ಪಾವಗಡ : ಕೋವಿಡ್ ನಿಂದಾಗಿ ಕುಂಠಿತಗೊಂಡಿದ್ದ ಮಕ್ಕಳ ಶೈಕ್ಷಣಿಕ ವಿದ್ಯಾಭ್ಯಾಸ ಇತ್ತೀಚಿಗೆ ಚೇತರಿಸಿಕೊಳ್ಳುತ್ತಿದ್ದು, ಶಾಲಾ ಅಭಿವೃದ್ಧಿ ಹಾಗೂ ಮಕ್ಕಳ ಶಿಕ್ಷಣಕ್ಕೆ ಹೆಚ್ಚಿನ ಪ್ರಾ ತಿನಿದ್ಯಾವನ್ನು ಹೆಲ್ಪ್ ಸೊಸೈಟಿ ನೀಡುತ್ತಿದೆ ಎಂದು ಹೆಲ್ಪ್ ಸೊಸೈಟಿ ಅಧ್ಯಕ್ಷರಾದ ಮಾನಂ ಶಶಿಕಿರಣ್ ತಿಳಿಸಿದರು.
ರಾಜಾವಂತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಟಿ.ಎನ್. ಬೆಟ್ಟ ಸರ್ಕಾರಿ ಹಿರಿಯ ಮಾದರಿ ಪಾಠಶಾಲೆಯಲ್ಲಿ ಇಂದು ಹೆಲ್ಪ್ ಸೊಸೈಟಿ ವತಿಯಿಂದ ವಿದ್ಯಾರ್ಥಿಗಳಿಗೆ ಶಾಲಾ ಬ್ಯಾಗ್, ನೋಟ್ ಬುಕ್ ಇನ್ನಿತರ ಸಾಮಗ್ರಿಗಳನ್ನು ವಿತರಣೆ ಮಾಡುವ ಸರಳ ಕಾರ್ಯಕ್ರಮ ವನ್ನು ಉದ್ದೇಶಿಸಿ ಅವರು ಮಾತನಾಡಿದರು.
ಈ ವೇಳೆ ಶಾಲಾ ಮುಖ್ಯ್ಯೊಪಧ್ಯಾಯರಾದ ಬಸವರಾಜ್ ಮಾತನಾಡುತ್ತ ಹೆಲ್ಪ್ ಸೊಸೈಟಿ ಸಂಸ್ಥೆ ಪ್ರತಿ ನಿತ್ಯ ಒಂದಲ್ಲ ಒಂದು ಸೇವಾ ಕಾರ್ಯಗಳನ್ನು ಮಾಡುವ ಮೂಲಕ ತಾಲ್ಲೂಕಿನ ಶೈಕ್ಷಣಿಕ ವಿದ್ಯಾಭ್ಯಾಸದ ಮಕ್ಕಳ ಬಗ್ಗೆ ಹೆಚ್ಚಿನ ಒಲವನ್ನು ತೋರಿಸುತ್ತಿದೆ. ಮಕ್ಕಳನ್ನು ಒಳ್ಳೆಯ ಪ್ರಜೆಗಳನ್ನಾಗಿ ಮಾಡುವ ಹಂಬಲ ಹೊಂದಿರುವ ಹೆಲ್ಪ್ ಸೊಸೈಟಿ ಅಧ್ಯಕ್ಷ ಮಾನಂ ಶಶಿಕಿರಣ್ ರವರನ್ನು ಮುಕ್ತ ಕಂಠದಿಂದ ಅಭಿನಂದಿಸಿ ಮತ್ತಷ್ಟು ಸೇವಾ ಕಾರ್ಯಗಳನ್ನು ಮಾಡಲು ಭಗವಂತ ಶಕ್ತಿ ನೀಡಲಿ ಆಶಿಸಿದರು.
ಈ ಸಂದರ್ಭದಲ್ಲಿ ಶಾಲಾ ಅಭಿವೃದ್ಧಿ ಸಮಿತಿ ಮನವಿ ಹಿನ್ನಲೆಯಲ್ಲಿ ಶಾಲೆಗೆ ನಲಿ ಕಲಿ ಮಾದರಿಯ ಬಣ್ಣದ ಚಿತ್ರಗಳನ್ನು ಬಿಡಿಸಲು ಸಹಕಾರ ನೀಡುವಂತೆ ಕೋರಿದರು.
ಈ ಸಂದರ್ಭದಲ್ಲಿ ಹೆಲ್ಪ್ ಸೊಸೈಟಿ ಅಧ್ಯಕ್ಷ ಮಾನಂ ಶಶಿಕಿರಣ್ ಹಾಗೂ ಆಟೋ ಚಾಲಕರ ಸಂಘದ ಅಧ್ಯಕ್ಷ ಬೇಕರಿ ನಾಗರಾಜ ರವರಿಗೆ ಶಾಲಾ ಅಭಿವೃದ್ಧಿ ಸಮಿತಿ ಶಾಲು ಹೊದಿಸಿ ಹುಮಾಲೆ ಹಾಗಿ ಅಭಿನಂದಿಸಿದರು.
ಕಾರ್ಯಕ್ರಮದಲ್ಲಿ ಶಾಲಾ ಮುಖ್ಯೋಪಾಧ್ಯಾರಾದ ಬಸವರಾಜ್, ಶಾಲಾ ಅಭಿವೃದ್ಧಿ ಸಮಿತಿ ಅಧ್ಯಕ್ಷರು, ಪದಾಧಿಕಾರಿಗಳು, ಅಂಗನವಾಡಿ ಶಿಕ್ಷಕಿ, ಹೆಲ್ಪ್ ಸೊಸೈಟಿ ಪದಾಧಿಕಾರಿಗಳಾದ ನಾಯ್ಕ್ ಶ್ರೀನಿವಾಸ್ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.
ವರದಿ: ರಾಮಪ್ಪ.ಸಿ.ಕೆ.ಪುರ.
ಪಾವಗಡ
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5