ಪಿಎಸ್ ಐ ನೇಮಕಾತಿ ಅಕ್ರಮದ ತನಿಖೆಯನ್ನು ತೀವ್ರಗೊಳಿಸಿರುವ ಸಿಐಡಿ ಪೊಲೀಸರು ಆರೋಪಿ ದರ್ಶನ್ ಗೌಡ ಅವರನ್ನು ಕೊನೆಗೂ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಅವರ ಸಂಬಂಧಿ ಎಂದು ಆರೋಪಿ ದರ್ಶನ್ ಗೌಡ ಹೇಳಿಕೊಂಡಿದ್ದು ಆತನ ಬಂಧನದ ಮೂಲಕ ಪ್ರಕರಣವು ಮತ್ತೊಂದು ತಿರುವು ಪಡೆದುಕೊಂಡಿದೆ.
ಪಿಎಸ್‌ಐ ನೇಮಕಾತಿ ಅಕ್ರಮದಲ್ಲಿ ಈಗಾಗಲೇ ಹಲವರನ್ನು ಸಿಐಡಿ ತನಿಖೆಯ ಬಳಿಕ ಬಂಧಿಸಿದೆ. ಈಗ ಮತ್ತೆ ಬೇಟೆ ಮುಂದುವರೆಸಿದೆ. ಇಂದು ವಿಚಾರಣೆಯ ವೇಳೆ ಸಚಿವ ಅಶ್ವತ್ಥನಾರಾಯಣ ಹೆಸರು ಹೇಳಿ, ಆ ಬಳಿಕ ನಾಪತ್ತೆಯಾಗಿದ್ದ ಅಭ್ಯರ್ಥಿ ದರ್ಶನ್ ಗೌಡನನ್ನು ಬಂಧಿಸಿ ವಿಚಾರಣೆ ನಡೆಸಲಾಗಿದೆ.
ಕೆಲ ದಿನಗಳ ಹಿಂದೆ ವಿಚಾರಣೆ ವೇಳೆಯಲ್ಲಿ ದರ್ಶನ್ ಗೌಡ, ಸಚಿವರ ಹೆಸರು ಹೇಳಿದ್ದರು. ಇದೇ ಕಾರಣಕ್ಕೆ ಅವರನ್ನು ಪ್ರಕರಣದಲ್ಲಿ ಬಿಟ್ಟು ಕಳುಹಿಸಲಾಗಿದೆ ಎಂಬುದಾಗಿ ಕಾಂಗ್ರೆಸ್, ಜೆಡಿಎಸ್ ನಾಯಕರು ಆರೋಪಿಸಿದ್ದರು. ಇದು ರಾಜ್ಯಾಧ್ಯಂತ ವಿವಾದಕ್ಕೂ ಕಾರಣವಾಗಿತ್ತು. ಈ ಬಳಿಕ ಅವರು ನಾಪತ್ತೆಯಾಗಿದ್ದರು. ರಾಮನಗರ ಜಿಲ್ಲೆಯ ಮಾಗಡಿ ಮೂಲಕ ದರ್ಶನ್ ಗೌಡ ಬಂಧನಕ್ಕೆ ಸಿಐಡಿ ಹುಡುಕಾಟ ನಡೆಸಿತ್ತು. ಇದೀಗ ಕೊನೆಗೆ ಬಂಧಿಸುವಲ್ಲಿ ಯಶಸ್ವಿಯಾಗಿದೆ.
ಈ ನಡುವೆ ಪ್ರಕರಣದಲ್ಲಿ ಇಲ್ಲಿಯವರೆಗೆ ಬಂಧಿತರ ಸಂಖ್ಯೆ ೪೦ಕ್ಕೆ ಏರಿಕೆಯಾಗಿದ್ದು ತನಿಖೆಯನ್ನು ತೀವ್ರಗತಿಯಲ್ಲಿ ನಡೆಸಲಾಗುತ್ತಿದೆ. ಎರಡು ದಿನಗಳ ಹಿಂದೆ ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ವಸಂತರಾಯ್ ನರಿಬೋಳನನ್ನು ಬಂಧಿಸಿ ಹೆಚ್ಚಿನ ವಿಚಾರಣೆ ನಡೆಸಲಾಗಿತ್ತುಬಂಧಿತ ವಸಂತರಾಯ್ ನರಿಬೋಳ ಪಿಎಸ್‌ಐ ಪರೀಕ್ಷೆ ಅಭ್ಯರ್ಥಿ ಎನ್.ವಿ.ಸುನೀಲ್ ಕುಮಾರ್ ತಂದೆಯಾಗಿದ್ದು, ಸುನೀಲ್ ನನ್ನ ಪರೀಕ್ಷೆಯಲ್ಲಿ ಪಾಸ್ ಮಾಡಿಸುವುದಕ್ಕೆ ಆರ್.ಡಿ.ಪಾಟೀಲ್ ಮೊರೆ ಹೋಗಿದ್ದರು.
ವರದಿ: ಆಂಟೋನಿ ಬೇಗೂರು
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5


