ಬೆಂಗಳೂರು: ನಮ್ಮೆಲ್ಲರ ಜಾತಿ ಒಂದೆ. ಜಾತಿ, ಧರ್ಮಗಳನ್ನು ಮೀರಿದ್ದು ಮಾನವೀಯತೆ ಎಂದು ಚಾಮರಾಜಪೇಟೆ ಶಾಸಕ ಜಮೀರ್ ಅಹ್ಮದ್ ಖಾನ್ ಸಾರಿದರು.
ಪಾದರಾಯನಪುರದ ಅಲ್ ಅಜರ್ ಫೌಂಡೇಶನ್ ಶಾಲೆಯಲ್ಲಿ ಇಂದು ಡಾ.ಅಂಬೇಡ್ಕರ್ ಜಯಂತಿ ಮತ್ತು ಈದ್ ಮಿಲಾದ್ ಪ್ರಯುಕ್ತ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಬಿಬಿಎಂಪಿಯ ಪೌರ ಕಾರ್ಮಿಕರಿಗೆ ತಮ್ಮ ಕೈಯ್ಯಾರೆ ಭೋಜನ ಉಣಬಡಿಸಿದರು.
ಇದೇ ವೇಳೆ ಇಸ್ಲಾಂ ಧರ್ಮ ಗುರುಗಳ ತಟ್ಟೆಯಿಂದ ತುತ್ತು ತೆಗೆದುಕೊಂಡು ಸ್ವೀಕರಿಸಿದರಲ್ಲದೇ ದಲಿತ ಸ್ವಾಮೀಜಿಗೆ ಕೈತುತ್ತು ತಿನ್ನಿಸಿ, ತಾವೂ ಕೈ ತುತ್ತು ತಿನ್ನುವ ಮೂಲಕ ಸಹೋದರತೆ ಮೆರೆದರು.
ಮನುಷ್ಯರಾಗಿ ಬಾಳುವುದೇ ನಿಜವಾದ ಧರ್ಮ. ಮನುಷ್ಯ ಸಂಬಂಧಗಳಿಗೆ ಜಾತಿ, ಧರ್ಮ ಎಂದಿಗೂ ಅಡ್ಡಿಯಾಗದು. ನಾವೆಲ್ಲರೂ ಸಹೋದರರಂತೆ ಬಾಳಬೇಕು ಎಂದು ಅವರು ಇದೇ ವೇಳೆ ಕರೆ ನೀಡಿದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5