nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕಾವೇರಿ ನೀರು ಹಂಚಿಕೆ ವಿವಾದ: ತಮಿಳುನಾಡು ಸಿಎಂ ಕರ್ನಾಟಕ ಭೇಟಿ ಮುಂದೂಡಿಕೆ

    July 31, 2026

    ಬೀದರ್: ಬಸವಕಲ್ಯಾಣದಲ್ಲಿ ಕೆರೆಯಂತಾದ ರಸ್ತೆಗಳು; ಗುಂಡಿಗಳಲ್ಲಿ ಈಜಾಡಿದ ಮಕ್ಕಳು!

    July 31, 2026

    ಸರಗೂರು: ತಾಯಿ ಚಿಕ್ಕದೇವಮ್ಮ ಬೆಟ್ಟದಲ್ಲಿ ಮೂರನೇ ಆಷಾಢ ಶುಕ್ರವಾರದ ಸಂಭ್ರಮ; ವಿಶೇಷ ಪೂಜೆ ಹಾಗೂ ಅನ್ನಸಂತರ್ಪಣೆ

    July 31, 2026
    Facebook Twitter Instagram
    ಟ್ರೆಂಡಿಂಗ್
    • ಕಾವೇರಿ ನೀರು ಹಂಚಿಕೆ ವಿವಾದ: ತಮಿಳುನಾಡು ಸಿಎಂ ಕರ್ನಾಟಕ ಭೇಟಿ ಮುಂದೂಡಿಕೆ
    • ಬೀದರ್: ಬಸವಕಲ್ಯಾಣದಲ್ಲಿ ಕೆರೆಯಂತಾದ ರಸ್ತೆಗಳು; ಗುಂಡಿಗಳಲ್ಲಿ ಈಜಾಡಿದ ಮಕ್ಕಳು!
    • ಸರಗೂರು: ತಾಯಿ ಚಿಕ್ಕದೇವಮ್ಮ ಬೆಟ್ಟದಲ್ಲಿ ಮೂರನೇ ಆಷಾಢ ಶುಕ್ರವಾರದ ಸಂಭ್ರಮ; ವಿಶೇಷ ಪೂಜೆ ಹಾಗೂ ಅನ್ನಸಂತರ್ಪಣೆ
    • ಸರಗೂರು: ಮಾನವ ಹಕ್ಕುಗಳ ರಕ್ಷಣೆ ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿ: ಅಹಮದ್ ಖಾನ್ ಸೆರ್
    • ತಿಪಟೂರು: ಆ.12ರಿಂದ ಭೀಮನ ಅಮಾವಾಸ್ಯೆ ಮಹೋತ್ಸವ
    • ಆ.3 ರಿಂದ ಕೋಟೆ ಗ್ರಾಮ ದೇವತೆ ಅಮ್ಮನವರ ಜಾತ್ರಾ ಮಹೋತ್ಸವ
    • ತುಮಕೂರು:  ಆ.3ರಿಂದ ಕೊಲ್ಲಾಪುರದಮ್ಮ, ಕರುಗಳಮ್ಮ ಜಾತ್ರಾ ಮಹೋತ್ಸವ
    • ಪಾವಗಡ: ವಸತಿ ಶಾಲೆಯಿಂದ ಓಡಿ ಹೋಗಿದ್ದ ವಿದ್ಯಾರ್ಥಿಗಳು ಪತ್ತೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ರೋಹಿತ್ ಚಕ್ರತೀರ್ಥ ವಜಾ, ಸಚಿವ ನಾಗೇಶ್ ರಾಜೀನಾಮೆಗೆ ಒತ್ತಾಯಿಸಿ ಪ್ರತಿಭಟನೆ
    ತುರುವೇಕೆರೆ May 31, 2022

    ರೋಹಿತ್ ಚಕ್ರತೀರ್ಥ ವಜಾ, ಸಚಿವ ನಾಗೇಶ್ ರಾಜೀನಾಮೆಗೆ ಒತ್ತಾಯಿಸಿ ಪ್ರತಿಭಟನೆ

    By adminMay 31, 2022No Comments2 Mins Read
    turuvekere

    ತುರುವೇಕೆರೆ: ಶಿಕ್ಷಣ ಸಚಿವ ,ಬಿ.ಸಿ ನಾಗೇಶ್ ರಾಜೀನಾಮೆಗೆ ಹಾಗೂ ರೋಹಿತ್ ಚಕ್ರತೀರ್ಥ ಅವರನ್ನು ಪಠ್ಯ ಪರಿಷ್ಕರಣೆ ಸಮಿತಿ ಅಧ್ಯಕ್ಷ ಸ್ಥಾನದಿಂದ ವಜಾಗೊಳಿಸಿ ಬಂಧಿಸಬೇಕು ಎಂದು ಒತ್ತಾಯಿಸಿ ಪಟ್ಟಣದಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ , ಚಲವಾದಿ ಮಹಾಸಭಾ, ಸಿ.ಐ.ಟಿ.ಯು ., ವಾಲ್ಮೀಕಿ ನಾಯಕ ಸಮಾಜ , ಮುಸ್ಲಿಂ ಸಂಘಟನೆ ಹಾಗೂ ಸಮಾನ ಮನಸ್ಕರ ವೇದಿಕೆ ವತಿಯಿಂದ ಬೃಹತ್ ಪ್ರತಿಭಟನೆ ನಡೆಯಿತು.

    ರಾಜ್ಯ ಬಿಜೆಪಿ ಸರ್ಕಾರ ಶಾಲಾ ಪಠ್ಯ ಪುಸ್ತಕಗಳ ಪರಿಷ್ಕರಣೆ ಮಾಡುತ್ತಿದ್ದು, ಈ ಮೂಲಕ ದಲಿತರ, ಮಹಿಳೆಯರ , ಶೂದ್ರರ, ವೈಚಾರಿಕ ವಾದಿಗಳ , ಬರಹಗಳಿಗೆ ತಿಲಾಂಜಲಿ ನೀಡಲಾಗಿದೆ. ಪೆರಿಯಾರ್ ಅಂಬೇಡ್ಕರ್ , ಭಗತ್ ಸಿಂಗ್ ಕುರಿತ ಬರಹಗಳನ್ನು ಕೈಬಿಟ್ಟು, ಸನಾತನ, ಜಾತಿವಾದಿ ಬ್ರಾಹ್ಮಣ್ಯಶಾಹಿ ಮತ್ತು ಮಹಿಳಾ ವಿರೋಧಿ ಬರಹಗಳನ್ನು ಸೇರಿಸಲಾಗಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

    ಶಾಲಾ ಮಕ್ಕಳ ಪಾಠಗಳನ್ನು ಮನುಸ್ಮೃತಿ ಯನ್ನಾಗಿ ಮಾಡಲಾಗುತ್ತಿದೆ. ಕುವೆಂಪು, ಅಂಬೇಡ್ಕರ್, ಸೇರಿದಂತೆ ಶೂದ್ರ, ದಲಿತ ಚಿಂತಕರನ್ನು ಅವಹೇಳನ ಮಾಡಿದ ಅವರ ಬರಹಗಳನ್ನು , ಬ್ರಾಹ್ಮಣ್ಯದ ಅಹಂನಿಂದ ಕುಹಕ ಮಾಡಿದ , ಜೀವವಿರೋಧಿ , ರೋಹಿತ್ ಚಕ್ರತೀರ್ಥ ನೆಂಬ ಅನರ್ಹ , ಹಸಿ ಸುಳ್ಳುಗಳನ್ನು ಹರಡಿಸುವ ವ್ಯಕ್ತಿಯನ್ನು ಪರಿಷ್ಕರಣ ಸಮಿತಿ ಅಧ್ಯಕ್ಷರನ್ನಾಗಿ ಮಾಡಿರುವ ಸರ್ಕಾರ ಮಕ್ಕಳ ಮನಸ್ಸಿಗೆ ವಿಷವಿಕ್ಕಿದೆ ಎಂದು ಪ್ರತಿಭಟನಾಕಾರರು ದೂರಿದರು.

    ಈ ಕೂಡಲೇ ಪರಿಷ್ಕರಣ ಸಮಿತಿಯನ್ನು ವಜಾ , ಮಾಡಬೇಕು , ಹಳೆಯ ಪಾಠಗಳನ್ನೇ ಮುಂದುವರಿಸಬೇಕು, ಶೂದ್ರತಪಸ್ವಿ ಕುವೆಂಪುರವರನ್ನು, ಅವಹೇಳನ ಮಾಡಿದ ಚಕ್ರತೀರ್ಥ ನ ಮೇಲೆ ಕ್ರಮ ,ಕೈಗೊಳ್ಳಬೇಕೆಂದು ಒತ್ತಾಯಿಸಿ ದರು.
    ಈ ಸಮಿತಿಗೆ ರಚನೆಗೆ ಕಾರಣರಾದ ಶಿಕ್ಷಣ ಸಚಿವ, ಬಿ.ಸಿ .ನಾಗೇಶ್ ಕೂಡಲೇ ತಮ್ಮ ಶಾಸಕ ಸ್ಥಾನ ಹಾಗೂ ಸಚಿವ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಪ್ರತಿಭಟನಾಕಾರರು ಆಗ್ರಹಿಸಿದರು.

    ಪ್ರತಿಭಟನಾ ಮೆರವಣಿಗೆಯಲ್ಲಿ ನೂರಾರು ಸಂಖ್ಯೆಯಲ್ಲಿ ಜನ ಭಾಗವಹಿಸಿದ್ದರು . ಅಂಬೇಡ್ಕರ್ ಭವನದಿಂದ ,ಪ್ರಾರಂಭವಾದ ,ಮೆರವಣಿಗೆ ,ಪಟ್ಟಣದ ಪ್ರಮುಖ ರಸ್ತೆಯಲ್ಲಿ ,ಸಂಚರಿಸಿ ,ಸರ್ಕಾರದ ವಿರುದ್ಧ, ಶಿಕ್ಷಣ ಸಚಿವರ ವಿರುದ್ದ, ರೋಹಿತ್ ಚಕ್ರತೀರ್ಥ ವಿರುದ್ಧ ಘೋಷಣೆ ಕೂಗುತ್ತ ತಾಲೂಕು ಕಚೇರಿ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಲಾಯಿತು.
    ಇದೇ ವೇಳೆ ತಾಲೂಕು ಕಚೇರಿಗೆ ತೆರಳಿದ ಪ್ರತಿಭಟನಾಕಾರರು ತಹಸೀಲ್ದಾರ್ ,ನಯೀಮ್ ಉನ್ನಿಸ್ಸ ರವರ ಮುಖಾಂತರ ಸರ್ಕಾರಕ್ಕೆಮನವಿ ಪತ್ರ ನೀಡಿದರು. ಪ್ರತಿಭಟನೆಯಲ್ಲಿ ಪ್ರೊಫೆಸರ್ ಪುಟ್ಟರಂಗಪ್ಪ, ವಕೀಲರಾದ ಪಿ.ಹೆಚ್.ಧನಪಾಲ್ , ನಿವೃತ್ತ ಪ್ರಾಧ್ಯಾಪಕ ಪರಮೇಶ್ವರ ಸ್ವಾಮಿ, ದಲಿತ ಮುಖಂಡ ಟಿ.ಹೆಚ್.ಗುರುದತ್ . ಸಿ.ಐ. ಟಿ.ಯು.ನ ಸತೀಶ್ ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದರು.

    ವರದಿ: ಸುರೇಶ್ ಬಾಬು .ಎಂ.ತುರುವೇಕೆರೆ


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5

    admin
    • Website

    Related Posts

    ಬೆಳೆ ವಿಮೆ ನೋಂದಣಿ: ರೈತರಿಗೆ ಸಲಹೆ

    July 10, 2026

    ಹಸಿರು ಶಾಲು ರೈತರಿಗೆ ನ್ಯಾಯ ಕೊಡಿಸುವ ಅಸ್ತ್ರ: ಇಂದುವಾಳು ಚಂದ್ರಶೇಖರ್

    July 7, 2026

    ಹೊಸ ಮೊಬೈಲ್ ಆಪ್ ನಿಂದ ಗೊಂದಲ: ಹಳೇ ರಸಗೊಬ್ಬರ ಮಾರಾಟ ವ್ಯವಸ್ಥೆ ಮುಂದುವರಿಸಲು ಕೃಷಿ ಪರಿಕರ ಮಾರಾಟಗಾರರ ಒತ್ತಾಯ

    June 30, 2026

    Leave A Reply Cancel Reply

    Our Picks

    NEET ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    July 25, 2026

    ನೀಟ್ ಅಕ್ರಮ: ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

    July 21, 2026

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಕಾವೇರಿ ನೀರು ಹಂಚಿಕೆ ವಿವಾದ: ತಮಿಳುನಾಡು ಸಿಎಂ ಕರ್ನಾಟಕ ಭೇಟಿ ಮುಂದೂಡಿಕೆ

    July 31, 2026

    ಬೆಂಗಳೂರು: ಕರ್ನಾಟಕದಲ್ಲಿ ಕಾವೇರಿ ನೀರು ಹಂಚಿಕೆ ವಿವಾದ ಮತ್ತು ತೀವ್ರ ಪ್ರತಿಭಟನೆಗಳ ಹಿನ್ನೆಲೆಯಲ್ಲಿ, ಆಗಸ್ಟ್ 3ರಂದು ಬೆಂಗಳೂರಿಗೆ ನಿಗದಿಯಾಗಿದ್ದ ತಮಿಳುನಾಡು…

    ಬೀದರ್: ಬಸವಕಲ್ಯಾಣದಲ್ಲಿ ಕೆರೆಯಂತಾದ ರಸ್ತೆಗಳು; ಗುಂಡಿಗಳಲ್ಲಿ ಈಜಾಡಿದ ಮಕ್ಕಳು!

    July 31, 2026

    ಸರಗೂರು: ತಾಯಿ ಚಿಕ್ಕದೇವಮ್ಮ ಬೆಟ್ಟದಲ್ಲಿ ಮೂರನೇ ಆಷಾಢ ಶುಕ್ರವಾರದ ಸಂಭ್ರಮ; ವಿಶೇಷ ಪೂಜೆ ಹಾಗೂ ಅನ್ನಸಂತರ್ಪಣೆ

    July 31, 2026

    ಸರಗೂರು: ಮಾನವ ಹಕ್ಕುಗಳ ರಕ್ಷಣೆ ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿ: ಅಹಮದ್ ಖಾನ್ ಸೆರ್

    July 31, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.