ತಮಿಳುನಾಡಿನಲ್ಲಿ ಬಂಧಿಸಲಾಗಿದ್ದ ಕಿರಾತಕ ಆ್ಯಸಿಡ್ ನಾಗೇಶ್ ನ ಕಾಲಿಗೆ ಪೊಲೀಸರು ಗುಂಡು ಹೊಡೆದಿದ್ದು, ತಪ್ಪಿಸಿಕೊಳ್ಳಲು ಯತ್ನಿಸಿದ ವೇಳೆ, ಪೊಲೀಸರು ಆರೋಪಿಗೆ ಗುಂಡು ಹೊಡೆದಿದ್ದಾರೆ.
ತಮಿಳುನಾಡಿನಲ್ಲಿ ಆರೋಪಿಯನ್ನು ಬಂಧಿಸಿ ಬೆಂಗಳೂರಿಗೆ ಕರೆ ತರುತ್ತಿದ್ದ ವೇಳೆ ನಾಗೇಶ್ ತಪ್ಪಿಸಿಕೊಳ್ಳಲು ಯತ್ನಿಸಿದ್ದ ಕೆಂಗೇರಿ ಮೇಲ್ಸೇತುವೆ ಬಳಿ ಮೂತ್ರ ವಿಸರ್ಜನೆಯ ನೆಪ ಹೇಳಿದ ನಾಗೇಶ್, ಪೊಲೀಸರ ಮೇಲೆ ಕಲ್ಲಿನಿಂದ ಹಲ್ಲೆ ನಡೆಸಿ, ಪರಾರಿಯಾಗಲು ಮುಂದಾಗಿದ್ದಾನೆ. ಈ ವೇಳೆ ಪೊಲೀಸರು ಗುಂಡು ಹಾರಿಸಿದ್ದಾರೆ.
ಗುಂಡೇಟಿನಿಂದ ನಾಗೇಶ್ ನ ಬಲಗಾಲಿಗೆ ಗಾಯವಾಗಿದೆ ಎಂದು ತಿಳಿದು ಬಂದಿದೆ. ಕಳೆದ 16 ದಿನಗಳಿಂದ ಪೊಲೀಸರ ಕಣ್ಣು ತಪ್ಪಿಸಿ ಓಡಾಡುತ್ತಿದ್ದ ನಾಗೇಶ್, ನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5


