ಯಾದಗಿರಿ: ಜಿಲ್ಲೆಯ ಮಿನಿ ವಿಧಾನ ಸೌಧದ ಮುಂಭಾಗದಲ್ಲಿ ಅಂಬೇಡ್ಕರ್ ಸ್ವಾಭಿಮಾನಿ ಸೇನೆ ಯಾದಗಿರಿ ಜಿಲ್ಲಾ ಸಮಿತಿ ವತಿಯಿಂದ ಡಾ.ಆರ್.ಕೋದಂಡರಾಮ್ ಅವರ ಮಾರ್ಗದರ್ಶನದಲ್ಲಿ ಸರಳ ಸಾಮೂಹಿಕ ವಿವಾಹ ಮತ್ತು ಮಂತ್ರ ಮಾಂಗಲ್ಯ ಬುದ್ಧ ವಂದನಾ ಹಾಗೂ ಮಂಗಲಧಾರಣೆ ನೆರವೇರಿಸಲಾಯಿತು.
ಅಂಬೇಡ್ಕರ್ ಸ್ವಾಭಿಮಾನಿ ಸೇನೆಯ ರಾಜ್ಯ ಕಾರ್ಯದರ್ಶಿಗಳು ಮತ್ತು ಯಾದಗಿರಿ ಜಿಲ್ಲಾ ಅಧ್ಯಕ್ಷರಾದ ಕಾಶೀನಾಥ್ ನಾಟೇಕರ್ ರವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ 15 ಜೋಡಿಗಳಿಗೆ ವಿವಾಹವನ್ನು ನೇರವೇರಿಸಲಾಯಿತು. ವಿವಾಹ ಕಾರ್ಯಕ್ರಮವನ್ನು ನಾಗಪುರದ ನಾಗಾರ್ಜುನ ಬಂತೇಜಿಯವರು ನಡೆಸಿಕೊಟ್ಟರು.
ಈ ಸಂದರ್ಭದಲ್ಲಿ ರಾಜ್ಯ ಗೌರವ ಅಧ್ಯಕ್ಷರಾದ ಶಿವರುದ್ರಪ್ಪ, ರಾಜ್ಯ ಉಪಾಧ್ಯಕ್ಷರಾದ ಆನಂದ್ ಕುಮಾರ್ ಎಂ., ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಮಂಜುನಾಥ್ ಜೆ.ಇ., ರಾಜ್ಯ ಕಾರ್ಯದರ್ಶಿಗಳು ಮತ್ತು ಚಿತ್ರದುರ್ಗ ಜಿಲ್ಲಾ ಅಧ್ಯಕ್ಷರಾದ ರಾಮಚಂದ್ರ ಕೆ ., ರಾಜ್ಯ ಕಾರ್ಯದರ್ಶಿಗಳು ಮತ್ತು ಯಾದಗಿರಿ ಜಿಲ್ಲಾ ಅಧ್ಯಕ್ಷರಾದ ಕಾಶೀನಾಥ್ ನಾಟೇಕರ್ ರಾಜ್ಯ ಸಂಘಟನಾ ಕಾರ್ಯದರ್ಶಿಗಳಾದ ಜಗದೀಶ್ ಮೈಸೂರು ಜಿಲ್ಲೆ ಹುಣಸೂರು ತಾಲ್ಲೂಕು ಅಧ್ಯಕ್ಷರಾದ ನಾಗೇಶ್ ಮತ್ತಿತರರು ಭಾಗವಹಿಸಿದ್ದರು.
ವರದಿ: ಮುರುಳಿಧರನ್ ಆರ್., ಹಿರಿಯೂರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5