ಚಂಡೀಗಢ: ಪಂಜಾಬ್ ಆರೋಗ್ಯ ಸಚಿವ ವಿಜಯ್ ಸಿಂಗ್ಲಾ ಅವರನ್ನು ರಾಜ್ಯ ಸಂಪುಟದಿಂದ ವಜಾಗೊಳಿ ಭ್ರಷ್ಟಾಚಾರದ ಆರೋಪದ ಮೇಲೆ ಬಂಧಿಸಲಾಗಿದೆ.
ಪಂಜಾಬ್ ನಲ್ಲಿ ಆಮ್ ಆದ್ಮಿ ಪಕ್ಷ ಅಧಿಕಾರಕ್ಕೆ ಬಂದು ಕೇವಲ ಎರಡು ತಿಂಗಳಾಗಿದ್ದು ಮಾನ್ಸಾ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾಗಿದ್ದ 52 ವರ್ಷದ ವಿಜಯ್ ಸಿಂಗ್ಲಾ ಅವರನ್ನು ಸಚಿವ ಸಂಪುಟದಿಂದ ವಜಾಗೊಳಿಸುವುದಾಗಿ ಮುಖ್ಯಮಂತ್ರಿಗಳೇ ಘೋಷಿಸಿದರು. ತನ್ನ ಇಲಾಖೆಯ ಟೆಂಡರ್‌ಗಳು ಮತ್ತು ಖರೀದಿಗಳಲ್ಲಿ ಸಿಂಗ್ಲಾ ಶೇಕಡಾ 1 ಪರ್ಸೆಂಟ್ ಕಮಿಷನ್‌ಗೆ ಬೇಡಿಕೆಯಿಡುತ್ತಿದ್ದಾರೆ ಎಂದು ತಿಳಿದ ನಂತರ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಮಾನ್ ಹೇಳಿದರು.
ಸಿಂಗ್ಲಾ ವಿರುದ್ಧ ಪ್ರಕರಣ ದಾಖಲಿಸುವಂತೆ ಪೊಲೀಸರಿಗೂ ಸೂಚಿಸಿರುವುದಾಗಿ ಮುಖ್ಯಮಂತ್ರಿ ತಿಳಿಸಿದ್ದು ಸಿಂಗ್ಲಾ ಅವರನ್ನು ಪಂಜಾಬ್ ಪೋಲಿಸರು ಬಂಧಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಮುಖ್ಯಮಂತ್ರಿ ಭಗವಂತ್ ಮಾನ್ ಸರ್ಕಾರವು ಭ್ರಷ್ಟಾಚಾರದ ಬಗ್ಗೆ ಶೂನ್ಯ ಸಹಿಷ್ಣುತೆಯನ್ನು ಹೊಂದಿದೆ ಎಂಬುದನ್ನು ಇದು ಪ್ರತಿಪಾದಿಸಿದೆ.
‘ನನ್ನ ಸರ್ಕಾರದ ಓರ್ವ ಸಚಿವ ತಮ್ಮ ಇಲಾಖೆಯ ಪ್ರತಿ ಟೆಂಡರ್ ಅಥವಾ ಖರೀದಿಯಿಂದ ಶೇಕಡಾ ಒಂದರಷ್ಟು ಕಮಿಷನ್ ಕೇಳುತ್ತಿರುವ ಬಗ್ಗೆ ನನ್ನ ಗಮನಕ್ಕೆ ಬಂದಿತ್ತು ಈ ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಂಡಿದ್ದೇನೆ. ಈ ಪ್ರಕರಣ ನನಗೆ ಮಾತ್ರ ತಿಳಿದಿತ್ತು. ಇದು ಮಾಧ್ಯಮ ಅಥವಾ ಪ್ರತಿಪಕ್ಷಗಳಿಗೆ ತಿಳಿದಿರಲಿಲ್ಲ ಎಂದು ಮಾನ್ ವೀಡಿಯೊ ಸಂದೇಶದಲ್ಲಿ ಹೇಳಿದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB