ಮಧುಗಿರಿ – ಹೆಚ್.ಡಿ.ದೇವೇಗೌಡರು ವಾಲ್ಮೀಕಿ ಸಮುದಾಯಕ್ಕೆ ಮೀಸಲಾತಿ ಕಲ್ಪಿಸಿದ ಫಲವಾಗಿ ಈ ಸಮುದಾಯ ಆರ್ಥಿಕವಾಗಿ ಸಾಮಾಜಿಕವಾಗಿ ಮುನ್ನಡೆ ಸಾಧಿಸಿದೆ ಎಂದು ಶಾಸಕ ಎಂ.ವಿ.ವೀರಭಧ್ರಯ್ಯ ತಿಳಿಸಿದರು.
ಪಟ್ಟಣದ ರಾಜೀವ್ ಗಾಂಧಿ ಕ್ರೀಡಾಂಗಣದಲ್ಲಿ ಮಹರ್ಷಿ ವಾಲ್ಮೀಕಿ ಪರಿಶಿಷ್ಠ ಪಂಗಡಗಳ ಅಭಿವೃದ್ದಿ ನಿಗಮದ ವತಿಯಿಂದ 2018-19 ನೇ ಸಾಲಿನಲ್ಲಿ ಕೊರೆದ ಕೊಳವೆ ಬಾವಿಗಳಿಗೆ ಪಂಪ್ ಸೆಟ್ ಹಾಗೂ ಇತರ ಸಾಮಾಗ್ರಿಗಳನ್ನು ವಿತರಿಸಿ ಮಾತನಾಡಿದ ಅವರು, ದುರ್ಬಲ ಹಿಂದುಳಿದ ವರ್ಗಗಳಿಗೆ ಬಲ ತುಂಬುವ ಕೆಲಸವನ್ನು ದೇವೇಗೌಡರು ಮಾಡಿದ್ದು, ಹೆಚ್.ಡಿ.ಕುಮಾರಸ್ವಾಮಿ ಸಿ.ಎಂ ಆಗಿದ್ದಾಗ ಎಸ್.ಸಿ.ಪಿ-ಟಿ.ಎಸ್.ಪಿ ಯೋಜನೆಯಡಿ ಕ್ಷೇತ್ರಕ್ಕೆ 400 ಕೋಟಿ ರೂ ಅನುಧಾನ ನೀಡಿದ್ದರು ಎಂದರು.
ಮಲ್ಲನಾಯಕನಹಳ್ಳಿಯಲ್ಲಿ ವಾಲ್ಮೀಕಿ ಪ್ರತಿಮೆ ಸ್ಥಾಪಿಸಲು ವಯಕ್ತಿಕವಾಗಿ 50 ಸಾವಿರ ರೂ ನೀಡಿದ್ದೇನೆ. ಮಿಡಿಗೇಶಿ ಗ್ರಾಮದಲ್ಲಿ ಅಪೂರ್ಣಗೊಂಡಿರುವ ವಾಲ್ಮೀಕಿ ಭವನ ಪೂರ್ಣಗೊಳಿಸಲು 50 ಲಕ್ಷ ರೂ ಹೆಚ್ಚಿನ ಅನುಧಾನ ತಂದಿದ್ದೇನೆ. ಪಟ್ಟಣದಲ್ಲಿ ನಿರ್ಮಿಸುತ್ತಿರುವ ವಿಧ್ಯಾರ್ಥಿ ನಿಲಯಗಳು ಪೂರ್ಣಗೊಳ್ಳುವ ಹಂತದಲ್ಲಿದ್ದು, ವಿಧ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಪೂರಕ ವಾತಾವರಣ ಕಲ್ಪಿಸಲಿದೆ ಎಂದರು.
ಪುರಸಭಾ ಸದಸ್ಯ ಎಂ.ಆರ್.ಜಗನ್ನಾಥ್ ಮಾತನಾಡಿ, ಶಾಸಕ ವೀರಭದ್ರಯ್ಯನವರು ನಿಗಮದ ಅಧಿಕಾರಿಗಳೊಂದಿಗೆ ಚರ್ಚಿಸಿ ಹೆಚ್ಚುವರಿಯಾಗಿ 15 ಮೋಟಾರ್ ಪಂಪ್ ಸೆಟ್ ಗಳನ್ನು ತಂದಿದ್ದು, ನೀರಾವರಿಗೆ ಆಧ್ಯತೆ ನೀಡುವ ಮೂಲಕ ಕೃಷಿ ಕ್ಷೇತ್ರಕ್ಕೆ ಶಕ್ತಿ ತುಂಬಿದ್ದಾರೆ. ಮುಂದಿನ ಚುನಾವಣೆಯಲ್ಲಿ ರೈತರ ಬಗ್ಗೆ ಕಾಳಜಿ ಇರುವ ಜೆಡಿಎಸ್ ಪಕ್ಷ ಅದಿಕಾರಕ್ಕೆ ಬರಲಿದ್ದು, ಎಂ.ವಿ.ವೀರಭದ್ರಯ್ಯ ಅವರನ್ನು ಶಾಸಕರನ್ನಾಗಿ ಗೆಲ್ಲಿಸಿ ಎಂದರು.
ಪುರಸಭಾ ಸದಸ್ಯ ಎಂ.ಎಸ್.ಚಂದ್ರಶೇಖರ್ ಬಾಬು, ತಾಲೂಕು ಜೆ.ಡಿ.ಎಸ್ ಅಧ್ಯಕ್ಷ ಬಸವರಾಜು, ಎಸ್.ಟಿ ಘಟಕದ ಅಧ್ಯಕ್ಷ ರವಿ, ಎಸ್.ಸಿ ಘಟಕದ ಅಧ್ಯಕ್ಷ ಗುಂಡಗಲ್ಲು ಶಿವಣ್ಣ, ಮುಖಂಡರಾದ ಹನುಮಂತರಾಯಪ್ಪ, ನಾಗಭೂಷಣ್, ಕಂಬಣ್ಣ, ಷಫೀಕ್, ದೇವರಾಜು, ರವಿ ಬಜ್ಜ, ನಿಗಮದ ಜಿಲ್ಲಾ ವ್ಯವಸ್ಥಾಪಕ ಶ್ರೀನಿವಾಸ್, ಅಭಿವೃದ್ದಿ ಅಧಿಕಾರಿ ರಮೇಶ್ ರೆಡ್ಡಿ ಹಾಗೂ ಮುಂತಾದವರು ಇದ್ದರು.
ಬಾಕ್ಸ್ (ಪಟ್ಟಣದ ರಾಜೀವ್ ಗಾಂಧಿ ಕ್ರೀಡಾಂಗಣದಲ್ಲಿ ಮಹರ್ಷಿ ವಾಲ್ಮೀಕಿ ಪರಿಶಿಷ್ಠ ಪಂಗಡಗಳ ಅಭಿವೃದ್ದಿ ನಿಗಮದ ವತಿಯಿಂದ 2018-19 ನೇ ಸಾಲಿನಲ್ಲಿ ಕೊರೆದ ಕೊಳವೆ ಬಾವಿಗಳಿಗೆ ಪಂಪ್ ಸೆಟ್ ಹಾಗೂ ಇತರ ಸಾಮಾಗ್ರಿಗಳನ್ನು ಶಾಸಕ ಎಂ.ವಿ.ವೀರಭಧ್ರಯ್ಯ ವಿತರಿಸಿದರು.)
ವರದಿ: ಅಭಿದ್ ಮಧುಗಿರಿ
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB