ತುಮಕೂರು: ಅಲ್ಪಸಂಖ್ಯಾತರ ಸಮಾವೇಶ ನಡೆಯಲಿದ್ದು, ತಿಪಟೂರಿನಿಂದ ಒಂದೂವರೆಯಿಂದ ಎರಡು ಸಾವಿರ ಜನ ಸಮಾವೇಶದಲ್ಲಿ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಮಾಜಿ ಶಾಸಕ ಕಾಂಗ್ರೆಸ್ ನ ಕೆ.ಷಡಕ್ಷರಿಯವರು ತಿಳಿಸಿದರು.
ತಿಪಟೂರು ನಗರದಲ್ಲಿ ಮಾತನಾಡಿದ ಅವರು , ಅಲ್ಪಸಂಖ್ಯಾತರಿಗೆ ಸಂವಿಧಾನಬದ್ಧವಾಗಿ ಸಿಗಬೇಕಾದ ನ್ಯಾಯ ಸಿಗುತ್ತಿಲ್ಲ , ಸರ್ಕಾರದ ಸವಲತ್ತುಗಳು ಸಿಗುತ್ತಿಲ್ಲ. 22ರಂದು ತುಮಕೂರಿನ ಜಿಲ್ಲಾಮಟ್ಟದಲ್ಲಿ ಅಲ್ಪಸಂಖ್ಯಾತರ ಸಮಾವೇಶ ಏರ್ಪಡಿಸಲಾಗಿದೆ. ಅಲ್ಪಸಂಖ್ಯಾತರೆಂದರೆ ಮುಸಲ್ಮಾನರು ಮಾತ್ರವಲ್ಲ, ಕ್ರೈಸ್ತರು, ಸಿಖ್ಖರು ಇನ್ನೂ ಅನೇಕ ಪಂಗಡಗಳು ಬರುತ್ತದೆ. ಈ ಕಾರ್ಯಕ್ರಮಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಸೇರಿದಂತೆ ರಾಜ್ಯದ ಪ್ರಮುಖ ನಾಯಕರು ಜಿಲ್ಲಾ ನಾಯಕರು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.
ಬಿಜೆಪಿ ಸರ್ಕಾರವು ಜನಸಾಮಾನ್ಯರ ಕಷ್ಟಕ್ಕೆ ಸ್ಪಂದಿಸಿ ದೇ ಅಗತ್ಯವಸ್ತುಗಳ ಬೆಲೆಗಳನ್ನು ಗಗನಕ್ಕೇರುತ್ತಿದ್ದು ಅನಾವಶ್ಯಕವಾಗಿ ಸಾವಿರಾರು ವರ್ಷಗಳ ಹಿಂದಿನ ವಿಷಯವನ್ನು ಮುಖ್ಯವಾಗಿಸಿಕೊಂಡು ಅಲ್ಪಸಂಖ್ಯಾತರ ಮೇಲೆ ದೌರ್ಜನ್ಯ ಎಸಗುತ್ತಿದ್ದಾರೆ ಬಿಜೆಪಿ ಸರ್ಕಾರ ಅಲ್ಪಸಂಖ್ಯಾತರ ಪರವಿಲ್ಲ ಎಂದರು ಇನ್ನು ಆರು ತಿಂಗಳಲ್ಲಿ ಸರ್ಕಾರ ವಿಸರ್ಜನೆ ಗೊಳ್ಳಲಿದೆ ಎಂದು ಕಾಂಗ್ರೆಸ್ ಮುಖಂಡ ಲೋಕೇಶ್ವರ್ ಹೇಳಿದರು.
ಇದೇ ಸಂದರ್ಭದಲ್ಲಿ ತಾಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಡೆನೂರು ಕಾಂತರಾಜ್ ಕಾರ್ಯಕರ್ತ ಲೋಕನಾಥ್ ಸಿಂಗ್ ಮಾಜಿ ನಗರಸಭಾ ಅಧ್ಯಕ್ಷ ಪ್ರಕಾಶ್ ಹಾಗೂ ಅಲ್ಪಸಂಖ್ಯಾತ ಮುಖಂಡರು ಹಾಜರಿದ್ದರು.
ವರದಿ: ಆನಂದ ತಿಪಟೂರು
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5