ಚಲನಚಿತ್ರಗಳ ಚಿತ್ರೀಕರಣದಲ್ಲಿ ಬಳಸುತ್ತಿದ್ದ ಬಣ್ಣ ಬಣ್ಣದ ಕಾರಿನಲ್ಲಿ ಮೃತದೇಹ ಪತ್ತೆಯಾಗಿದ್ದು ಸ್ಥಳೀಯರಲ್ಲಿ ಆತಂಕ ಮೂಡಿಸಿದೆ.
ರಾಜಾಜಿನಗರ ಕೈಗಾರಿಕಾ ಪ್ರದೇಶದಲ್ಲಿ ಕಳೆದ 2 ವರ್ಷಗಳಿಂದ ನಿಂತಿದ್ದ ಕಾರಿನ ಬಳಿ ದುರ್ವಾಸನೆ ಗ್ರಹಿಸಿದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.ಸ್ಥಳಕ್ಕೆ ಭೇಟಿ ನೀಡಿ ಪೊಲೀಸರು ಪರಿಶೀಲಿಸಿದಾಗ ಕಾರಿನಲ್ಲಿ ವ್ಯಕ್ತಿಯ ಮೃತದೇಹ ಪತ್ತೆಯಾಗಿದ್ದು, ಮೃತ ವ್ಯಕ್ತಿಯ ಗುರುತು ಇನ್ನು ಪತ್ತೆಯಾಗಿಲ್ಲ.
ಈ ಹಿಂದೆ ಕಾರನ್ನು ಕೆಲ ಚಲನಚಿತ್ರಗಳ ಚಿತ್ರೀಕರಣದಲ್ಲಿ ಬಳಸುತ್ತಿದ್ದರು, ಕಾರು ಮಾಲೀಕರು ಮನೆ ಬದಲಾಯಿಸಿದ್ದಾರೆ. ಆಗಿನಿಂದ ಮನೆ ಬಳಿಯೇ ಕಾರು ನಿಂತಿತ್ತು ಎಂದು ತಿಳಿದು ಬಂದಿದೆ.
ವರದಿ ಆಂಟೋನಿ ಬೇಗೂರು
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB


