ಮೈಸೂರು: ವಿಶ್ವವಿದ್ಯಾನಿಲಯದ ವಿದ್ಯಾರ್ಥಿ ವಿರೋಧಿ ನೀತಿಗಳನ್ನು ವಿರೋಧಿಸಿ ವಿದ್ಯಾರ್ಥಿಗಳ ಸಮಸ್ಯೆಗಳನ್ನು ಬಗೆಹರಿಸುವಂತೆ ಒತ್ತಾಯಿಸಿ ಬೃಹತ್ ಪ್ರತಿಭಟನೆ.
ಮೈಸೂರು: ವಿಶ್ವವಿದ್ಯಾನಿಲಯದ ಸಂಶೋಧಕರ ನೂತನ ವಿದ್ಯಾರ್ಥಿ ನಿಲಯವು ಉದ್ಘಾಟನೆಗೊಂಡು ಒಂದೂವರೆ ವರ್ಷ ಕಳೆದರೂ ವಿಶ್ವವಿದ್ಯಾನಿಲಯವು ಇನ್ನೂ ಸಹ ಪ್ರವೇಶಾತಿಯನ್ನು ನೀಡದೆ ವಿಳಂಬ ಮಾಡುತ್ತಿರುವುದರಿಂದ ಹಲವಾರು ಸಂಶೋಧನಾ ವಿದ್ಯಾರ್ಥಿಗಳಿಗೆ ಉಳಿದುಕೊಳ್ಳಲು ತೊಂದರೆ ಉಂಟಾಗಿದ್ದು, ಇದನ್ನು ಪ್ರಶ್ನಿಸಿ ಮೈಸೂರು ವಿಶ್ವವಿದ್ಯಾನಿಯದಲ್ಲಿ ವಿದ್ಯಾರ್ಥಿಗಳು ತೀವ್ರ ಪ್ರತಿಭಟನೆ ನಡೆಸಿದರು.
ಕುಲಪತಿಗಳಿಗೆ ಅನೇಕ ಬಾರಿ ಮನವಿ ಸಲ್ಲಿಸಿದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ದೂರಿದ ಪ್ರತಿಭಟನಾಕಾರರು, ಸಂಶೋಧಕರ ವಿದ್ಯಾರ್ಥಿನಿಲಯದ ಪ್ರವೇಶಾತಿ ಹಾಗೂ ಸ್ನಾತಕೋತ್ತರ ವಿದ್ಯಾರ್ಥಿಗಳ ಪ್ರವೇಶ ಶುಲ್ಕ ಮತ್ತು ಪರೀಕ್ಷಾ ಶುಲ್ಕ ಕೂಡಲೇ ಕಟ್ಟಬೇಕೆಂದು ಮೈಸೂರು ವಿವಿ ಆದೇಶ ಹೊರಡಿಸಿರುವ ಆದೇಶವನ್ನು ರದ್ದುಪಡಿಸಿ, ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಸ್ಕಾಲರ್ಶಿಪ್ ಬಂದನಂತರ ಶುಲ್ಕಗಳನ್ನು ಕಡಿತಗೊಳಿಸಬೇಕೆಂದು ಒತ್ತಾಯಿಸಿ ದರು.
ದಕ್ಷಿಣ ಪದವೀಧರರ ಕ್ಷೇತ್ರದ ಚುನಾವಣೆ ಇದೆ. ಅದೇ ದಿನ ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸಲಾಗುತ್ತಿದೆ. ಇದರಿಂದಾಗಿ ವಿದ್ಯಾರ್ಥಿಗಳಿಗೆ ತೊಂದರೆಯಾಗಲಿದೆ. ಪರೀಕ್ಷೆಯನ್ನು ಮುಂದೂಡಬೇಕು ಎಂದು ಇದೇ ವೇಳೆ ಪ್ರತಿಭಟನಾಕಾರರು ಒತ್ತಾಯಿಸಿದರು.
ಪ್ರತಿಭಟನಾ ಸ್ಥಳಕ್ಕೆ ಮೈಸೂರು ವಿವಿಯ ಕುಲಸಚಿವರಾದ ಪ್ರೊ.ಶಿವಪ್ಪ ಬಂದು ವಿದ್ಯಾರ್ಥಿಗಳ ಮನವಿಯನ್ನು ಸ್ವೀಕರಿಸಿ, ವಿದ್ಯಾರ್ಥಿಗಳ ಸಮಸ್ಯೆಗಳನ್ನು ಇನ್ನು ಎರಡು ದಿನಗಳಲ್ಲಿ ಬಗೆಹರಿಸುವುದಾಗಿ ಭರವಸೆ ಕೊಟ್ಟ ನಂತರ ಪ್ರತಿಭಟನೆ ಕೈಬಿಡಲಾಯಿತು.
ಪ್ರತಿಭಟನೆಯ ನೇತೃತ್ವವನ್ನು ಕರ್ನಾಟಕ ರಾಜ್ಯ ಸಂಶೋಧಕ ಸಂಘದ ಅಧ್ಯಕ್ಷರಾದ ಮರಿದೇವಯ್ಯ ಎಸ್ ವಹಿಸಿ ಮಾತನಾಡಿದರು. ಸಂಶೋಧಕರ ಸಂಘದ ಅಧ್ಯಕ್ಷರಾದ ಶಶಿಕುಮಾರ್, ದಲಿತ ವಿದ್ಯಾರ್ಥಿ ಒಕ್ಕೂಟದ ಅಧ್ಯಕ್ಷ ಕರುಣ, ಸಂಶೋಧಕರಾದ ನಂಜುಂಡಸ್ವಾಮಿ, ದಿಲೀಪ, ಪ್ರೀತಮ್, ಸುಪ್ರೀತ್, ಮಹೇಶ್.ಸಿ, ಪ್ರವೀಣ್ ಕುಮಾರ್, ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಾದ ಪರಂಜ್ಯೋತಿ, ಗೌತಮ್, ಅಭಿಷೇಕ್, ಬೀರಂಬಳ್ಳಿ ಶ್ರೀನಿವಾಸ, ಪ್ರೀತಮ್, ಕಾಂತರಾಜು, ವಿದ್ಯಾಶ್ರೀ, ಸೌಮ್ಯ, ರಂಜಿತ, ಸವಿತಾ, ಪುನೀತ ಇನ್ನು ಮುಂತಾದವರು ಭಾಗವಹಿಸಿದ್ದರು.
ವರದಿ: ಚಂದ್ರ ಹಾದನೂರು
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5


