ಆರ್ಥಿಕ ಸಂಕಷ್ಟ ಎದುರಿಸುತ್ತಿರುವ ಶ್ರೀಲಂಕಾಗೆ ಭಾರತ ಅಕ್ಕಿ, ಔಷಧ, ಹಾಲಿನ ಪುಡಿ ಹೀಗೆ ಅಗತ್ಯ ವಸ್ತುಗಳನ್ನು ಕಳುಹಿಸಿದೆ.
ಭಾನುವಾರ ದ್ವೀಪರಾಷ್ಟ್ರದ ರಾಜಧಾನಿ ಕೊಲಂಬೋ ತಲುಪಿದ ಹಡಗು, ಅಗತ್ಯ ವಸ್ತುಗಳನ್ನು ಶ್ರೀಲಂಕಾ ಸರ್ಕಾರಕ್ಕೆ ಹಸ್ತಾಂತರಿಸಿದ್ದು, 9,000 ಮೆಟ್ರಿಕ್ ಟನ್ ಅಕ್ಕಿ, 50 ಮೆಟ್ರಿಕ್ ಟನ್ ಹಾಲಿನ ಪುಡಿ ಹಾಗೂ 25 ಮೆಟ್ರಿಕ್ ಟನ್ ಗಿಂತ ಹೆಚ್ಚು ಔಷಧಗಳು ಮತ್ತು ಇತರ ವೈದ್ಯಕೀಯ ಸಾಮಗ್ರಿಗಳನ್ನು ಭಾರತೀಯ ಹೈಕಮಿಷನರ್ ಗೋಪಾಲ್ ಬಾಗ್ಲೆ ಲಂಕಾದ ವಿದೇಶಾಂಗ ಸಚಿವ ಜಿಎಲ್ ಪೀರಿಸ್ ಅವರಿಗೆ ಹಸ್ತಾಂತರಿಸಿದರು.
ಹಾಲಿನ ಪುಡಿ, ಅಕ್ಕಿ ಹಾಗೂ ಔಷಧ ಸೇರಿದಂತೆ 200 ಕೋಟಿ ರೂ. ಮೌಲ್ಯದ ಮಾನವೀಯ ನೆರವು ನೀಡಲಾಗಿದೆ. ಈ ಸಹಾಯಕ್ಕೆ ತಮಿಳುನಾಡು ಮುಖ್ಯಮಂತ್ರಿಗೂ ಹಾಗೂ ಭಾರತಕ್ಕೆ ಹೃದಯಪೂರ್ವಕ ಕೃತಜ್ಞತೆ ಸಲ್ಲಿಸುತ್ತೇನೆ ಎಂದು ಲಂಕಾ ಪ್ರಧಾನಿ ರನಿಲ್ ವಿಕ್ರಮಸಿಂಘೆ ಟ್ವೀಟ್‌ನಲ್ಲಿ ತಿಳಿಸಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5