ತುಮಕೂರು: ಪ್ರೀತಿಸಿದ ಯುವತಿಯ ಆತ್ಮಹತ್ಯೆಯಿಂದ ನೊಂದ ಪ್ರೇಮಿಯೋರ್ವ ತಾನೂ ಆತ್ಮಹತ್ಯೆಗೆ ಶರಣಾಗಿದ್ದು, ಆತ್ಮಹತ್ಯೆ ಮಾಡಿಕೊಂಡ 6 ತಿಂಗಳ ಬಳಿಕ ಯುವಕನ ಅಸ್ಥಿ ಪಂಜರ ಕುಣಿಗಲ್ ತಾಲೂಕಿನ ಹುಲಿಯೂರುದುರ್ಗ ಮಾಗಡಿ ಬಳಿಯಲ್ಲಿ ಶುಕ್ರವಾರ ಪತ್ತೆಯಾಗಿದೆ.
ಮೃತನ ಬೈಕ್ ಶುಕ್ರವಾರ ಸಂಜೆ ಕಾಡುಶನೇಶ್ವರ ದೇವಾಲಯದ ಹಿಂಭಾಗದ ಕಾಡಿನ ಬಂಡೆ ಬಳಿ ದ್ವಿಚಕ್ರ ವಾಹನ ಪತ್ತೆಯಾಗಿತ್ತು. ಹೀಗಾಗಿ ಪೊಲೀಸರು ತನಿಖೆ ನಡೆಸಿದಾಗ ಅರಮನೆ ಹೊನ್ನಮಾಚನಹಳ್ಳಿಯ ಸಂತೋಷ ಎನ್ನುವುದು ತಿಳಿದು ಬಂದಿತ್ತು.
ಸಂತೋಷ ತಾಲ್ಲೂಕಿನ ಕೆಬ್ಬಳಿಯ ಶಾಲಿನಿ ಎಂಬ ಯುವತಿಯನ್ನು ಪ್ರೀತಿಸುತ್ತಿದ್ದ. ಆದರೆ ಪೋಷಕರು ವಿವಾಹಕ್ಕೆ ಒಪ್ಪದಿದ್ದಾಗ ನೊಂದ ಶಾಲಿನಿ ಆತ್ಮಹತ್ಯೆಗೆ ಶರಣಾಗಿದ್ದರು. ಯುವತಿಯ ಆತ್ಮಹತ್ಯೆಯ ಸುದ್ದಿ ಕೇಳಿದ ಸಂತೋಷ ಬೆಂಗಳೂರಿನಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದರು, ಪೋಷಕರು ಚಿಕಿತ್ಸೆ ಕೊಡಿಸಿದ್ದರು. ನವೆಂಬರ್ 28 ರಂದು ಬೆಂಗಳೂರಿನಿಂದ ಬಂದ ಸಂತೋಷ್, ಕಾಡಿನ ಬಂಡೆ ಬಳಿ ವಾಹನ ನಿಲ್ಲಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆನ್ನಲಾಗಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5