ತುಮಕೂರು: ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದ ಸಮಯದಲ್ಲಿ 3 ಸಾವಿರ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಹೆಸರು ಮಾತ್ರ ರಾಮಂದು, ಮುಖ ರಾವಣಂದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸಿದ್ದರಾಮಯ್ಯ ವಿರುದ್ಧ ಆಕೋಶ್ರ ವ್ಯಕ್ತಪಡಿಸಿದ್ದಾರೆ.
ತುಮಕೂರಿನಲ್ಲಿ ಆಯೋಜಿಸಿದ್ದ ಬಿಜೆಪಿ ರೈತ ಮೋರ್ಚಾ ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ಮಾತನಾಡಿದ ನಳಿನ್ ಕುಮಾರ್ ಸಿದ್ದರಾಮಯ್ಯನ ಆಡಳಿತ ಕಾಲದಲ್ಲಿ ಅತಿ ಹೆಚ್ಚು ಗೋ ಹತ್ಯೆ ನಡೆದಿದೆ. ಸಿದ್ದರಾಮಯ್ಯನವರ ಕಾರಣದಿಂದ 61 ಮಂದಿ ಕಾಂಗ್ರೆಸ್ ನಾಯಕರು ಪಕ್ಷ ತೊರೆದಿದ್ದಾರೆ ಎಂದರು.
ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಗಂಜಿ ಕೇಂದ್ರದ ಆಸೆಗಾಗಿ ಆರ್‌ಎಸ್‌ಎಸ್ ಬಗ್ಗೆ ಮಾತನಾಡುತ್ತಿದ್ದಾರೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಸಿದ್ದರಾಮಯ್ಯ ಟ್ವೀಟ್ಗೆ ತಿರುಗೇಟು ನೀಡಿದ್ದಾರೆ. ಇಟಲಿ ಮೂಲದ ನಾಯಕರಿಗೆ ಹತ್ತಿರವಾಗಲು ಸಿದ್ದರಾಮಯ್ಯ ಆ ರೀತಿಯ ಹೇಳಿಕೆ ನೀಡ್ತಿದ್ದಾರೆ.
ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾಗ ಅವರ ಮಾತಿಗೆ ಬೆಲೆಯಿತ್ತು. ಆದರೆ ಈಗ ಅವರ ಮಾತನ್ನು ಅವರ ಪಕ್ಷದ ಕಾರ್ಯಕರ್ತರೇ ಕೇಳುತ್ತಿಲ್ಲ. ಅವರ ಮಾತಿಗೆ ಕಿಮ್ಮತ್ತು ಇಲ್ಲ ಎಂದು ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ತಿಳಿಸಿದರು. ಪಕ್ಷದಲ್ಲಿ ಸಿದ್ದರಾಮಯ್ಯ ಅವರನ್ನು ಕಡೆಗಣನೆ ಮಾಡಿರುವುದರಿಂದ ಆರ್‌ಎಸ್‌ಎಸ್, ಟೀಕಿಸಿ ಮುಂಚೂಣಿಗೆ ಬರಲು ಯತ್ನಿಸುತ್ತಾರೆ. ಸಿದ್ದರಾಮಯ್ಯ ಆರ್‌ಎಸ್‌ಎಸ್ ಬಗ್ಗೆ ಅಧ್ಯಯನ ಮಾಡಿಲ್ಲ ಎಂದು ತಿಳಿಸಿದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB