ಕೆನಡಾ ದೇಶದ ಸಂಸತ್ತಿನಲ್ಲಿ ತುಮಕೂರು ಮೂಲದ ಸಂಸದ ಚಂದ್ರ ಆರ್ಯ ಅವರು ತಮ್ಮ ಮಾತೃ ಭಾಷೆ ಕನ್ನಡದಲ್ಲೇ ಮಾತನಾಡುವ ಮೂಲಕ ಗಮನ ಸೆಳೆದಿದ್ದು, ಕನ್ನಡದಲ್ಲಿ ಮಾತನಾಡಲು ಕೆನಡಾ ಸಂಸತ್ ನಲ್ಲಿ ಅವಕಾಶ ದೊರಕಿದ್ದಕ್ಕೆ ಅವರು ಸಂತಸ ವ್ಯಕ್ತಪಡಿಸಿದ್ದಾರೆ.
“ಭಾರತ ದೇಶದ ಕರ್ನಾಟಕ ರಾಜ್ಯದ ತುಮಕೂರು ಜಿಲ್ಲೆಯ ಸಿರಾ ತಾಲೂಕಿನ ವ್ಯಕ್ತಿಯೊಬ್ಬ ಕೆನಡಾದಲ್ಲಿ ಸಂಸತ್ ಸದಸ್ಯನಾಗಿ ಆಯ್ಕೆಯಾಗಿ, ಮತ್ತು ಕನ್ನಡದಲ್ಲಿ ಮಾತನಾಡುತ್ತಿರುವುದು ಸುಮಾರು 5 ಕೋಟಿ ಕನ್ನಡಿಗರಿಗೆ ಹೆಮ್ಮೆಯ ಕ್ಷಣವಾಗಿದೆ” ಎಂದು ಅವರು ತಮ್ಮ ಭಾಷಣದಲ್ಲಿ ತಿಳಿಸಿದರು.
ಕನ್ನಡಿಗರು 2018ನೇ ಇಸವಿಯಲ್ಲಿ ಕೆನಡಾದ ಈ ಸಂಸತ್ ನಲ್ಲಿ ಕನ್ನಡ ರಾಜ್ಯೋತ್ಸವವನ್ನು ಆಚರಿಸಿದ್ದರು. ರಾಷ್ಟ್ರ ಕವಿ ಕುವೆಂಪು ಬರೆದಿರುವ ಮತ್ತು ನಟ ಸರ್ವಭೌಮ ಡಾ.ರಾಜ್ ಕುಮಾರ್ ಹಾಡಿರುವ ಎಲ್ಲಾದರೂ ಇರು ಎಂತಾದರೂ ಇರು, ಎಂದೆಂದಿಗೂ ನೀ ಕನ್ನಡವಾಗಿರು ಎನ್ನುವ ಸಾಲುಗಳನ್ನು ಅವರು ಓದಿ ಹೇಳಿದರು.
ಇನ್ನೂ ಈ ವಿಡಿಯೋವನ್ನು ಟ್ವೀಟ್ ಮಾಡಿರುವ ಚಂದ್ರ ಆರ್ಯ ಅವರು, ಕೆನಡಾದ ಸಂಸತ್ತಿನಲ್ಲಿ ನಾನು ನನ್ನ ಮಾತೃಭಾಷೆ ಕನ್ನಡದಲ್ಲಿ ಮಾತನಾಡಿದ್ದೇನೆ. ಈ ಸುಂದರ ಭಾಷೆ ಸುದೀರ್ಘ ಇತಿಹಾಸವನ್ನು ಹೊಂದಿದೆ ಮತ್ತು ಸುಮಾರು 50 ಮಿಲಿಯನ್ ಜನರು ಮಾತನಾಡುತ್ತಾರೆ. ಭಾರತದ ಹೊರಗಿನ ಜಗತ್ತಿನ ಯಾವುದೇ ಸಂಸತ್ತಿನಲ್ಲಿ ಕನ್ನಡ ಮಾತನಾಡುತ್ತಿರುವುದು ಇದೇ ಮೊದಲು ಎಂದು ಅವರು ಹೆಮ್ಮೆ ಪಟ್ಟಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5