nammatumakuru

    Subscribe to Updates

    Get the latest creative news from FooBar about art, design and business.

    What's Hot

    CEC ಜ್ಞಾನೇಶ್ ಕುಮಾರ್‌ರನ್ನು ತಕ್ಷಣ ವಜಾಗೊಳಿಸಿ, ಕ್ರಿಮಿನಲ್ ಕೇಸ್ ದಾಖಲಿಸಿ: ರಾಷ್ಟ್ರಪತಿಗೆ ಸಿದ್ದರಾಮಯ್ಯ ಆಗ್ರಹ

    September 26, 2026

    ಸಾರ್ವಜನಿಕ ಸ್ಥಳದಲ್ಲಿ ಮೂತ್ರ ವಿಸರ್ಜನೆ ಆರೋಪ: ಬಿಜೆಪಿ ಶಾಸಕ ಮುನಿರತ್ನಗೆ ಯುವಕನಿಂದ ತರಾಟೆ!

    September 26, 2026

    ವಿರಾಜಪೇಟೆ ಗಣೇಶ ವಿಸರ್ಜನೆ ವೇಳೆ ಕರೆಂಟ್ ಶಾಕ್: ಐವರಿಗೆ ಗಾಯ, ಇಬ್ಬರ ಸ್ಥಿತಿ ಗಂಭೀರ; ತಪ್ಪಿದ ದೊಡ್ಡ ಅನಾಹುತ!

    September 26, 2026
    Facebook Twitter Instagram
    ಟ್ರೆಂಡಿಂಗ್
    • CEC ಜ್ಞಾನೇಶ್ ಕುಮಾರ್‌ರನ್ನು ತಕ್ಷಣ ವಜಾಗೊಳಿಸಿ, ಕ್ರಿಮಿನಲ್ ಕೇಸ್ ದಾಖಲಿಸಿ: ರಾಷ್ಟ್ರಪತಿಗೆ ಸಿದ್ದರಾಮಯ್ಯ ಆಗ್ರಹ
    • ಸಾರ್ವಜನಿಕ ಸ್ಥಳದಲ್ಲಿ ಮೂತ್ರ ವಿಸರ್ಜನೆ ಆರೋಪ: ಬಿಜೆಪಿ ಶಾಸಕ ಮುನಿರತ್ನಗೆ ಯುವಕನಿಂದ ತರಾಟೆ!
    • ವಿರಾಜಪೇಟೆ ಗಣೇಶ ವಿಸರ್ಜನೆ ವೇಳೆ ಕರೆಂಟ್ ಶಾಕ್: ಐವರಿಗೆ ಗಾಯ, ಇಬ್ಬರ ಸ್ಥಿತಿ ಗಂಭೀರ; ತಪ್ಪಿದ ದೊಡ್ಡ ಅನಾಹುತ!
    • ಕಚೇರಿಗೆ ತಡವಾಗಿ ಬಂದ ಅಧಿಕಾರಿಗಳಿಗೆ ಗೇಟ್ ಬಂದ್: ಜಿಪಂ ಸಿಇಒ ದಿಢೀರ್ ಭೇಟಿ, ಒಂದು ದಿನದ ಸಂಬಳ ಕಟ್ ಎಚ್ಚರಿಕೆ!
    • ಕೊರಟಗೆರೆ: ಮಹಿಳೆಯರ ಆರ್ಥಿಕ ಸ್ವಾವಲಂಬನೆಗೆ ಒತ್ತು– ಸರ್ವಜನ ಶ್ರಮಜೀವಿ ಸೇವಾ ಟ್ರಸ್ಟ್ ಉದ್ಘಾಟನೆ
    • ಮಾವತ್ತೂರು ಸೊಸೈಟಿ ಸರ್ವ ಸದಸ್ಯರ ಸಭೆ ರಣರಂಗ: ಕಾರ್ಯದರ್ಶಿ ವಿರುದ್ಧ ಗಂಭೀರ ಆರೋಪ, ಅರ್ಧದಲ್ಲೇ ಸಭೆ ಮುಂದೂಡಿಕೆ!
    • ದಸರಾ ಕ್ರೀಡಾಕೂಟ: ಜಿಲ್ಲಾ ಮಟ್ಟದ ಬಾಲ್ ಬ್ಯಾಡ್ಮಿಂಟನ್‌ ನಲ್ಲಿ ಪಾವಗಡದ ಚನ್ನಕೇಶವಪುರ ತಂಡಕ್ಕೆ ದ್ವಿತೀಯ ಸ್ಥಾನ
    • ಬುಡುಬುಡಿ ವೇಷಧಾರಿ ಕಳ್ಳರ ಬಂಧನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಅಭಿವೃದ್ಧಿ  ಶೂನ್ಯ, ಬರೀ ವಿವಾದಗಳೇ ಬಿಜೆಪಿ ಸರ್ಕಾರದ ಸಾಧನೆ: ಕೆ.ಷಡಕ್ಷರಿ        
    ತಿಪಟೂರು June 1, 2022

    ಅಭಿವೃದ್ಧಿ  ಶೂನ್ಯ, ಬರೀ ವಿವಾದಗಳೇ ಬಿಜೆಪಿ ಸರ್ಕಾರದ ಸಾಧನೆ: ಕೆ.ಷಡಕ್ಷರಿ        

    By adminJune 1, 2022No Comments1 Min Read
    Shadakshari

    ತಿಪಟೂರು : ಅಭಿವೃದ್ಧಿಯಲ್ಲಿ ಶೂನ್ಯ. ಕಳೆದ ಚುನಾವಣೆಯಲ್ಲಿ ಜನರಿಗೆ ಅನೇಕ ಸುಳ್ಳು ಭರವಸೆ ನೀಡಿ ಶಾಸಕರನ್ನು ಹೈಜಾಕ್ ಮಾಡಿ ಅಧಿಕಾರಕ್ಕೆ ಬಂದ ಬಿಜೆಪಿ ಸರ್ಕಾರ ಸದಾ ವಿವಾದಗಳನ್ನು ಸೃಷ್ಠಿಸುತ್ತಾ ಜನರ ಮನಸ್ಸಿಗೆ ಘಾಸಿ ಮಾಡಿ ಸದಾ ಒಂದು ಸಮುದಾಯದ ಹಿತ ಕಾಪಾಡುತ್ತಾ ಎಲ್ಲಾ ವರ್ಗದವರ ದಾರಿತಪ್ಪಿಸುತ್ತಿದೆ.  ಇದೀಗ ರಾಜ್ಯ ಸರ್ಕಾರ ಪಠ್ಯ ಪರಿಷ್ಕರಣೆ ಹೆಸರಲ್ಲಿ ತಮ್ಮ ಕೋಮುವಾದ ಬಿಂಬಿಸುತ್ತಿದೆ ಎಂದು ತಿಪಟೂರು ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಕೆ.ಷಡಕ್ಷರಿ  ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ನಾನು ನನ್ನ ರಾಜಕೀಯ ಜೀವನದಲ್ಲಿ ಇಂತಹ ದುಸ್ಥಿತಿ ಎಂದೂ ಕಂಡಿಲ್ಲಾ. ಹಿಂದೆ ತಾವು ಬರೆದ ಲೇಖನ ಪಠ್ಯದಲ್ಲಿ ಬಂದರೇ ಹೆಮ್ಮೆಪಡುತ್ತಿದ್ದರು. ಆದರೆ ಈಗ  ಪಠ್ಯ ಭಾಗಗಳಿಗೆ ಲೇಖಕರು ಬರೆದ ಪಾಠಗಳನ್ನು ದಯಮಾಡಿ ಸೇರಿಸಬೇಡಿ ಎಂದು ಲೇಖಕರೇ ಪತ್ರ ಬರೆಯುತ್ತಿರುವುದು ದುಸ್ಥಿತಿಯಾಗಿದೆ ಎಂದು ಅವರು ಹೇಳಿದರು.

    ಲಿಂಗಾಯತ ಧರ್ಮ ಸ್ಥಾಪನೆ ಮಾಡಿದ ಜ್ಞಾನಜ್ಯೊತಿ ಬಸವಣ್ಣ ಧರ್ಮವನ್ನು ಸುಧಾರಿಸಿದರು ಎಂದು ಸೇರಿಸುವ ಮಟ್ಟಕ್ಕೆ ಇಳಿದಿದ್ದಾರೆಂದರೇ ಜನ ಯೋಚಿಸಬೇಕು. ಮಾನವ ಧರ್ಮದ ಪ್ರತೀಕವಾದ ಕುವೆಂಪು ಮಾತುಗಳನ್ನು ತಿರಚಲಾಗುತ್ತಿದೆ. ಇದಕ್ಕೆಲ್ಲಾ ಕಾರಣ ದುರಹಂಕಾರಿ ಬಿಜೆಪಿ ಸರ್ಕಾರ. ಕೇವಲ ಒಂದು ಸಮುದಾಯ ಸದಾ ಮೇಲ್ಪಂಕ್ತಿಯಲ್ಲಿರಬೇಕು ಎಂದು ಲಿಂಗಾಯತ ಧರ್ಮ ಸೇರಿದಂತೆ ಎಲ್ಲಾ ಧರ್ಮಗಳನ್ನು ಕೆಳ ಮಟ್ಟಕ್ಕೆ ಇಳಿಸುತ್ತಿರುವುದು ಶೋಚನೀಯ ಸ್ಥಿತಿಯಾಗಿದೆ ಎಂದು ಅವರು ಟೀಕಿಸಿದರು.

    ಅಲ್ಪಸಂಖ್ಯಾತರ ಮೇಲೆ ಸದಾ ದೌರ್ಜನ್ಯ ಮಾಡುತ್ತಾ, ದಲಿತ ವರ್ಗದವರನ್ನು ಸದಾ ದೂರವಿಡುತ್ತಾ ಸಮಾಜದ ಸಾಮರಸ್ಯ ಹಾಳು ಮಾಡುತ್ತಿದ್ದಾರೆ. ಇತಿಹಾಸವನ್ನೇ ತಿರುಚುವ ಕೆಲಸ ಮಾಡುತ್ತಿದ್ದಾರೆ. ಜಗದ್ಗುರುಗಳ ಹಾಗೂ ಮಠಾಧಿಪತಿಗಳ ಮಾತುಗಳಿಗೆ ಗೌರವ ಕೊಡದ ರೀತಿ ವರ್ತಿಸುತ್ತಿದ್ದಾರೆ.                ಡಾ.ಬಿ.ಆರ್.ಅಂಬೇಡ್ಕರ್ ಬರೆದ ಸಂವಿಧಾನಕ್ಕೆ ಅಗೌರವ ನೀಡುತ್ತಿದ್ದಾರೆ. ಸಂವಿಧಾನವನ್ನೇ ಬದಲಿಸುತ್ತೇವೆ ಎಂದು ಮಾರ್ಮಿಕವಾಗಿ ಹೇಳಿಕೆ ನೀಡುವ ಕೊಬ್ಬು ಬಂದಿದೆ.  ಪ್ರಜಾಪ್ರಭುತ್ವ ತುಳಿದು, ಏಕ ಚಕ್ರಾಧಿಪತಿಗಳಂತೆ ವರ್ತಿಸುತ್ತಿದ್ದಾರೆ. ಅಧಿಕಾರ ಶಾಶ್ವತವಲ್ಲಾ ಎಂದು ಆಕ್ರೋಶ ವ್ಯಕ್ತಪಡಿಸಿದರು.

    ವರದಿ:  ಆನಂದ, ತಿಪಟೂರು


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5

    admin
    • Website

    Related Posts

    ತಿಪಟೂರಿನ ಶ್ರೀ ಬಸವೇಶ್ವರ ಕಾಲೇಜಿನಲ್ಲಿ ಅರ್ಥಪೂರ್ಣ ‘ವಿಶ್ವ ಫಾರ್ಮಸಿಸ್ಟ್ ದಿನಾಚರಣೆ — 2026’

    September 26, 2026

    ಬೋಧಕ ವರ್ಗ ಹಾಗೂ ಗ್ರಂಥಾಲಯದ ಜ್ಞಾನವನ್ನು ಸದುಪಯೋಗಪಡಿಸಿಕೊಳ್ಳಿ: ಡಾ. ಶಶಿಕುಮಾರ್ ಎಚ್.ಸಿ.

    September 20, 2026

    ತಿಪಟೂರಿನಲ್ಲಿ ಹೋಟೆಲ್ ಹಾಗೂ ಡಾಬಾಗಳ ಮೇಲೆ ಜಂಟಿ ದಾಳಿ: ಕಳಪೆ ಆಹಾರ ಪದಾರ್ಥಗಳು ವಶ

    September 12, 2026

    Leave A Reply Cancel Reply

    Our Picks

    ಕಾವೇರಿ ಜಲ ವಿವಾದ: CWMA ಆದೇಶ ಪಾಲನೆ ಮುಂದುವರಿಸಲು ಕರ್ನಾಟಕಕ್ಕೆ ಸುಪ್ರೀಂಕೋರ್ಟ್ ಸೂಚನೆ

    September 24, 2026

    ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಸ್ವೀಕರಿಸಿದ ಹಿರಿಯ ನಟ ಅನಂತ್ ನಾಗ್

    September 23, 2026

    ಗಣೇಶೋತ್ಸವ ಅನ್ನದಾನದ ವೇಳೆ ಕುದಿಯುತ್ತಿದ್ದ ಸಾಂಬಾರ್‌ ಪಾತ್ರೆಗೆ ಬಿದ್ದು ಮಹಿಳೆ ದಾರುಣ ಸಾವು

    September 22, 2026

    ನೇಪಾಳ ಪ್ರವಾಹ: ತುಮಕೂರು ಮೂಲದ ಇಬ್ಬರು ನಾಪತ್ತೆ

    September 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    CEC ಜ್ಞಾನೇಶ್ ಕುಮಾರ್‌ರನ್ನು ತಕ್ಷಣ ವಜಾಗೊಳಿಸಿ, ಕ್ರಿಮಿನಲ್ ಕೇಸ್ ದಾಖಲಿಸಿ: ರಾಷ್ಟ್ರಪತಿಗೆ ಸಿದ್ದರಾಮಯ್ಯ ಆಗ್ರಹ

    September 26, 2026

    ಬೆಂಗಳೂರು: ಭಾರತೀಯ ಚುನಾವಣಾ ಆಯೋಗದ (ECI) ಕಾರ್ಯವೈಖರಿ ಮತ್ತು ಸ್ವಾಯತ್ತತೆಯ ಕುರಿತು ಗಂಭೀರ ಕಳವಳ ವ್ಯಕ್ತಪಡಿಸಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ,…

    ಸಾರ್ವಜನಿಕ ಸ್ಥಳದಲ್ಲಿ ಮೂತ್ರ ವಿಸರ್ಜನೆ ಆರೋಪ: ಬಿಜೆಪಿ ಶಾಸಕ ಮುನಿರತ್ನಗೆ ಯುವಕನಿಂದ ತರಾಟೆ!

    September 26, 2026

    ವಿರಾಜಪೇಟೆ ಗಣೇಶ ವಿಸರ್ಜನೆ ವೇಳೆ ಕರೆಂಟ್ ಶಾಕ್: ಐವರಿಗೆ ಗಾಯ, ಇಬ್ಬರ ಸ್ಥಿತಿ ಗಂಭೀರ; ತಪ್ಪಿದ ದೊಡ್ಡ ಅನಾಹುತ!

    September 26, 2026

    ಕಚೇರಿಗೆ ತಡವಾಗಿ ಬಂದ ಅಧಿಕಾರಿಗಳಿಗೆ ಗೇಟ್ ಬಂದ್: ಜಿಪಂ ಸಿಇಒ ದಿಢೀರ್ ಭೇಟಿ, ಒಂದು ದಿನದ ಸಂಬಳ ಕಟ್ ಎಚ್ಚರಿಕೆ!

    September 26, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.