ಕೊರಟಗೆರೆ: ತಾಲ್ಲೂಕಿನ ಚನ್ನರಾಯನದುರ್ಗ ಹೋಬಳಿ ತೋವಿನಕೆರೆ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವಂತಹ ಚಿಕ್ಕರಸನಹಳ್ಳಿ ಗ್ರಾಮದಲ್ಲಿ ಬೆಳ್ಳಬೆಳಗ್ಗೆಯೇ ಆಹಾರವನ್ನು ಅರಸಿ ಬಂದಂತಹ 2 ಕರಡಿಗಳು ಊರಿನ ಹೊರ ಭಾಗದಲ್ಲಿ ಇರುವಂತಹ ಗ್ರಾಮಠಾಣ ಜಮೀನಿನಲ್ಲಿ ಇರುವ ಹಳೆ ಬಾವಿ ಹೊಂಡದಲ್ಲಿ ಅವಿತು ಕುಳಿತಿರುವ ಘಟನೆ ಇಂದು ನಡೆದಿದೆ.
ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ರೈತರು ಕರಡಿಗಳನ್ನು ನೋಡಿ ಊರಿನ ಹಿರಿಯರ ಗಮನಕ್ಕೆ ತಂದಿದ್ದಾರೆ. ನಂತರ ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ದೂರವಾಣಿ ಮೂಲಕ ಕರೆ ಮಾಡಿ ಘಟನೆಯನ್ನು ತಿಳಿಸಿದ್ದಾರೆ.
ಮಾಹಿತಿ ತಿಳಿದ ತಕ್ಷಣವೇ ಕೊರಟಗೆರೆ ಅರಣ್ಯ ಇಲಾಖೆ ಅಧಿಕಾರಿಗಳು ಮತ್ತು ಮಧುಗಿರಿಯ ಅರಣ್ಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಸ್ಥಳವನ್ನು ಪರಿಶೀಲಿಸಿಕೊಂಡು.ಎರಡು ಕರಡಿಗಳ ರಕ್ಷಣೆಗೆ ಮುಂದಾಗಿದ್ದಾರೆ.
ನಂತರ ಕೊರಟಗೆರ ಆರಕ್ಷಕ ಠಾಣೆಯ ಸಿಪಿಐ ಸಿದ್ದರಾಮೇಶ್ವರ ಮತ್ತು ಸಿಬ್ಬಂದಿಗಳು ಸ್ಥಳಕ್ಕೆ ಭೇಟಿ ನೀಡಿ ಗ್ರಾಮಸ್ಥರಿಗೆ ಧೈರ್ಯ ನೀಡಿದ್ದಾರೆ. ಅಪಾಯದ ವಾತಾವರಣ ವಿರುವುದರಿಂದ ಗಡಿಬಿಡಿ ಗೊಂದಂತಹ ಊರಿನ ಗ್ರಾಮಸ್ಥರಿಗೆ ಅರಿವು ಮೂಡಿಸುವ ಕಾರ್ಯವನ್ನು ಮಾಡಿದ್ದಾರೆ.
ನಂತರ ಘಟನೆಯ ಬಗ್ಗೆ ತಹಶೀಲ್ದಾರ್ ಗಮನಕ್ಕೆ ತರಲಾಯಿತು. ತಹಶೀಲ್ದಾರ್ ನಾಹಿದ ಜಮ್ ಜಮ್ ಸೇರಿದಂತೆ ಹಲವು ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಗ್ರಾಮಸ್ಥರಿಗೆ ಅರಿವು ಮೂಡಿಸಿದ್ದಾರೆ..
ವರದಿ: ಮಂಜುಸ್ವಾಮಿ.ಎಂ.ಎನ್., ಕೊರಟಗೆರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5