ಹೊಸ ಚುನಾವಣೆಗಳನ್ನು ಘೋಷಿಸದಿದ್ದರೆ ದೇಶದಲ್ಲಿ ಅಂತರ್ಯುದ್ಧಕ್ಕೆ ನಡೆಯಲಿದೆ ಎಂದು ಪಾಕಿಸ್ತಾನದ ಉಚ್ಚಾಟಿತ ಪ್ರಧಾನಿ ಇಮ್ರಾನ್ ಖಾನ್ ಎಚ್ಚರಿಸಿದ್ದಾರೆ.
ಬುಧವಾರ ಬೋಲ್ ನ್ಯೂಸ್ ಗೆ ನೀಡಿದ ಸಂದರ್ಶನದಲ್ಲಿ, ಪಾಕಿಸ್ತಾನ್ ತೆಹ್ರೀಕ್-ಇ-ಇನ್ಸಾಫ್ (ಪಿಟಿಐ) ಅಧ್ಯಕ್ಷರು ಆದ ಇಮ್ರಾನ್ ಖಾನ್, ಸರ್ಕಾರ ನಮ್ಮ ಪಕ್ಷದ ಪ್ರತಿಭಟನಾಕಾರರಿಗೆ ಕಿರುಕುಳ ನೀಡುತ್ತಿದೆ. ಅವರಿಗೆ ರಕ್ಷಣೆ ನೀಡುವಂತೆ ಸುಪ್ರೀಂ ಕೋರ್ಟ್‍ಗೆ ಮನವಿ ಮಾಡಲಾಗಿದೆ. ನ್ಯಾಯಾಲಯ ನೀಡುವ ನಿರ್ದೇಶನವನ್ನು ಕಾಯುತ್ತಿದ್ದೇನೆ. ನಂತರ ಮುಂದಿನ ಪ್ರತಿಭಟನೆಗೆ ದಿನಾಂಕವನ್ನು ನಿಗದಿ ಮಾಡುತ್ತೇನೆ ಎಂದು ಹೇಳಿದ್ದಾರೆ.
ಕಾನೂನು ಮತ್ತು ಸಾಂವಿಧಾನಿಕ ವಿಧಾನಗಳ ಮೂಲಕ ಚುನಾವಣೆಗೆ ಹೋಗಲು ನಮಗೆ ಅವಕಾಶ ನೀಡಬೇಕು. ಇಲ್ಲದಿದ್ದರೆ ಈ ದೇಶದಲ್ಲಿ ಅಂತರ್ಯುದ್ಧ ನಡೆಯುತ್ತದೆ ಎಂದು ಎಚ್ಚರಿಸಿದರು. ಯಾವುದೇ ಕಾರಣಕ್ಕೂ ತಾವು ಸಂಸತ್ ಕಲಾಪದಲ್ಲಿ ಭಾಗವಹಿಸುವುದಿಲ್ಲ. ವಿರೋಧ ಪಕ್ಷದ ನಾಯಕನಾಗಿ ನಾನು ಸಂಸತ್‍ನಲ್ಲಿ ಕುಳಿತುಕೊಂಡರೆ ಅವರು ನನ್ನನ್ನು ಪದಚ್ಯುತಗೊಳಿಸಿದ ಪಿತೂರಿಯನ್ನು ಒಪ್ಪಿಕೊಂಡಂತಾಗುತ್ತದೆ ಎಂದಿದ್ದಾರೆ.
ಇಮ್ರಾನ್ ಖಾನ್, ತಮ್ಮನ್ನು ಪದಚ್ಯುತಗೊಳಿಸಿದ ದಿನದಿಂದಲೂ ಪ್ರತಿಭಟನೆಗಳನ್ನು ನಡೆಸುತ್ತಿದ್ದಾರೆ. ಶೆಹಬಾಜ್ ಷರೀಫ್ ನೇತೃತ್ವದ ಸಮ್ಮಿಶ್ರ ಸರ್ಕಾರ ವಿದೇಶದ ಆಮದು ಮಾಡಿಕೊಂಡಿದ್ದಾಗಿದೆ. ಅದು ಪಾಕಿಸ್ತಾನದ ಜನರ ನಿಜವಾದ ಪ್ರತಿನಿಯಲ್ಲ ಎಂದು ಕಿಡಿಕಾರಿದ್ದಾರೆ.
ಕಳೆದ ಬುಧವಾರ ಸಾವಿರಾರು ಬೆಂಬಲಿಗರೊಂದಿಗೆ ಇಮ್ರಾನ್ ಖಾನ್, ಇಸ್ಲಮಾಬಾದ್‍ನಲ್ಲಿ ಪ್ರತಿಭಟನೆ ನಡೆಸಿದ್ದರು. ದೇಶದಲ್ಲಿ ಚುನಾವಣೆ ಘೋಷಿಸದಿದ್ದರೆ ಮತ್ತೆ ರಾಜಧಾನಿಯಲ್ಲಿ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಸಿದ್ದರು.
ವರದಿ: ಆಂಟೋನಿ ಬೇಗೂರು
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5