ಧಾರವಾಡ: ನಿಶ್ಚಿತಾರ್ಥ ಮುಗಿಸಿ ವಾಪಸ್ ಆಗುತ್ತಿದ್ದ ವೇಳೆ ಕ್ರೂಸರ್ ವಾಹನ ಮರಕ್ಕೆ ಡಿಕ್ಕಿಯಾದ ಘಟನೆ ಧಾರವಾಡ ಜಿಲ್ಲೆಯ ಬಾಡ ಗ್ರಾಮದಲ್ಲಿ ಶನಿವಾರ ಬೆಳಗಿನ ಜಾವ 2 ಗಂಟೆ ಸುಮಾರಿಗೆ ನಡೆದಿದೆ.
ಅಪಘಾತದಲ್ಲಿ 8 ಜನರು ಸ್ಥಳದಲ್ಲೇ ಸಾವನ್ನಪ್ಪಿದ್ದರು. ಗಂಭೀರವಾಗಿ ಗಾಯಗೊಂಡಿದ್ದ 6 ಜನರನ್ನು ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದೀಗ ಗಾಯಗೊಂಡಿದ್ದ ಬಾಲಕಿ ಮನುಶ್ರೀ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾಳೆ. ಈ ಮೂಲಕ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ 9ಕ್ಕೆ ಏರಿಕೆಯಾಗಿದೆ.
ಚಾಲಕನ ಅಜಾಕರೋಕತೆಯೇ ಅಪಘಾತಕ್ಕೆ ಕಾರಣ ಎಂದು ಹೇಳಲಾಗಿದೆ. ಬೆನಕಟ್ಟಿ ಗ್ರಾಮದ ಅನನ್ಯಾ (14), ಹರೀಶ್ (13), ಶಿಲ್ಪಾ (34), ನೀಲವ್ವ (60), ಮಧುಶ್ರೀ (20) ಮಹೇಶ್ವರಯ್ಯ (11), ಶಂಭುಲಿಂಗಯ್ಯ (35) ಹಾಗೂ ಮನುಶ್ರೀ (16) ಮೃತಪಟ್ಟ ದುರ್ದೈವಿಗಳಾಗಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5