ತುಮಕೂರು: ಜಿಲ್ಲೆಯ ಕುಣಿಗಲ್ ಹಾಗೂ ತುರುವೇಕೆರೆಯಲ್ಲಿ ನಡೆದ ಪ್ರತ್ಯೇಕ ಘಟನೆಗಳಲ್ಲಿ ಇಬ್ಬರು ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ.
ಕುಣಿಗಲ್ ಪಟ್ಟಣದ ಉಪ್ಪಾರ ಬೀದಿ ನಿವಾಸಿ ಅಶ್ವಥ್ (42) ತಮ್ಮ ಮನೆಯಲ್ಲೇ ಶಾಲಿನಿಂದ ಕುತ್ತಿಗೆ ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅಶ್ವಥ್ ಹಲವು ದಿನಗಳಿಂದ ರಕ್ತದ ಒತ್ತಡದಿಂದ ಬಳಲುತ್ತಿದ್ದರು. ಜತೆಗೆ ಅವರ ಮಗ ಕೂಡ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದರು. ಇದರಿಂದ ಮನನೊಂದ ಅವರು, ತನ್ನ ಪತ್ನಿ ಹಾಗೂ ಮಕ್ಕಳನ್ನು ತಿರುಪತಿಗೆ ಕಳಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ತಿಳಿದು ಬಂದಿದೆ.
ಇನ್ನೊಂದು ಘಟನೆಯಲ್ಲಿ ತುರುವೇಕೆರೆ ತಾಲೂಕು ದೆಬ್ಬೇಘಟ್ಟ ಹೋಬಳಿ ದೇವನಾಯಕನಹಳ್ಳಿ ಗ್ರಾಮದ ಕೆಂಪರಾಜು (32) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೆಂಪರಾಜು ಮೂಲತಃ ದೇವನಾಯಕನಹಳ್ಳಿ ಗ್ರಾಮದವರಾಗಿದ್ದು, ಕಳೆದ ಐದು ವರ್ಷಗಳಿಂದ ಕುಣಿಗಲ್ ನಲ್ಲಿ ಸಣ್ಣ ಪುಟ್ಟ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದರು. ಈ ನಡುವೆ ಹಲವು ದಿನಗಳಿಂದ ಅನಾರೋಗ್ಯಕ್ಕೆ ತುತ್ತಾಗಿದ್ದರು ಎನ್ನಲಾಗಿದೆ.
ಅನಾರೋಗ್ಯದಿಂದ ಬೇಸತ್ತ ಅವರು,, ಕುಣಿಗಲ್ ಪಟ್ಟಣದ ಶಿಕ್ಷಕರ ಭವನದ ಕಿಟಕಿಗೆ ಹಗ್ಗ ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕುಣಿಗಲ್ ಠಾಣೆಯ ಪೊಲೀಸರು ಎರಡು ಪ್ರಕರಣಗಳನ್ನು ದಾಖಲಿಸಿಕೊಂಡು ತನಿಖೆಕೈಗೊಂಡಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5