ಕೊಪ್ಪಳ: ದೇಶದಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿಗೆ ಬಿಜೆಪಿ ಬದ್ಧವಾಗಿದೆ ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.
ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕೆ ಶಂಕುಸ್ಥಾಪನೆ ಬಗ್ಗೆ ಮಾತನಾಡಿದ ಅವರು, ಮಂದಿರ ನಿರ್ಮಿಸುವ ಭರವಸೆಯನ್ನು ಬಿಜೆಪಿ ಈಡೇರಿಸಿದೆ ಎಂದು ಹೇಳಿದರು.
ಕಾನೂನು ಎಲ್ಲಾ ನಾಗರಿಕರಿಗೆ ಸಮಾನವಾಗಿರಬೇಕು ಎಂಬ ಕಾರಣಕ್ಕಾಗಿ ಏಕರೂಪ ನಾಗರಿಕ ಸಂಹಿತೆಯನ್ನು ತರಲು ಬಿಜೆಪಿ ಬದ್ಧವಾಗಿದೆ ಎಂದು ಅವರು ಇದೇ ವೇಳೆ ಅವರು ಹೇಳಿದರು.
ಪ್ರಸ್ತುತ ಯಾವುದೇ ಕೋಮು ಅಥವಾ ಧಾರ್ಮಿಕ ಪೂರ್ವಾಗ್ರಹವಿಲ್ಲದೆ ಅಪರಾಧ ಕೃತ್ಯಗಳಿಗೆ ಸಮಾನವಾಗಿ ಶಿಕ್ಷೆಯನ್ನು ನೀಡಲಾಗುತ್ತದೆ. ಅಂತೆಯೇ, ನಾಗರಿಕ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಅಪರಾಧಿಗಳನ್ನು ಸಮಾನವಾಗಿ ಪರಿಗಣಿಸಬೇಕು ಎಂದು ಸಚಿವರು ಹೇಳಿದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5