nammatumakuru

    Subscribe to Updates

    Get the latest creative news from FooBar about art, design and business.

    What's Hot

    ನಾಡಪ್ರಭು ಕೆಂಪೇಗೌಡರದು ಜಾತ್ಯತೀತ ಆಡಳಿತ: ಶಾಸಕ ಎಂ.ಟಿ.ಕೃಷ್ಣಪ್ಪ

    June 29, 2026

    ಸಾರ್ವಜನಿಕ ದೂರು ಅರ್ಜಿಗಳನ್ನು ಸಮರ್ಪಕವಾಗಿ ವಿಲೇವಾರಿ ಮಾಡದೆ ಕರ್ತವ್ಯಲೋಪ | ಹೆಗ್ಗರೆ ಗ್ರಾ.ಪಂ. ಪಿಡಿಒ ಅಮಾನತು

    June 29, 2026

    ತುಮಕೂರು: ಜಿಲ್ಲಾ ಪತ್ರಕರ್ತರ ಸಂಘದಿಂದ ಶ್ರವಣ ತಪಾಸಣಾ ಶಿಬಿರ

    June 29, 2026
    Facebook Twitter Instagram
    ಟ್ರೆಂಡಿಂಗ್
    • ನಾಡಪ್ರಭು ಕೆಂಪೇಗೌಡರದು ಜಾತ್ಯತೀತ ಆಡಳಿತ: ಶಾಸಕ ಎಂ.ಟಿ.ಕೃಷ್ಣಪ್ಪ
    • ಸಾರ್ವಜನಿಕ ದೂರು ಅರ್ಜಿಗಳನ್ನು ಸಮರ್ಪಕವಾಗಿ ವಿಲೇವಾರಿ ಮಾಡದೆ ಕರ್ತವ್ಯಲೋಪ | ಹೆಗ್ಗರೆ ಗ್ರಾ.ಪಂ. ಪಿಡಿಒ ಅಮಾನತು
    • ತುಮಕೂರು: ಜಿಲ್ಲಾ ಪತ್ರಕರ್ತರ ಸಂಘದಿಂದ ಶ್ರವಣ ತಪಾಸಣಾ ಶಿಬಿರ
    • ಕೊರಟಗೆರೆ: 10,016 ಮಕ್ಕಳಿಗೆ ಪೋಲಿಯೋ ಲಸಿಕಾ ಗುರಿ: ಡಾ.ಜ್ಯೋತ್ಸ್ನಾ ರೆಡ್ಡಿ ಕರೆ
    • ಜುಲೈ 3ರಂದು ‘ದಲಿತ ಜನಾಗ್ರಹ ಸಮಾವೇಶ’: ಸರಗೂರು ಪ್ರವಾಸಿ ಮಂದಿರದಲ್ಲಿ ಪೋಸ್ಟರ್ ಬಿಡುಗಡೆ
    • ಮಧುಗಿರಿ: ಸಿದ್ಧಾರ್ಥ ವಸತಿ ಪ್ರೌಢಶಾಲೆಯಲ್ಲಿ 2006ರ ಬ್ಯಾಚ್ ಹಳೆಯ ವಿದ್ಯಾರ್ಥಿಗಳಿಂದ ಉಚಿತ ಸಮವಸ್ತ್ರ ವಿತರಣೆ
    • SIR: ಅರ್ಹ ನಾಗರಿಕರ ಮತದಾನದ ಹಕ್ಕು ಕಸಿದುಕೊಳ್ಳುವ ಅಪಾಯ: ಹೆಚ್.ವಿ. ವಾಸು ಆತಂಕ
    • ರೈತರು ಭೂಮಿ ಹೊಂದುವುದಷ್ಟೇ ಅಲ್ಲ, ಕಾನೂನು ಅರಿವು ಬೆಳೆಸಿಕೊಳ್ಳುವುದು ಮುಖ್ಯ: ನಿವೃತ್ತ ಕೆಎಎಸ್‌ ಅಧಿಕಾರಿ ಕೆ.ಎನ್.ಲಿಂಗಪ್ಪ ಪ್ರತಿಪಾದನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸಿದ್ದರ ತಪೋವನವಾದ ಸಿದ್ಧರಬೆಟ್ಟದಲ್ಲಿ ಸ್ವಾಸ್ಥ್ಯ ಸಂವರ್ಧನಾ ಶಿಬಿರ
    ಕೊರಟಗೆರೆ May 16, 2022

    ಸಿದ್ದರ ತಪೋವನವಾದ ಸಿದ್ಧರಬೆಟ್ಟದಲ್ಲಿ ಸ್ವಾಸ್ಥ್ಯ ಸಂವರ್ಧನಾ ಶಿಬಿರ

    By adminMay 16, 2022No Comments2 Mins Read
    koratte gere

    Provided by
    Provided by

    ಕೊರಟಗೆರೆ : ಕರ್ನಾಟಕದ ಸಂಜೀವಿನಿ ಬೆಟ್ಟವೆಂದೇ ಕರೆಸಿಕೊಳ್ಳುವ ತುಮಕೂರು ಜಿಲ್ಲೆಯ ಕೊರಟಗೆರೆ ತಾಲ್ಲೂಕಿನ ಸಿದ್ಧರಬೆಟ್ಟದ ಪ್ರಕೃತಿ ಮಡಿಲಲ್ಲಿ ಸ್ವಾಸ್ಥ್ಯ ಮಾರ್ಗದ ವತಿಯಿಂದ ಎರಡು ದಿನಗಳ ಪ್ರಾಕೃತಿಕ ಸ್ವಾಸ್ಥ್ಯ ಜೀವನ ಕೌಶಲ್ಯ ತರಬೇತಿ ಶಿಬಿರ ನಡೆಸಲಾಯಿತು.

    ಸ್ವಾಸ್ಥ್ಯ ಜೀವನ ಮಾರ್ಗ ಯೋಗ ಪ್ರತಿಷ್ಠಾನ, ನಾಗಮಂಗಲ ಇವರ ವತಿಯಿಂದ ಖ್ಯಾತ ಯೋಗ ಗುರು ಲಕ್ಷ್ಮಣ್ ಜೀ ಅವರ ಸಾರಥ್ಯದಲ್ಲಿ ನಡೆದ ಈ ಶಿಬಿರದಲ್ಲಿ ಯೋಗ, ಧ್ಯಾನ, ಪ್ರಕೃತಿ ಚಿಕಿತ್ಸೆ, ಆಯುರ್ವೇದ ಚಿಕಿತ್ಸೆ, ಸಸ್ಯೌಷಧಗಳ ಪರಿಚಯವನ್ನು ಒಳಗೊಂಡ ಸ್ವಾಸ್ಥ್ಯ ಚಿಂತನೆಯ ಜೊತೆಗೆ ಚಾರಣದ ಹೂರಣವನ್ನು ಒಳಗೊಂಡಿದ್ದು ಶಿಬಿರದ ವಿಶೇಷ.

    ಮೊದಲಿಗೆ ಯೋಗ ಮತ್ತು ಪ್ರಕೃತಿ ಚಿಕಿತ್ಸೆ ತಜ್ಞ ವೈದ್ಯೆ ಡಾ.ಭವ್ಯರವರು ದೀಪ ಬೆಳಗಿಸುವ ಮೂಲಕ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದ ಅವರು ಆರೋಗ್ಯ ಸಂರಕ್ಷಣೆಯಲ್ಲಿ ಆಹಾರ ವಿಹಾರ ವ್ಯಾಯಾಮ ಅತೀ ಮುಖ್ಯ ಆ ನಿಟ್ಟಿನಲ್ಲಿ ಎಲ್ಲರೂ ಯೋಗ ಮತ್ತು ಪ್ರಕೃತಿ ಚಿಕಿತ್ಸೆ ಕಡೆ ಗಮನ ಹರಿಸಬೇಕಿದೆ ಎಂದರು.

    ತದನಂತರ ಮಾತನಾಡಿದ ಸ್ವಾಸ್ಥ್ಯ ಮಾರ್ಗ ಜೀವನ ಮಾರ್ಗ ಯೋಗ ಪ್ರತಿಷ್ಠಾನದ ಸಂಸ್ಥಾಪಕರಾದ ಲಕ್ಷ್ಮಣ್ ಜೀ ಅವರು ಆಧುನಿಕ ಜೀವನ ಶೈಲಿ,ಜನರ ಅತಿಯಾದ ಜೀವನ ನಿರೀಕ್ಷೆಗಳು ನಮ್ಮನ್ನು ಅನಾರೋಗ್ಯದ ಕಡೆ ಕೊಂಡೊಯ್ಯುತ್ತಿವೆ ಆರೋಗ್ಯವನ್ನು ಬಯಸುವ ಪ್ರತಿಯೋಬ್ಬರೂ ವಿಕೃತಿಯಿಂದ ಪ್ರಕೃತಿ ಕಡೆಗೆ ತಿರುಗಬೇಕಿದೆ ಆ ನಿಟ್ಟಿನಲ್ಲಿ ಈ ಶಿಬಿರವನ್ನು ಜನರಲ್ಲಿ ಸ್ವಾಸ್ಥ್ಯ ಚಿಂತನೆಯನ್ನು ಬಿತ್ತುವ ಉದ್ದೇಶದಿಂದ ಆಯೋಜಿಸಲಾಗಿದೆ ಎಂದರು.


    Provided by
    Provided by

    ಶನಿವಾರ ಮತ್ತು ಭಾನುವಾರ ಎರಡು ದಿನಗಳ ಕಾಲ ನಡೆದ ಈ ಶಿಬಿರದಲ್ಲಿ ಯೋಗ,ಧ್ಯಾನ,ಪ್ರಾಣಾಯಾಮ ಸೇರಿದಂತೆ ಆಹಾರ ಚಿಕಿತ್ಸೆ,ಪ್ರಕೃತಿ ಚಿಕಿತ್ಸೆ ಸೇರಿದಂತೆ ಹಲವು ವೈವಿಧ್ಯತೆಯಿಂದ ಕೂಡಿತ್ತು.

    ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿದ್ಧ ಯೋಗ ಮತ್ತು ನಿಸರ್ಗ ಚಿಕಿತ್ಸೆ ತಜ್ಞ ವೈದ್ಯೆ ಡಾ.ಭವ್ಯ ರವರು ಕೆಲವು ಪ್ರಾಕೃತಿಕ ಚಿಕಿತ್ಸಾ ವಿಧಾನಗಳನ್ನು ಪರಿಚಯಿಸಿಕೊಟ್ಟರು. ನಾಗಮಂಗಲದ ವಿದ್ಯಾವತಿ ಆಯುರ್ವೇದ ಚಿಕಿತ್ಸಾಲಯದಿಂದ ಆಗಮಿಸಿದ್ದ ಡಾ.ವಿಶ್ವನಾಥ್ ರವರು ಆಯುರ್ವೇದ ಜೀವನ ಶೈಲಿ ದಿನಚರ್ಯೆ, ಋತು ಚರ್ಯೆಯ ಬಗ್ಗೆ ತಿಳಿಸಿಕೊಟ್ಟರು ಪರಿಸರ ಪ್ರೇಮಿ ಸಸ್ಯೌಷಧಗಳ ಸಂಶೋಧಕರಾದ ಗುಂಗುರುಮಳೆ ಮುರಳಿರವರು ಕೆಲವು ಸಸ್ಯಗಳ, ಬಳ್ಳಿಗಳ ಔಷಧೀಯ ಗುಣಗಳ ತಿಳಿಸಿಕೊಟ್ಟು ನಿತ್ಯ ಆಹಾರದಲ್ಲಿ ಸ್ಥಳೀಯವಾಗಿ ಸ್ವಾಭಾವಿಕವಾಗಿ ಬೆಳೆಯುವಂತಹ ಕೆಲವು ಸೊಪ್ಪು , ಬಳ್ಳಿ, ದಂಟು, ಚಿಗುರೆಲೆಗಳನ್ನು ಉಪಯೋಗ ಅರಿತು ಬಳಸಿದರೆ ವೈದ್ಯರಿಂದ ದೂರ ಉಳಿಯಬಹುದು ಎಂದರು. ನಾಟಿ ವೈದ್ಯ ಚಿಕ್ಕಣ ರವರು ಸೋರಿಯಾಸಿಸ್,ಮೈಗ್ರೇನ್‌, ಮುಟ್ಟಿನ ತೊಂದರೆ ಸೇರಿದಂತೆ ಹಲವು ಸಮಸ್ಯೆಗಳಿಗೆ ಮಾಡಿಕೊಳ್ಳ ಬಹುದಾದ ಕೆಲವು ನಾಟಿ ಔಷಧಗಳ ಬಗ್ಗೆ ತಿಳಿಸಿಕೊಟ್ಟರು.

    ರಾಜ್ಯದ ನಾನಾ ಭಾಗಗಳಿಂದ ಹಲವರು ಯೋಗ ಶಿಕ್ಷಕರು 25 ಕ್ಕೂ ಹೆಚ್ಚಿನ ಶಿಬಿರಾರ್ಥಿಗಳು ಶಿಬಿರದಲ್ಲಿ ಭಾಗವಹಿಸಿ ಪ್ರಯೋಜನ ಪಡೆದುಕೊಂಡರು.

    ವರದಿ.
    ಮಂಜುಸ್ವಾಮಿ.ಎಂ.ಎನ್.
    ಕೊರಟಗೆರೆ.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB

    admin
    • Website

    Related Posts

    ಕೊರಟಗೆರೆ: 10,016 ಮಕ್ಕಳಿಗೆ ಪೋಲಿಯೋ ಲಸಿಕಾ ಗುರಿ: ಡಾ.ಜ್ಯೋತ್ಸ್ನಾ ರೆಡ್ಡಿ ಕರೆ

    June 29, 2026

    ಕೊರಟಗೆರೆ: ಜೂ.28 ರಿಂದ ಪೋಲಿಯೋ ಲಸಿಕೆ ಕಾರ್ಯಕ್ರಮ

    June 25, 2026

    ಮಾದಕ ವ್ಯಸನ ಮುಕ್ತ ಸಮಾಜ ನಿರ್ಮಾಣ ಪ್ರತಿಯೊಬ್ಬ ನಾಗರಿಕನ ಕರ್ತವ್ಯ: ಪಿಎಸ್‌ ಐ ತೀರ್ಥೇಶ್

    June 25, 2026

    Leave A Reply Cancel Reply

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುರುವೇಕೆರೆ

    ನಾಡಪ್ರಭು ಕೆಂಪೇಗೌಡರದು ಜಾತ್ಯತೀತ ಆಡಳಿತ: ಶಾಸಕ ಎಂ.ಟಿ.ಕೃಷ್ಣಪ್ಪ

    June 29, 2026

    ತುರುವೇಕೆರೆ: ನಾಡಪ್ರಭು ಕೆಂಪೇಗೌಡರು ಒಂದೇ ಜಾತಿಗೆ ಅಥವಾ ಸಮುದಾಯದ ಒಂದೇ ಸಮಾಜಕ್ಕೆ ಸೀಮಿತರಾಗದೆ ಜಾತ್ಯತೀತವಾಗಿ ಆಡಳಿತ ನಡೆಸಿದ್ದರು ಎಂದು ಶಾಸಕ…

    ಸಾರ್ವಜನಿಕ ದೂರು ಅರ್ಜಿಗಳನ್ನು ಸಮರ್ಪಕವಾಗಿ ವಿಲೇವಾರಿ ಮಾಡದೆ ಕರ್ತವ್ಯಲೋಪ | ಹೆಗ್ಗರೆ ಗ್ರಾ.ಪಂ. ಪಿಡಿಒ ಅಮಾನತು

    June 29, 2026

    ತುಮಕೂರು: ಜಿಲ್ಲಾ ಪತ್ರಕರ್ತರ ಸಂಘದಿಂದ ಶ್ರವಣ ತಪಾಸಣಾ ಶಿಬಿರ

    June 29, 2026

    ಕೊರಟಗೆರೆ: 10,016 ಮಕ್ಕಳಿಗೆ ಪೋಲಿಯೋ ಲಸಿಕಾ ಗುರಿ: ಡಾ.ಜ್ಯೋತ್ಸ್ನಾ ರೆಡ್ಡಿ ಕರೆ

    June 29, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.