ಹರ್ಯಾಣ: ದೆಹಲಿಯಂತೆ ಹರ್ಯಾಣದಲ್ಲೂ ಸರ್ಕಾರಿ ಶಾಲೆ ಮತ್ತು ಆಸ್ಪತ್ರೆಗಳನ್ನು ಅಭಿವೃದ್ಧಿಗೊಳಿಸುವುದಾಗಿ ಎಎಪಿ ರಾಷ್ಟ್ರೀಯ ಸಂಚಾಲಕ, ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಭರವಸೆ ನೀಡಿದ್ದಾರೆ.
ಕುರುಕ್ಷೇತ್ರದಲ್ಲಿ ಆಮ್ ಆದ್ಮಿ ಪಕ್ಷದ ಮೊದಲ ರಾಜ್ಯಮಟ್ಟದ ರ‍್ಯಾಲಿ ಉದ್ದೇಶಿಸಿದ ಮಾತನಾಡಿದ ಕೇಜ್ರಿವಾಲ್, ಮುಂದಿನ ತಿಂಗಳು ನಡೆಯುವ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಪಕ್ಷಕ್ಕೆ ಬೆಂಬಲ ನೀಡುವಂತೆ ಜನರಲ್ಲಿ ಮನವಿ ಮಾಡಿದರು.
ಪಂಜಾಬ್ ನಲ್ಲಿ ಭ್ರಷ್ಟಾಚಾರ ಪ್ರಕರಣದಲ್ಲಿ ವಿಜಯ್ ಸಿಂಗ್ಲಾ ಅವರನ್ನು ಸಚಿವ ಸಂಪುಟದಿಂದ ವಜಾಗೊಳಿಸಿದ್ದನ್ನು ಉಲ್ಲೇಖಿಸಿ, ‘ದೆಹಲಿ ಮತ್ತು ಪಂಜಾಬ್‌ನಲ್ಲಿ ಭ್ರಷ್ಟಾಚಾರಕ್ಕೆ ಅಂತ್ಯ ಹಾಡಿದ್ದೇವೆ. ಹರಿಯಾಣದಲ್ಲೂ ಭ್ರಷ್ಟಾಚಾರ ತೊಲಗಿಸುತ್ತೇವೆ ಎಂದು ಹೇಳಿದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5