ಬಾಗಲಕೋಟೆ: ನಾನೇನಾದ್ರೂ ತಪ್ಪು ಮಾಡಿದ್ದರೆ ಚೌಡೇಶ್ವರಿ ದೇವಿ ನನಗೆ ಶಿಕ್ಷೆ ಕೊಡಲಿ, ನಾನು ಯಾವುದೇ ತಪ್ಪು ಮಾಡಿಲ್ಲ ಅಂದರೆ ಶಿಕ್ಷೆಯಿಂದ ಮುಕ್ತಿ ನೀಡಲಿ ಇದುವೇ ನನ್ನ ಪ್ರಾರ್ಥನೆ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು.
ಬಾಗಲಕೋಟೆಯಲ್ಲಿ ಮಾತನಾಡಿದ ಅವರು, 15 ದಿನದಲ್ಲಿ ಇದಕ್ಕೊಂದು ರೂಪ ಬರುತ್ತದೆ ಎಂದುಕೊಂಡಿದ್ದೇನೆ. ಸಂಪುಟಕ್ಕೆ ಸೇರಿಸಿಕೊಳ್ಳುವುದು, ಬಿಡುವುದು ಹೈಕಮಾಂಡ್ ಗೆ ಬಿಟ್ಟ ವಿಚಾರವಾಗಿದೆ. ಕೇಂದ್ರದ ಬಿಜೆಪಿ ನಾಯಕರ ತೀರ್ಮಾನಕ್ಕೆ ನಾನು ಬದ್ಧನಾಗಿದ್ದೇನೆ ಎಂದರು.
ಕಾಂಗ್ರೆಸ್ ಪಕ್ಷದಲ್ಲಿ ವಿಧಾನಪರಿಷತ್ ಟಿಕೆಟ್ ಗಾಗಿ ಬಡಿದಾಡಿದರು. ಕಾಂಗ್ರೆಸ್ ನಲ್ಲಿ ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ಗುಂಪುಗಳಿವೆ ಎಂದು ಈಶ್ವರಪ್ಪ ಟೀಕಿಸಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5