ಮೈಸೂರು: ವಿಶ್ವವಿದ್ಯಾನಿಲಯದ ಪದವಿ ಮತ್ತು ಸ್ನಾತಕೋತ್ತರ ಪದವಿ ಪ್ರವೇಶಾತಿ ಶುಲ್ಕ ಹಾಗೂ ಪರೀಕ್ಷಾ ಶುಲ್ಕವನ್ನು ರದ್ದುಪಡಿಸಬೇಕೇಂದು ಒತ್ತಾಯಿಸಿ ವಿಶ್ವವಿದ್ಯಾನಿಲಯದ ಆಡಳಿತ ವ್ಯವಸ್ಥೆಯ ವಿರುದ್ಧ ವಿದ್ಯಾರ್ಥಿಗಳು ವಿವಿಧ ಘೋಷಣೆಗಳನ್ನು ಕೂಗುತ್ತಾ ಮಾನಸಗಂಗೋತ್ರಿಯ ಕ್ಲಾಕ್ ಟವರ್ ಮುಂಭಾಗ ಪ್ರತಿಭಟನೆ ಮಾಡಲಾಯಿತು.
ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಇದ್ದಕ್ಕಿದ್ದ ಹಾಗೆ ಪ್ರವೇಶ ಶುಲ್ಕ ಮತ್ತು ಪರೀಕ್ಷಾ ಶುಲ್ಕವನ್ನು ಕೂಡಲೇ ಪಾವತಿ ಮಾಡಬೇಕೆಂದು ಆದೇಶ ಹೊರಡಿಸಿರುವ ಆಡಳಿತ ವ್ಯವಸ್ಥೆಗೆ ಧೋರಣೆಯನ್ನು ತೀವ್ರವಾಗಿ ಖಂಡಿಸಿ, ಕರ್ನಾಟಕ ರಾಜ್ಯ ಸಂಶೋಧಕ ಸಂಘದ ಅಧ್ಯಕ್ಷರಾದ ಮರಿದೇವಯ್ಯ.ಎಸ್ ನೇತೃತ್ವದಲ್ಲಿ ಪ್ರತಿಭಟನೆ ಮಾಡಲಾಯಿತು,
2021/22ನೇ ಸಾಲಿನಲ್ಲಿ ಮೈಸೂರು ವಿಶ್ವವಿದ್ಯಾನಿಲಯದ ಪದವಿ ಮತ್ತು ಸ್ನಾತಕೋತ್ತರ ಪದವಿ ಪ್ರವೇಶಾತಿ ಸಂದರ್ಭದಲ್ಲಿ ಎಸ್ಸಿ/ಎಸ್ಟಿ ವಿದ್ಯಾರ್ಥಿಗಳಿಗೆ ಪ್ರವೇಶಾತಿಯನ್ನು ಸರ್ಕಾರದ ಆದೇಶದ ಅನುಸಾರ ಉಚಿತವಾಗಿ ಪ್ರವೇಶಾತಿಯನ್ನು ನೀಡಿದ್ದು, ವಿದ್ಯಾರ್ಥಿಗಳಿಗೆ ಸ್ಕಾಲರ್ ಶಿಪ್ ಗೆ ಬಂದಾಗ ಪ್ರವೇಶ ಶುಲ್ಕವನ್ನು ಕಡಿತ ಮಾಡಿಕೊಳ್ಳಬೇಕಿತ್ತು. ಆದರೆ ವಿದ್ಯಾರ್ಥಿಗಳಿಗೆ ಸ್ಕಾಲರ್ ಶಿಪ್ ಬರುವ ಮುಂಚೆಯೇ ಎಲ್ಲರೂ ಪ್ರವೇಶ ಶುಲ್ಕ ಮತ್ತು ಪರೀಕ್ಷಾ ಶುಲ್ಕವನ್ನು 31/05/2022ರಂದು ಕಡೆಯ ದಿನದ ಒಳಗೆ ಕಟ್ಟಬೇಕೆಂದು ಸುತ್ತೋಲೆ ಹೊರಡಿಸಿದ್ದು, ಗ್ರಾಮೀಣ ಭಾಗದ ಬಡತನ ರೇಖೆಗಿಂತ ಕೆಳಗಿರುವ ಪದವಿ ಮತ್ತು ಸ್ನಾತಕೋತ್ತರ ಪದವಿಯನ್ನು ಅಧ್ಯಯನ ಮಾಡುತ್ತಿರುವ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಹಿಂದುಳಿದ ವರ್ಗದ ವಿದ್ಯಾರ್ಥಿಗಳು 15 ರಿಂದ 20ಸಾವಿರ ರೂಪಾಯಿ ಹಣವನ್ನು ಕಟ್ಟಲು ಸಾಧ್ಯವಿಲ್ಲ. ಹಾಗಾಗಿ ಕೂಡಲೇ ಪ್ರವೇಶ ಶುಲ್ಕ ಮತ್ತು ಪರೀಕ್ಷಾ ಶುಲ್ಕವನ್ನು ರದ್ದುಪಡಿಸಿ, ಸ್ಕಾಲರ್ ಶಿಪ್ ಬಂದ ನಂತರ ಪ್ರವೇಶ ಶುಲ್ಕವನ್ನು ಮತ್ತು ಪರೀಕ್ಷಾ ಶುಲ್ಕವನ್ನು ಕಡಿತಗೊಳಿಸಿ ಕೊಳ್ಳಬೇಕೆಂದು ಒತ್ತಾಯಿಸಲಾಯಿತು. ಪ್ರತಿಭಟನಾ ಸ್ಥಳಕ್ಕೆ ಮೈಸೂರು ವಿಶ್ವವಿದ್ಯಾನಿಲಯದ ಕುಲಪತಿಗಳು ಬಂದು ವಿದ್ಯಾರ್ಥಿಗಳ ಬೇಡಿಕೆಗಳನ್ನು ಆಲಿಸಿದ್ದು, ಆದೇಶವನ್ನು 03/06/2022ನೇ ತಾರೀಕಿನ ಒಳಗೆ ರದ್ದುಪಡಿಸುವುದಾಗಿ ಭರವಸೆ ಕೊಟ್ಟ ನಂತರ ಹೋರಾಟವನ್ನು ಕೈಬಿಡಲಾಯಿತು.
ಪ್ರತಿಭಟನೆಯಲ್ಲಿ ಕರ್ನಾಟಕ ರಾಜ್ಯ ಸಂಶೋಧಕರ ಸಂಘದ ಅಧ್ಯಕ್ಷ ಮರಿದೇವಯ್ಯ, ಸಂಶೋಧಕರ ಸಂಘದ ಅಧ್ಯಕ್ಷರಾದ ಶಶಿಕುಮಾರ್, ಸಂಶೋಧಕರಾದ ಕೆಂಪರಾಜು, ದಿಲೀಪ ವಿದ್ಯಾರ್ಥಿಗಳಾದ ಗೌತಮ್, ದಿಲೀಪ, ಶ್ರೀನಿವಾಸ, ಕಾರ್ತಿಕ್, ಕಿರಣ್ ಕುಮಾರ್, ಕತ್ತಿಕಾ, ದೀಪಿಕಾ, ಮಹೇಶ್ ಬನ್ನವಾಡಿ, ಗಣೇಶ್, ದಿವ್ಯಶ್ರೀ, ಗೌತಮ್, ಅಭಿಷೇಕ್, ಮೇಘನಾ, ದರ್ಶನ್, ನಂಜುಂಡಸ್ವಾಮಿ, ಪ್ರವೀಣ್ ಕುಮಾರ್ ಮುಂತಾದವರು ಭಾಗವಹಿಸಿದ್ದರು.
ವರದಿ: ಚಂದ್ರ ಹಾದನೂರು
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5


