ತುಮಕೂರು: ತುರುವೇಕೆರೆ ಪಟ್ಟಣದಲ್ಲಿರುವ ತಾಲೋಕು ಕಚೇರಿಯಲ್ಲಿ ಮೈಸೂರು ದೊರೆ, ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಜಯಂತಿ ಆಚರಿಸಲಾಯಿತು.
ಒಡೆಯರ್ ರವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದ ಪಟ್ಟಣದ ಶ್ರೀ ಕಾಂತರಾಜ್ ಅರಸ್, ಬಳಿಕ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಹುಟ್ಟು ಹಬ್ಬದ ಶುಭಾಶಯವನ್ನು ಕೋರಿದರು.
ಕೃಷ್ಣರಾಜ ಒಡೆಯರ್ ಅವರ ಜಯಂತಿಯನ್ನು ಸರ್ಕಾರಿ ಆಚರಣೆಯನ್ನಾಗಿ ರಾಜ್ಯ ಸರ್ಕಾರ ಘೋಷಣೆ ಮಾಡಿದೆ. ಈ ಕಾರ್ಯಕ್ರಮಕ್ಕೆ ಸಂಘ, ಸಂಸ್ಥೆಗಳಿಗೆ ತಿಳಿಸಿ ಆಚರಣೆಗೆ ಆಹ್ವಾನ ನೀಡಬೇಕಾಗಿತ್ತು. ಆದರೆ ಸಮಯದ ಅಭಾವ ಇರುವುದರಿಂದ ಸಾಧ್ಯವಾಗಿಲ್ಲ ಎಂದು ತಹಸೀಲ್ದಾರರ ಪರವಾಗಿ ಶ್ರೀ ಕಾಂತರಾಜ್ ಅರಸ್ ವಿಷಾದ ವ್ಯಕ್ತಪಡಿಸಿದರು.
ಕಾರ್ಯಕ್ರಮದಲ್ಲಿ ತಹಸೀಲ್ದಾರ್ ಹಾಗೂ ಸಿಬ್ಬಂದಿ ಭಾಗವಹಿಸಿ ಪೂಜೆ ಸಲ್ಲಿಸಿದರು . ಈ ಸಮಾರಂಭದಲ್ಲಿ ಇಲಾಖೆಯ ಎಲ್ಲಾ ಸಿಬ್ಬಂದಿ ಹಾಜರಿದ್ದರು.
ವರದಿ: ಸುರೇಶ್ ಬಾಬು ಎಂ.ತುರುವೇಕೆರೆ
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB