ತುಮಕೂರು: ಬಿಜೆಪಿ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಹಾಗೂ ಹಗರಣಗಳ ಸರಮಾಲೆ ಇಂದ ಜನರು ಹೈರಾಣಾಗಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿ ಕಾಂಗ್ರೆಸ್ ಪಕ್ಷದ ವತಿಯಿಂದ ತುಮಕೂರಿನಲ್ಲಿ ಬೃಹತ್ ಜನಾಕ್ರೋಶ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಡಿ.ಸಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ಹಿನ್ನೆಲೆಯಲ್ಲಿ ಎಂ.ಎಲ್ ಸಿ ರಾಜೇಂದ್ರ, ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷರು ಶಶಿ ಹುಲಿಕುಂಟೆ, ಮೋಹನ್, ರಾಜೇಶ್ ದೊಡ್ಮನೆ ಸೇರಿದಂತೆ ಹಲವು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದರು.
ಇನ್ನು ಸುಮಾರು ಮುನ್ನೂರಕ್ಕೂ ಹೆಚ್ಚು ಕಾಂಗ್ರೆಸ್ ಕಾರ್ಯಕರ್ತರು ಡಿಸಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ವೇಳೆ ಪೊಲೀಸ್ ಸರ್ಪಗಾವಲು ಹಾಕಿದ್ದ ಪೊಲೀಸರು ತಡೆದರು .ಇದೆ ಸಂದರ್ಭದಲ್ಲಿ ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ವಾಗ್ವಾದ ನಡೆಯಿತು.
ಇದೇ ಸಂದರ್ಭದಲ್ಲಿ ಜಿಲ್ಲಾ ಯುವ ಕಾಂಗ್ರೆಸ್ ಘಟಕದ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ ಹಿನ್ನಲೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಸರ್ಕಾರ ಹಾಗೂ ಪೊಲೀಸರ ನಡುವೆ ತೀವ್ರ ಆಕ್ರೋಶ ಹೊರಹಾಕಿದ್ದಾರೆ.
ಇದೇ ವೇಳೆ ಪ್ರತಿಕ್ರಿಯಿಸಿರುವ ತುಮಕೂರು ಜಿಲ್ಲಾ ಯುವ ಕಾಂಗ್ರೆಸ್ ಘಟಕದ ಅಧ್ಯಕ್ಷ ಶಶಿ ಹುಲಿಕುಂಟೆ ರವರು ಕೇಂದ್ರ ಹಾಗೂ ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿಯ ಭ್ರಷ್ಟ ಸರ್ಕಾರದ ವಿರುದ್ಧ ಜನ ಆಕ್ರೋಶ ಕಾರ್ಯಕ್ರಮವನ್ನು ನಾಯಕರಾದ ಶ್ರೀನಿವಾಸ್ ಹಾಗೂ ಎಂಎಲ್ಸಿ ರಾಜೇಂದ್ರ ರವರ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿತ್ತು. ಜಿಲ್ಲಾಧಿಕಾರಿಗಳ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ವೇಳೆ , ಜಿಲ್ಲಾಧಿಕಾರಿಗಳಿಗೆ ಮನವಿಯನ್ನು ಸಹ ನೀಡಲು ಅವಕಾಶ ನೀಡದೆ ನಮ್ಮನ್ನು ಬಂಧಿಸಿದ್ದಾರೆ ಎಂದು ಆಕ್ರೋಶ ಹೊರ ಹಾಕಿದ್ದಾರೆ.
ಮುತ್ತಿಗೆ ಹಾಕಲು ಯತ್ನಿಸಿದ ಕಾಂಗ್ರೆಸ್ ನ ಸುಮಾರು ಇಪ್ಪತ್ತಕ್ಕೂ ಹೆಚ್ಚು ನಾಯಕರನ್ನು ಬಂಧಿಸಿ ನಂತರ ಪೊಲೀಸರು ಬಿಡುಗಡೆಗೊಳಿಸಿದ್ದಾರೆ.
ವರದಿ: ಮಾರುತಿ ಪ್ರಸಾದ್, ತುಮಕೂರು
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5