nammatumakuru

    Subscribe to Updates

    Get the latest creative news from FooBar about art, design and business.

    What's Hot

    CEC ಜ್ಞಾನೇಶ್ ಕುಮಾರ್‌ರನ್ನು ತಕ್ಷಣ ವಜಾಗೊಳಿಸಿ, ಕ್ರಿಮಿನಲ್ ಕೇಸ್ ದಾಖಲಿಸಿ: ರಾಷ್ಟ್ರಪತಿಗೆ ಸಿದ್ದರಾಮಯ್ಯ ಆಗ್ರಹ

    September 26, 2026

    ಸಾರ್ವಜನಿಕ ಸ್ಥಳದಲ್ಲಿ ಮೂತ್ರ ವಿಸರ್ಜನೆ ಆರೋಪ: ಬಿಜೆಪಿ ಶಾಸಕ ಮುನಿರತ್ನಗೆ ಯುವಕನಿಂದ ತರಾಟೆ!

    September 26, 2026

    ವಿರಾಜಪೇಟೆ ಗಣೇಶ ವಿಸರ್ಜನೆ ವೇಳೆ ಕರೆಂಟ್ ಶಾಕ್: ಐವರಿಗೆ ಗಾಯ, ಇಬ್ಬರ ಸ್ಥಿತಿ ಗಂಭೀರ; ತಪ್ಪಿದ ದೊಡ್ಡ ಅನಾಹುತ!

    September 26, 2026
    Facebook Twitter Instagram
    ಟ್ರೆಂಡಿಂಗ್
    • CEC ಜ್ಞಾನೇಶ್ ಕುಮಾರ್‌ರನ್ನು ತಕ್ಷಣ ವಜಾಗೊಳಿಸಿ, ಕ್ರಿಮಿನಲ್ ಕೇಸ್ ದಾಖಲಿಸಿ: ರಾಷ್ಟ್ರಪತಿಗೆ ಸಿದ್ದರಾಮಯ್ಯ ಆಗ್ರಹ
    • ಸಾರ್ವಜನಿಕ ಸ್ಥಳದಲ್ಲಿ ಮೂತ್ರ ವಿಸರ್ಜನೆ ಆರೋಪ: ಬಿಜೆಪಿ ಶಾಸಕ ಮುನಿರತ್ನಗೆ ಯುವಕನಿಂದ ತರಾಟೆ!
    • ವಿರಾಜಪೇಟೆ ಗಣೇಶ ವಿಸರ್ಜನೆ ವೇಳೆ ಕರೆಂಟ್ ಶಾಕ್: ಐವರಿಗೆ ಗಾಯ, ಇಬ್ಬರ ಸ್ಥಿತಿ ಗಂಭೀರ; ತಪ್ಪಿದ ದೊಡ್ಡ ಅನಾಹುತ!
    • ಕಚೇರಿಗೆ ತಡವಾಗಿ ಬಂದ ಅಧಿಕಾರಿಗಳಿಗೆ ಗೇಟ್ ಬಂದ್: ಜಿಪಂ ಸಿಇಒ ದಿಢೀರ್ ಭೇಟಿ, ಒಂದು ದಿನದ ಸಂಬಳ ಕಟ್ ಎಚ್ಚರಿಕೆ!
    • ಕೊರಟಗೆರೆ: ಮಹಿಳೆಯರ ಆರ್ಥಿಕ ಸ್ವಾವಲಂಬನೆಗೆ ಒತ್ತು– ಸರ್ವಜನ ಶ್ರಮಜೀವಿ ಸೇವಾ ಟ್ರಸ್ಟ್ ಉದ್ಘಾಟನೆ
    • ಮಾವತ್ತೂರು ಸೊಸೈಟಿ ಸರ್ವ ಸದಸ್ಯರ ಸಭೆ ರಣರಂಗ: ಕಾರ್ಯದರ್ಶಿ ವಿರುದ್ಧ ಗಂಭೀರ ಆರೋಪ, ಅರ್ಧದಲ್ಲೇ ಸಭೆ ಮುಂದೂಡಿಕೆ!
    • ದಸರಾ ಕ್ರೀಡಾಕೂಟ: ಜಿಲ್ಲಾ ಮಟ್ಟದ ಬಾಲ್ ಬ್ಯಾಡ್ಮಿಂಟನ್‌ ನಲ್ಲಿ ಪಾವಗಡದ ಚನ್ನಕೇಶವಪುರ ತಂಡಕ್ಕೆ ದ್ವಿತೀಯ ಸ್ಥಾನ
    • ಬುಡುಬುಡಿ ವೇಷಧಾರಿ ಕಳ್ಳರ ಬಂಧನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಶ್ರೀ ಸೋಮೇಶ್ವರ ಶಾಲೆಯಲ್ಲಿ ವಿಶ್ವಪರಿಸರ ದಿನ ಆಚರಣೆ
    ತುರುವೇಕೆರೆ June 8, 2022

    ಶ್ರೀ ಸೋಮೇಶ್ವರ ಶಾಲೆಯಲ್ಲಿ ವಿಶ್ವಪರಿಸರ ದಿನ ಆಚರಣೆ

    By adminJune 8, 2022No Comments1 Min Read
    turuvekere

    ತುರುವೇಕೆರೆ: ಈ ಸಮಾಜ ನನಗೇನು ನೀಡಿದೆ ಅನ್ನುವುದಕ್ಕಿಂತ ಸಮಾಜಕ್ಕೆ  ನಾನೇನು ಕೊಡುಗೆ ನೀಡಿದ್ದೇನೆ ಎಂದು ನಾವೆಲ್ಲಾ ಆತ್ಮಾವಲೋಕನ ಮಾಡಿಕೊಳ್ಳಬೇಕು ಎಂದು ಹುಲ್ಲೇಕೆರೆ ಸಮಾಜ ಸೇವಕ ಎಚ್.ಬಿ.ಗಂಗಾಧರಯ್ಯ  ಹೇಳಿದರು.

    ತಾಲ್ಲೂಕಿನ ದಂಡಿನಶಿವರ ಹೋಬಳಿಯ ದೊಂಬರನಹಳ್ಳಿ ಗ್ರಾಮದ ಶ್ರೀ ಸೋಮೇಶ್ವರ ಪ್ರೌಢ ಶಾಲೆಯಲ್ಲಿ ಹಮ್ಮಿಕೊಂಡಿದ್ದ ನೋಟ್ ಬುಕ್, ಲೇಖನ ಸಾಮಗ್ರಿಗಳ ವಿತರಣೆ ಹಾಗೂ  ಪರಿಸರ ದಿನಾಚರಣೆಯ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

    ಗ್ರಾಮೀಣ ಪ್ರದೇಶದ  ಹಳ್ಳಿಗಳಲ್ಲಿ ಸಾಕಷ್ಟು ಪ್ರತಿಭಾವಂತ ಮಕ್ಕಳಿದ್ದಾರೆ ಅವರಿಗೆ ಸೂಕ್ತ ಮಾರ್ಗದರ್ಶನ  ಹಾಗೂ ಆರ್ಥಿಕ ನೆರವಿನ ಕೊರತೆಯಿಂದಾಗಿ ಎಷ್ಟೋ  ಪ್ರತಿಭೆಗಳು ಉನ್ನತ ಮಟ್ಟದ ವ್ಯಾಸಂಗ ಮಾಡಲು ಸಾಧ್ಯವಾಗದ ಸ್ಥಿತಿ ಇದೆ. ನಾವು ವ್ಯಾಸಂಗ ಮಾಡುತ್ತಿದ್ದ ಸಂದರ್ಭದಲ್ಲಿ  ಪೂರಕವಾದ ಪ್ರೋತ್ಸಾಹವಿಲ್ಲದ ಕಷ್ಟದ ದಿನಗಳನ್ನು ಕಂಡಿದ್ದೇನೆ.

    ಸಮಾಜದಲ್ಲಿ ಬಹಳ ಮಂದಿ ಸ್ಥಿತಿವಂತರಿದ್ದಾರೆ. ಅವರೆಲ್ಲಾ ಬಡಬಗ್ಗರಿಗೆ ತಮ್ಮ ಕೈಲಾದ ಸಹಾಯ ಮಾಡಿದರೆ ನಿರ್ಗತಿಕರೂ ಸಮಾಜದಲ್ಲಿ ಕೊಂಚ ಮುಂದೆ ಬರಲು ಸಾಧ್ಯವಿದೆ ಆದರೆ ಇಂತಹ ಮೌಲ್ಯಯುತ ಆಲೋಚನೆಗಳನ್ನು ಇಂದು ಕಾಣಲು ಸಾಧ್ಯವಿಲ್ಲ. ಬಲಗೈಯಲ್ಲಿ ಮಾಡಿದ ದಾನವು ಎಡಗೈಯಿಗೆ ತಿಳಿಯಬಾರದು ಎಂದು ನಮ್ಮ ಹಿರಿಯರು ಹೇಳುತ್ತಿದ್ದರು ಆದರೆ ಇಂದು ಸೇವೆಗಳು ಕೇವಲ ತೋರ್ಪಡಿಕೆಗೆ, ಹೆಸರು ಗಳಿಕೆಗೆ ಮಾತ್ರ ಸೀಮಿತವಾಗುತ್ತಿವೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

    ಮುಖ್ಯ ಶಿಕ್ಷಕಿ ಎಚ್.ಕೆ.ರತ್ನಮ್ಮ ಮಾತನಾಡಿ, ಪ್ರತಿಯೊಬ್ಬ ವಿದ್ಯಾರ್ಥಿ ತಮ್ಮ ಮುಂದಿನ ಜೀವನ ರೂಪಿಸಿಕೊಳ್ಳಲು ಪ್ರೌಢ ಶಾಲಾ  ಹಂತ  ಸೂಕ್ತ ವೇದಿಕೆಯನ್ನು ನಿರ್ಮಿಸಿಕೊಡುತ್ತದೆ. ಈ ವೇಳೆ ವಿದ್ಯಾರ್ಥಿಗಳು ಕಾಲ ಹರಣ ಮಾಡದೆ ಓದುವಿನ ಕಡೆ ಚಿತ್ತಹರಿಸಿ  ಗುರಿಯೆಡೆಗೆ ಸಾಗ ಬೇಕು ಎಂದು ಕಿವಿ ಮಾತು ಹೇಳಿದರು.

    ಇದೇ ವೇಳೆ  ಸಮಾಜ ಸೇವಕ ಎಚ್.ಬಿ.ಗಂಗಾಧರಯ್ಯ ಅವರನ್ನು ಶಾಲಾ ವತಿಯಿಂದ ಸನ್ಮಾನಿಸಲಾಯಿತು. ಸಮಾರಂಭದಲ್ಲಿ  ಎಸ್.ಡಿ.ಎಂಸಿ ಅಧ್ಯಕ್ಷ ರಂಗಸ್ವಾಮಿ, ಕಾರ್ಯದರ್ಶಿ ಬಸವರಾಜು, ಶಿಕ್ಷಕರುಗಳಾದ ದೊಡ್ಡಮನೆ ಕೀರ್ತಿ, ವೈ.ಜಿ.ಕೃಷ್ಣ, ನರಸಿಂಹಮೂರ್ತಿ, ನಾಗೇಶ್, ಸಿಬ್ಬಂದಿಗಳಾದ ರಮೇಶ್, ತಿಲೋತ್ತಮನಾಯಕ್, ಅನಿಲ್, ರೂಪ, ಪಾರ್ವತಮ್ಮ, ಕಲಾವತಿ  ಮತ್ತು ಪೋಷಕರು ಉಪಸ್ಥಿತರಿದ್ದರು.

    ವರದಿ: ಸುರೇಶ್ ಬಾಬು ಎಂ.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5

    admin
    • Website

    Related Posts

    ತುರುವೇಕೆರೆ: ಸಮುದಾಯ ಸಂಘಟಕ ಹುದ್ದೆಗೆ ಅರ್ಜಿ ಆಹ್ವಾನ

    September 21, 2026

    ಸಾಂವಿಧಾನಿಕ ಜವಾಬ್ದಾರಿಯಿಂದ ಶಾಸಕರ ಪಲಾಯನ: ತುರುವೇಕೆರೆಯಲ್ಲಿ ಕಾಂಗ್ರೆಸ್ ಮುಖಂಡರ ಆರೋಪ

    September 14, 2026

    ತುರುವೇಕೆರೆ: 25 ಕೋಟಿ ರೂ. ಕಾಮಗಾರಿಗಳ ತನಿಖೆಗೆ ಆಗ್ರಹ: ಕಾಂಗ್ರೆಸ್ ಮುಖಂಡರಿಂದ ಉಪವಾಸ ಸತ್ಯಾಗ್ರಹ

    September 8, 2026

    Leave A Reply Cancel Reply

    Our Picks

    ಕಾವೇರಿ ಜಲ ವಿವಾದ: CWMA ಆದೇಶ ಪಾಲನೆ ಮುಂದುವರಿಸಲು ಕರ್ನಾಟಕಕ್ಕೆ ಸುಪ್ರೀಂಕೋರ್ಟ್ ಸೂಚನೆ

    September 24, 2026

    ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಸ್ವೀಕರಿಸಿದ ಹಿರಿಯ ನಟ ಅನಂತ್ ನಾಗ್

    September 23, 2026

    ಗಣೇಶೋತ್ಸವ ಅನ್ನದಾನದ ವೇಳೆ ಕುದಿಯುತ್ತಿದ್ದ ಸಾಂಬಾರ್‌ ಪಾತ್ರೆಗೆ ಬಿದ್ದು ಮಹಿಳೆ ದಾರುಣ ಸಾವು

    September 22, 2026

    ನೇಪಾಳ ಪ್ರವಾಹ: ತುಮಕೂರು ಮೂಲದ ಇಬ್ಬರು ನಾಪತ್ತೆ

    September 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    CEC ಜ್ಞಾನೇಶ್ ಕುಮಾರ್‌ರನ್ನು ತಕ್ಷಣ ವಜಾಗೊಳಿಸಿ, ಕ್ರಿಮಿನಲ್ ಕೇಸ್ ದಾಖಲಿಸಿ: ರಾಷ್ಟ್ರಪತಿಗೆ ಸಿದ್ದರಾಮಯ್ಯ ಆಗ್ರಹ

    September 26, 2026

    ಬೆಂಗಳೂರು: ಭಾರತೀಯ ಚುನಾವಣಾ ಆಯೋಗದ (ECI) ಕಾರ್ಯವೈಖರಿ ಮತ್ತು ಸ್ವಾಯತ್ತತೆಯ ಕುರಿತು ಗಂಭೀರ ಕಳವಳ ವ್ಯಕ್ತಪಡಿಸಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ,…

    ಸಾರ್ವಜನಿಕ ಸ್ಥಳದಲ್ಲಿ ಮೂತ್ರ ವಿಸರ್ಜನೆ ಆರೋಪ: ಬಿಜೆಪಿ ಶಾಸಕ ಮುನಿರತ್ನಗೆ ಯುವಕನಿಂದ ತರಾಟೆ!

    September 26, 2026

    ವಿರಾಜಪೇಟೆ ಗಣೇಶ ವಿಸರ್ಜನೆ ವೇಳೆ ಕರೆಂಟ್ ಶಾಕ್: ಐವರಿಗೆ ಗಾಯ, ಇಬ್ಬರ ಸ್ಥಿತಿ ಗಂಭೀರ; ತಪ್ಪಿದ ದೊಡ್ಡ ಅನಾಹುತ!

    September 26, 2026

    ಕಚೇರಿಗೆ ತಡವಾಗಿ ಬಂದ ಅಧಿಕಾರಿಗಳಿಗೆ ಗೇಟ್ ಬಂದ್: ಜಿಪಂ ಸಿಇಒ ದಿಢೀರ್ ಭೇಟಿ, ಒಂದು ದಿನದ ಸಂಬಳ ಕಟ್ ಎಚ್ಚರಿಕೆ!

    September 26, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.