ತುಮಕೂರು: ರಾಜ್ಯದಲ್ಲಿ ಪಠ್ಯ ಪುಸ್ತಕ ಪರಿಷ್ಕರಣೆ ವಿವಾದದ ಹಿನ್ನೆಲೆ ಅಖಿಲ ಭಾರತೀಯ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟ(ಎನ್‌ಎಸ್‌ಯುಐ) ರಾಜ್ಯಾಧ್ಯಕ್ಷ ಕೀರ್ತಿ ಗಣೇಶ್ ನೇತೃತ್ವದಲ್ಲಿ ಕಾರ್ಯಕರ್ತರು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಮನೆಗೆ ದಿಢೀರ್ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದ್ದಲ್ಲದೆ,ಖಾಕಿ ಚಡ್ಡಿಗೆ ಬೆಂಕಿ ಹಚ್ಚಿ ತಮ್ಮ ಆಕ್ರೋಶ ವ್ಯಕ್ತಪಡಿಸಿದ ಘಟನೆ ಬುಧವಾರ ನಡೆದಿದೆ.
ಈಗಾಗಲೇ 15 ಜನರರು ಮತ್ತು 2 ವಾಹನವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ರೀತಿಯ ಗುಂಡಾ ವರ್ತನೆ ನಮ್ಮಲ್ಲಿ ನಡೆಯಲ್ಲ. ಬೆಂಗಳೂರಿಂದ ಐವರು, ದಾವಣಗೆರೆಯಿಂದ ಮೂವರು, ಹಾಸನದಿಂದ ಒಬ್ಬರು, ತುಮಕೂರಿನಿಂದ ಒಬ್ಬರು ಎಸ್ಎಸ್ಯುಐ ಮುಖಂಡರು ಪ್ರೀ ಪ್ಲಾನ್ ಮಾಡಿಕೊಂಡು ಬಂದಿದ್ದಾರೆ. ಅವರಿಗೆಲ್ಲ ಈಗ ಪೊಲೀಸರು ಕಾನೂನಿನ ಪಾಠ ಮಾಡ್ತಾರೆ. ಇದು ಕಾಂಗ್ರೆಸ್ ಮುಖಂಡರ ಕೈವಾಡ. ದಾವಣಗೆರೆಯ ಎನ್‌ಎಸ್‌ಯುಐ ಉಪಾಧ್ಯಕ್ಷ ಫೈಲ್ವಾನ್ ಅಲಿ ರೆಹಮಾನ್ ಎಂಬಾತ ಬಂದಿದ್ದಾನೆ. ಮೊದಲೇ ಸಂಚು ರೂಪಿಸಿಕೊಂಡು ಬಂದಿದ್ದಾರೆ ಎಂದು ಗೃಹ ಸಚಿವರು ಎಚ್ಚರಿಸಿದರು.ಘಟನೆಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಗೃಹ ಸಚಿವ ಆರಗ ಜ್ಞಾನೇಂದ್ರ ಸೇರಿ ಹಲವು ಮುಖಂಡರು ಖಂಡಿಸಿದ್ದು, ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಕುರಿತು ತುರ್ತುಗೋಷ್ಠಿ ನಡೆಸಿದ ಗೃಹ ಸಚಿವ ಅರಗ ಜ್ಞಾನೇಂದ್ರ, ಕಾಂಗ್ರೆಸ್ನ ಕೆಲ ಕಾರ್ಯಕರ್ತರು ನಾಗೇಶ್ರ ಮನೆಗೆ ನುಗ್ಗಿದ್ದಾರೆ. ಅಷ್ಟೇ ಅಲ್ಲ ನನಗೆ ಬಂದ ಮಾಹಿತಿ ಪ್ರಕಾರ ಅವರು ನಾಗೇಶ್ರ ಮನೆಗೆ ಬೆಂಕಿ ಹಾಕಲು ಮುಂದಾಗಿದ್ದರು ಎಂದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5