವರ್ಷ ಜೈಲು ಶಿಕ್ಷೆ ವಿಧಿಸಿದೆ.
ಕಳೆದ ವರ್ಷ ಜುಲೈ ತಿಂಗಳ 2021ರಲ್ಲಿ ಮದ್ರಸಾದಲ್ಲಿ 8 ವರ್ಷದ ಬಾಲಕ ಮೂತ್ರ ವಿಸರ್ಜನೆ ಮಾಡಿದ. ಈ ಹಿನ್ನೆಲೆಯಲ್ಲಿ ಮುಸ್ಲಿಮರು ನಮ್ಮ ದೇವರನ್ನು ಅಪವಿತ್ರಗೊಳಿಸಿದ್ದಾನೆ ಎಂದು ಆರೋಪಿಸಿ ಗಣೇಶ ಮಂದಿರವನ್ನು ಧ್ವಂಸಗೊಳಿಸಿದ್ದರು. ಭದ್ರತೆಗಾಗಿ ನಿಯೋಜಿಸಿದ್ದ ಪೊಲೀಸರ ಮೇಲೂ ಹಲ್ಲೆ ನಡೆಸಿದ್ದರು. ಈ ಹಿನ್ನೆಲೆಯಲ್ಲಿ 84 ಜನರನ್ನು ವಶಕ್ಕೆ ತೆಗೆದುಕೊಳ್ಳಲಾಗಿತ್ತು.
ಘಟನೆಗೆ ಸಂಬಂಧಿಸಿದಂತೆ ಎಲ್ಲರನ್ನು ವಿಚಾರಣೆ ನಡೆಸಿ 22 ಮಂದಿಗೆ ಜೈಲು ಶಿಕ್ಷೆ ವಿಧಿಸಿ ನ್ಯಾಯಾಧೀಶ ನಾಸೀರ್ ಹುಸೇನ್ ತೀರ್ಪು ಪ್ರಕಟಿಸಿದ್ದಾರೆ. ಉಳಿದ 62 ಮಂದಿಯನ್ನು ಖುಲಾಸೆಗೊಳಿಸಲಾಗಿದೆ. ಗಣೇಶ ಮಂದಿರದ ಮೇಲಿನ ದಾಳಿಯನ್ನು ಪಾಕಿಸ್ತಾನ ಖಂಡಿಸಿ ನಿರ್ಣಯ ಅಂಗೀಕರಿಸಿತ್ತು.
ವರದಿ: ಆಂಟೋನಿ ಬೇಗೂರು
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5