ಬಳ್ಳಾರಿ: ಬಿಜೆಪಿ ಪಕ್ಷದ ದೊಡ್ಡ ಶಕ್ತಿಯಾದ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರನ್ನು ಪಕ್ಷದಿಂದ ಸೈಡ್ ಲೈನ್ ಮಾಡುವ ಮಾತೇ ಇಲ್ಲ ಎಂದು ಸಚಿವ ಬಿ.ಶ್ರೀರಾಮುಲು ಸ್ಪಷ್ಟಪಡಿಸಿದ್ದಾರೆ.
ನಗರದ ಜಿಪಂ ಸಭಾಂಗಣದಲ್ಲಿ ಬುಧವಾರ ಕೆಡಿಪಿ ಸಭೆ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಿ.ಎಸ್‌ಯಡಿಯೂರಪ್ಪನವರು ನಾಲ್ಕು ಬಾರಿ ರಾಜ್ಯದ ಮುಖ್ಯಮಂತ್ರಿಯಾಗಿದ್ದಾರೆ. ಅವರು ಪಕ್ಷದ ದೊಡ್ಡ ಶಕ್ತಿ. ಅವರ ಶಕ್ತಿ ಕುಗ್ಗಿಸುವ ಕೆಲಸ ಪಕ್ಷದಲ್ಲಿ ಎಂದೂ ನಡೆಯುವುದಿಲ್ಲ ಎಂದರು.
ವಿಧಾನಸಭೆ ಚುನಾವಣೆ ಹತ್ತಿರ ಇರುವ ಕಾರಣ ಬಿಎಸ್ ವೈ ಪುತ್ರ ವಿಜಯೇಂದ್ರರಿಗೆ ಎಂಎಲ್ ಸಿ ಟಿಕೆಟ್ ಕೊಟ್ಟಿಲ್ಲ. ಬಿಜೆಪಿ ಸಾಮಾಜಿಕ ನ್ಯಾಯಕ್ಕೆ ಬದ್ದವಾದ ಪಕ್ಷ. ವಿಜಯೇಂದ್ರ ಅವರನ್ನು ಗುರುತಿಸುವ ಕೆಲಸ ಪಕ್ಷ ಮಾಡಲಿದೆ ಎಂದರು.
ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ವಿಜಯೇಂದ್ರರಿಗೆ ಅವಕಾಶ ಕಲ್ಪಿಸಬೇಕೆಂದು ಪಕ್ಷದ ಚಿಂತನೆಯಾಗಿದೆ ಎಂದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5